ಹಾಸನ : ಇಂದಿರಾ ಕ್ಯಾಂಟೀನ್‌ಲ್ಲಿ ಉಪ್ಪಿಟ್ಟು ಸವಿದ ರಾಹುಲ್!
ಹಾಸನ, ಮಾರ್ಚ್ 21 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಸನದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಕರ್ನಾಟಕದಲ್ಲಿ 2017ರ ಆಗಸ್ಟ್‌ನಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಚಾಲನೆಯನ್ನು ಸಹ ರಾಹುಲ್ ಗಾಂಧಿ ಅವರು ನೀಡಿದ್ದರು.
ಬುಧವಾರ ಸಂಜೆ ಹಾಸನಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ಸಂತೆಪೇಟೆ ಸರ್ಕಲ್‌ನಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ರಾಹುಲ್ ಗಾಂಧಿ ಉಪ್ಪಿಟ್ಟು, ಕೇಸರಿಬಾತ್ ಸವಿದರು. ಈ ಸಂದರ್ಭದಲ್ಲಿ ಸಚಿವ ಎ.ಮಂಜು, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಜೊತೆಗಿದ್ದರು.
ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಿದರು. ಜನಾರ್ಶೀವಾದ ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ರಾಹುಲ್ ಚಾಲನೆ ನೀಡಿದ್ದರು : 2017ರ ಆಗಸ್ಟ್‌ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಚಾಲನೆ ನೀಡಿದ್ದರು.
In Pics: ಕರ್ನಾಟಕದಲ್ಲಿ ರಾಹುಲ್ ಗಾಂಧಿ ಮಿಂಚಿನ ಸಂಚಾರ
ಬೆಂಗಳೂರಿನ ಕನಕನಪಾಳ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ್ದರು. ಮೊದಲು ಬೆಂಗಳೂರಿನಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್‌ಅನ್ನು ರಾಜ್ಯ ಸರ್ಕಾರ ಈಗ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಿಗೆ ವಿಸ್ತರಣೆ ಮಾಡಿದೆ.












Click it and Unblock the Notifications