Prajwal Revanna: ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಮೇ 3ಕ್ಕೆ ರಿಟರ್ನ್
ಹಾಸನ, ಮೇ, 01: ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ವಿಮಾನದಲ್ಲಿ ಜರ್ಮಿನಿಗೆ ಹಾರಿದ್ದರು. ಇನ್ನು ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಹಿನ್ನೆಲೆ ಅವರು ಮೇ 3ರಂದು ಭಾರತಕ್ವಾಕೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ಅವರು ಸದ್ಯ ಜರ್ಮಿನಿಯಲ್ಲೇ ಇದ್ದು, ಅವರು ವಿದೇಶಕ್ಕೆ ತೆರಳುವ ಮುನ್ನವೇ ಫ್ರಾಂಕ್‌ಫರ್ಟ್-ಬೆಂಗಳೂರಿಗೆ ರಿಟರ್ನ್ (ಲುಫ್ತನ್ಸಾ ಫ್ಲೈಟ್) ಟಿಕೆಟ್ ಬುಕ್ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮೇ 3ರಂದು ಮಧ್ಯಾಹ್ನ 1:30ಕ್ಕೆ ಫ್ರಾಂಕ್‌ಫರ್ಟ್‌ನಿಂದ ವಿಮಾನ ಹೊರಲಿದ್ದು, ರಾತ್ರಿ 1ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ತಿಳಿದುಬಂದಿದೆ.
ಕಾಂಗ್ರಾಸ್ ವಿರುದ್ಧ ಮೋದಿ ವಾಗ್ದಾಳಿ: ಈಗಾಗಲೇ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿದೆ. ಈ ಹಿನ್ನೆಲೆ ಇಂದು (ಏಪ್ರಿಲ್ 28) ಪ್ರಧಾನಿ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಿದ್ದಾರೆ. ಹಾಗಾದರೆ ಈ ವೇಳೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಲಾಯಿತು. ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟ ನಡೆಯಿತು. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ, ಮಹಾರಾಜರ ಜಮೀನು ಕಸಿದುಕೊಂಡರು. ಕಾಂಗ್ರೆಸ್ ವೋಟ್ ಬ್ಯಾಂಕ್‌ಗಾಗಿ ಏನು ಬೇಕಾದರೂ ಮಾಡುತ್ತದೆ ಎಂದು ಗುಡುಗಿದರು. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಬಂದ್ ಆಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು. ಇನ್ನು ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಕರ್ನಾಟಕದಲ್ಲಿ ಹೋದಲ್ಲೆಲ್ಲ ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕೆಂದು ಬಯಸುತ್ತಿದ್ದಾರೆ ಎಂದರು.
ನಾವು ಛತ್ರಪತಿ ಶಿವಾಜಿ, ಭಗವಾನ್ ಬಸವೇಶ್ವರ ಅವರ ಅನುಯಾಯಿಗಳು. ಶಿವಾಜಿ ಪ್ರಜೆಗಳಿಗಾಗಿ ಸಂಘರ್ಷ ಮಾಡಿದವರು. ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಸಾರಿದವರು. ಭಾರತ ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಮೋದಿ ಹೇಳಿದರು.
ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಬೇಕು. ಭಾರತ ಮತ್ತಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು.
ಕೊರೋನಾ ಸಂದರ್ಭದಲ್ಲಿ ವ್ಯಾಕ್ಸಿನ್‌ಗೂ ಕಾಂಗ್ರೆಸ್ ವಿರೋಧಿಸಿತ್ತು, ಇದು ಬಿಜೆಪಿ ವ್ಯಾಕ್ಸಿನ್ ಎಂದರು. ಇವಿಎಂಗೂ ವಿರೋಧಿಸಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವಾಗಿದೆ. ದೇಶಕ್ಕೆ ಅವಮಾನವಾಗುವ ರೀತಿಯಲ್ಲಿ ಮಾತನ್ನಾಡುವ ಮೂಲಕ ಕಾಂಗ್ರೆಸ್ ರಾಷ್ಟ್ರ ತಲೆ ತಗ್ಗಿಸುವಂತೆ ಮಾಡುತ್ತಿದೆ. ಇವಿಎಂ ಬಗ್ಗೆ ಸುಳ್ಳು ಹೇಳುವ ಮೂಲಕ ಲೋಕತಂತ್ರವನ್ನು ಬರ್ಬಾದ್ ಮಾಡಲು ಮುಂದಾಗಿದೆ ಎಂದರು.












Click it and Unblock the Notifications