ಹಾಸನ: ಬಸ್ ಗೆ ಬೆಂಕಿ, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್
ಹಾಸನ, ನವೆಂಬರ್ 22: ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾಸನ ಜಿಲ್ಲೆಯ ಕೆಂಚಟಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ತಡರಾತ್ರಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ ನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ.

ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ತಕ್ಷಣವೇ ಚಾಲಕರ ಗಮನಕ್ಕೆ ಬಂದಿದೆ. ಕೂಡಲೇ ಅವರು ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಘಟನೆ ಸಂಬಂಧಿಸಿದಂತೆ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾಂತ್ರಿಕ ದೋಷದಿಂದ ಬೆಂಕಿ ಅಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications