ಗೋಹತ್ಯೆ ವಿರೋಧಿಸಿ ಪ್ರತಿಭಟನೆ; ಸಕಲೇಶಪುರದಲ್ಲಿ ನಿಷೇಧಾಜ್ಞೆ ಜಾರಿ
ಹಾಸನ, ನವೆಂಬರ್ 11: ಗೋಹತ್ಯೆ ಹಾಗೂ ಗೋಮಾಂಸ ಮಾರಾಟವನ್ನು ನಿಷೇಧಿಸುವಂತೆ ಒತ್ತಾಯಿಸಿ ವಿಎಚ್ ಪಿ, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿ 12 ಗಂಟೆಯವರೆಗೆ ಸಕಲೇಶಪುರ ಪಟ್ಟಣದ ಮೂರು ಕಡೆ ನಿಷೇಧಾಜ್ಞೆ ಜಾರಿಯಾಗಿದೆ.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಯಿಂದ ಕುಶಾಲನಗರ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಗಿರೀಶ್ ಆರ್. ನಂದನ್ ನಿಷೇಧಾಜ್ಞೆಯನ್ನು ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಸಕಲೇಶಪುರ ಪಟ್ಟಣದ ಕುಶಾಲನಗರ, ಪ್ರೇಮನಗರ ಹಾಗೂ ಅಜಾದ್ ರಸ್ತೆಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಸಕಲೇಶಪುರದಲ್ಲಿ ಗೋ ಹತ್ಯೆ ನಡೆಸಿ ಚರಂಡಿಗಳಲ್ಲಿ ತ್ಯಾಜ್ಯ ಹರಿಸುತ್ತಿದ್ದಾರೆ. ಗೋಮಾಂಸ ಮಾರಾಟವೂ ಅಲ್ಲಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಅವಕಾಶ ಕೊಡುವಂತೆ ಬಜರಂಗದಳ ಮನವಿ ಮಾಡಲಾಗಿತ್ತು.

ಆದರೆ ಜಿಲ್ಲಾಡಳಿತ ಪ್ರತಿಭಟನೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆದಂತೆ ತಡೆಯಲು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.












Click it and Unblock the Notifications