ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಹತ್ಯೆ ವಿರೋಧಿಸಿ ಪ್ರತಿಭಟನೆ; ಸಕಲೇಶಪುರದಲ್ಲಿ ನಿಷೇಧಾಜ್ಞೆ ಜಾರಿ

By Lekhaka
|
Google Oneindia Kannada News

ಹಾಸನ, ನವೆಂಬರ್ 11: ಗೋಹತ್ಯೆ ಹಾಗೂ ಗೋಮಾಂಸ ಮಾರಾಟವನ್ನು ನಿಷೇಧಿಸುವಂತೆ ಒತ್ತಾಯಿಸಿ ವಿಎಚ್ ಪಿ, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿ 12 ಗಂಟೆಯವರೆಗೆ ಸಕಲೇಶಪುರ ಪಟ್ಟಣದ ಮೂರು ಕಡೆ ನಿಷೇಧಾಜ್ಞೆ ಜಾರಿಯಾಗಿದೆ.

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಯಿಂದ ಕುಶಾಲನಗರ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಗಿರೀಶ್ ಆರ್. ನಂದನ್ ನಿಷೇಧಾಜ್ಞೆಯನ್ನು ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

 ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಸಕಲೇಶಪುರ ಪಟ್ಟಣದ ಕುಶಾಲನಗರ, ಪ್ರೇಮನಗರ ಹಾಗೂ ಅಜಾದ್ ರಸ್ತೆಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಸಕಲೇಶಪುರದಲ್ಲಿ ಗೋ ಹತ್ಯೆ ನಡೆಸಿ ಚರಂಡಿಗಳಲ್ಲಿ ತ್ಯಾಜ್ಯ ಹರಿಸುತ್ತಿದ್ದಾರೆ. ಗೋಮಾಂಸ ಮಾರಾಟವೂ ಅಲ್ಲಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಅವಕಾಶ ಕೊಡುವಂತೆ ಬಜರಂಗದಳ ಮನವಿ ಮಾಡಲಾಗಿತ್ತು.

Hassan: Prohibition In Sakaleshpur Ahead Of Protests Against Cow Slaughter

Recommended Video

ಅಬ್ಬಾ ಇನ್ನೂ ಕೆಲವೇ ದಿನ ಭಾರತಕ್ಕೆ ಕೊರೋನ ಲಸಿಕೆ ! | Sputnik v Covid-19 Vaccine | Oneindia Kannada

ಆದರೆ ಜಿಲ್ಲಾಡಳಿತ ಪ್ರತಿಭಟನೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆದಂತೆ ತಡೆಯಲು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

English summary
Prohibition order issued in three places of Sakaleshpura ahead of protests by bhajarangadal against cow slaughter,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X