ಯಡಕುಮರಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 16 ಸಿಬ್ಬಂದಿ ರಕ್ಷಣೆ
ಹಾಸನ, ಆಗಸ್ಟ್ 17 : ಭಾರಿ ಮಳೆಯಿಂದಾಗಿ ಸಕಲೇಶಪುರದ ಯಡಕುಮರಿ ರೈಲು ನಿಲ್ದಾಣದಲ್ಲಿ ಸಿಲುಕಿದ್ದ 16 ರೈಲ್ವೆ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರು ರೈಲ್ವೆ ವಿಭಾಗದ ವ್ಯವಸ್ಥಾಪಕರು ಸಿಬ್ಬಂದಿ ರಕ್ಷಣೆ ಮಾಡುವಂತೆ ಕೋರಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪತ್ರ ಬರೆದಿದ್ದರು.
ಸಕಲೇಶಪುರದ ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲಾ ಸಿಬ್ಬಂದಿಗಳನ್ನು ರಕ್ಷಣೆ ಮಾಡಿ ಸಕಲೇಶಪುರಕ್ಕೆ ಕರೆತರಲಾಗಿದೆ. ಒಟ್ಟು 16 ಸಿಬ್ಬಂದಿಗಳು ರೈಲು ನಿಲ್ದಾಣದಲ್ಲಿ ಸಿಲುಕಿದ್ದರು.

ಮಳೆಯಿಂದಾಗಿ ಸಕಲೇಶಪುರದ ಯಡಕುಮರಿ ರೈಲು ನಿಲ್ದಾಣದ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಬದಲಾವಣೆ ಮಾಡಿದ್ದರಿಂದ, ಈ ರೈಲು ನಿಲ್ದಾಣಕ್ಕೆ ರೈಲು ಸೇವೆಯೂ ಸ್ಥಗಿತಗೊಂಡಿದೆ.
ಮೈಸೂರು ರೈಲ್ವೆ ವಿಭಾಗದ ವ್ಯವಸ್ಥಾಪಕ ಎ.ಕೆ.ಸಿನ್ಹಾ ಅವರು ಗುರುವಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪತ್ರ ಬರೆದಿದ್ದರು. ಯಡಕುಮರಿ ರೈಲು ನಿಲ್ದಾಣದ ದುಸ್ಥಿತಿಯಲ್ಲಿದೆ. ಅಲ್ಲಿ 16 ಸಿಬ್ಬಂದಿಗಳು ಸಿಲುಕಿದ್ದಾರೆ. ಅವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದ್ದರು.
ಯಡಕುಮರಿಯಲ್ಲಿ ಭೂ ಕುಸಿತದಿಂದಾಗಿ ಸಿಕ್ಕಿಹಾಕಿಕೊಂಡಿದ್ದ ರೈಲ್ವೆ ಸಿಬ್ಬಂದಿಯನ್ನು ರಕ್ಷಿಸಲಾಯಿತು. pic.twitter.com/usSkqYgLLC
— Karnataka Varthe (@KarnatakaVarthe) August 17, 2018
ಯಡಕುಮರಿ ರೈಲು ನಿಲ್ದಾಣದ 50 ಮತ್ತು 100 ಮೀಟರ್ ಅಂತರದಲ್ಲಿ ಎರಡೂ ಕಡೆ ಗುಡ್ಡ ಕುಸಿತ ಉಂಟಾಗಿದೆ. ಆದ್ದರಿಂದ, ಸಿಬ್ಬಂದಿ ಅಲ್ಲಿ ಸಿಲುಕಿದ್ದಾರೆ. ಅವರನ್ನು ಅಲ್ಲಿಂದ ವಾಪಸ್ ತರಲು ಹೆಲಿಕಾಪ್ಟರ್ ಬಳಕೆ ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ವಿವರಿಸಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications