ಬೇಲೂರು ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ: ಸ್ಥಳದಲ್ಲಿ ಬಿಗುವಿನ ವಾತಾವರಣ
ಹಾಸನ, ಮಾರ್ಚ್ 28: ರಾಜ್ಯದ ಐತಿಹಾಸಿಕ ದೇವಾಲಯ ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಏಪ್ರಿಲ್ 4 ಮತ್ತು ಏಪ್ರಿಲ್ 5ರಂದು ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವ ನಡೆಯಲಿದ್ದು, ಈ ವೇಳೆ ಕುರಾನ್ ಪಠಣ ಮಾಡದಂತೆ ಪಟ್ಟುಹಿಡಿದ್ದಾರೆ.
ಈ ಸಂಬಂಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಮಂಗಳವಾರ ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬಂದ ಮುಸ್ಲಿಂ ಯುವಕ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರು ಯುವಕನ್ನು ಅಟ್ಟಾಹಿಸಿದ್ದಾರೆ.

ಈ ವೇಳೆ ಬಜರಂಗದಳ ಕಾರ್ಯಕರ್ತರು ಹಾಗೂ ಮುಸ್ಲಿಂ ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.
ಇನ್ನು ಬೇಲೂರು ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವಗಳಿಗೆ ತೇರಿನ ದಿನ ಕುರಾನ್ ಪಠಣೆ ಮಾಡುವ ಆಚರಣೆ ಇದ್ದು, ಪ್ರತಿ ವರ್ಷ ರಥೋತ್ಸವದ ಸಂದರ್ಭದಲ್ಲಿ ವಿಚಾರ ಮುನ್ನಲೆಗೆ ಬರುತ್ತದೆ. ಆದರೆ ಈ ವರ್ಷ ಶ್ರೀ ಚನ್ನಕೇಶವ ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ರಾಜ್ಯದ ಐತಿಹಾಸಿಕ ದೇವಾಲಯ ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಏಪ್ರಿಲ್ 4 ಮತ್ತು ಏಪ್ರಿಲ್ 5ರಂದು ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವ ನಡೆಯಲಿದ್ದು, ಈ ವೇಳೆ ಕುರಾನ್ ಪಠಣ ಮಾಡದಂತೆ ಪಟ್ಟುಹಿಡಿದ್ದಾರೆ.

ಈ ಸಂಬಂಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಮಂಗಳವಾರ ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬಂದ ಮುಸ್ಲಿಂ ಯುವಕ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರು ಯುವಕನ್ನು ಅಟ್ಟಾಹಿಸಿದ್ದಾರೆ.
ಈ ವೇಳೆ ಬಜರಂಗದಳ ಕಾರ್ಯಕರ್ತರು ಹಾಗೂ ಮುಸ್ಲಿಂ ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.
ಇನ್ನು ಬೇಲೂರು ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವಗಳಿಗೆ ತೇರಿನ ದಿನ ಕುರಾನ್ ಪಠಣೆ ಮಾಡುವ ಆಚರಣೆ ಇದ್ದು, ಪ್ರತಿ ವರ್ಷ ರಥೋತ್ಸವದ ಸಂದರ್ಭದಲ್ಲಿ ವಿಚಾರ ಮುನ್ನಲೆಗೆ ಬರುತ್ತದೆ. ಆದರೆ ಈ ವರ್ಷ ಶ್ರೀ ಚನ್ನಕೇಶವ ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಪ್ರತಿಭಟನಾ ನಿರತ ಭಜರಂಗದಳ, ವಿಶ್ವ ಹಿಂದೂ ಪರಿಷತ್, ರಾಷ್ಟ್ರಧರ್ಮ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು, ಏಪ್ರಿಲ್ 4ರಂದು ರಥೋತ್ಸವವಿದ್ದು, ಏಪ್ರಿಲ್3 ರೊಳಗೆ ಕುರಾನ್ ಪಠಣ ರದ್ದಾದ ಬಗ್ಗೆ ಸರ್ಕಾರ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು. ಈ ಬಗ್ಗೆ ಪ್ರತಿಭಟನಾ ಸ್ಥಳಕ್ಕೆ ಬಂದ ತಹಶೀಲ್ದಾರ್‌ರ ಬಳಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಬಳಿಕ ಪ್ರತಿಭಟನಾ ಸ್ಥಳದಿಂದ ಚನ್ನಕೇಶವ ದೇವಾಲಯದವರೆಗೂ ಮೆರವಣಿಗೆ ನಡೆಸಿ, ದೇವಾಲಯದ ಮುಂಭಾಗವೂ ಪ್ರತಿಭಟನೆ ನಡೆಸಿ, ಕರಾನ್ ಪಠಣ ರದ್ದಿಗೆ ಆಗ್ರಹಿಸಿದರು.
ಪ್ರತೀ ವರ್ಷವೂ ಐತಿಹಾಸಿಕ ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವದವ ವೇಳೆ ಮುಸ್ಲಿಂ ಮುಖಂಡರಿಂದ ಕರಾನ್ ಪಠಣವನ್ನು ಮಾಡಿಸಲಾಗುತ್ತದೆ. ಕಳೆದ ವರ್ಷವೂ ಕರಾನ್ ಪಠಣ ಮಾಡದಂತೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರು. ಈ ವರ್ಷವೂ ಕೂಡಾ ಅದೇ ಒತ್ತಾಯನ್ನು ಹಿಂದೂಪರ ಸಂಘಟನೆಗಳು ಮಾಡುತ್ತಿದ್ದಾರೆ.
ಕರಾನ್ ಪಠಣ ಮಾಡುವುದು ಹಿಂದಿನಿಂದಲೂ ನಡೆದು ಬಂದಿಲ್ಲ, ಇದೊಂದು ಅನಿಷ್ಟ ಪದ್ಧತಿ, ಕೂಡಲೇ ಇದನ್ನು ನಿಲ್ಲಿಸ ಬೇಕು ಎಂದು
ಹಿಂದೂಪರ ಸಂಘಟನೆಗಳು ಒತ್ತಾಯ ಮಾಡುತ್ತಿದ್ದಾರೆ. ಏಪ್ರಿಲ್ 4 ಹಾಗೂ 5ರಂದು ನಡೆಯುವ ಬೇಲೂರು ಚನ್ನಕೇಶವನ ರಥೋತ್ಸವಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಆದರೆ ಇತ್ತ ಸ್ಥಳೀಯ ಶಾಸಕರು ಸಂಪ್ರದಾಯ ಬದ್ಧವಾಗಿ ಹಿಂದಿನಿಂದ ಏನು ನಡೆದುಕೊಂಡು ಬಂದಿದೆಯೋ ಅದು ಹಾಗೆ ನಡೆದುಕೊಂಡು ಹೋಗುತ್ತದೆ ಎಂದು ಹೇಳಿರುವುದು ಹಿಂದೂ ಪರ ಸಂಘಟನೆಗಳ ಕಣ್ಣನ್ನು ಕೆಂಪಾಗಿಸಿರುವುದು ಸುಳ್ಳಲ್ಲ ಎನ್ನುವುದು ಹಲವರ ಅಭಿಪ್ರಾಯ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ

Click it and Unblock the Notifications