Arsikere Road Accident : ಹಾಸನ; ಸರಣಿ ಅಪಘಾತ, 9 ಜನರು ಸಾವು

ಹಾಸನ, ಅಕ್ಟೋಬರ್ 16; ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಹಾಸನದಲ್ಲಿ ಭೀಕರ ಸರಣಿ ರಸ್ತೆ ಅಪಘಾತ ನಡೆದಿದೆ. ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದಾರೆ. 12 ಜನರು ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ.‌ ಹಳ್ಳಿಕೆರೆ ಗ್ರಾಮದ 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು.

accident

ಊರಿಗೆ ತಲುಪಲು ಸುಮಾರು ಮೂರು ನಿಮಿಷವಿರುವಾಗಲೇ ಅಪಘಾತ ಸಂಭವಿಸಿದೆ. ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಂಪೋ ಟ್ರಾವೆಲ‌ರ್ ವಾಹನದಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿದ್ದರು. ಮಕ್ಕಳು ಸೇರಿದಂತೆ ಪುರುಷರು ಮುಡಿ ನೀಡಿ ಶ್ರೀ ಮಂಜುನಾಥನ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು.

ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರ ಕಾಮಗಾರಿ ನಡೆಯುತ್ತಿದ್ದು, ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಯಮಸ್ವರೂಪಿ ಹಾಲಿನ ಲಾರಿ ಚಾಲಕನಿಗೆ ತಿರುವು ಗೊತ್ತಾಗದೆ ಎರಡು ವಾಹನಗಳು ಬರುತ್ತಿದ್ದ ಕಡೆಗೆ ಏಕಮುಖವಾಗಿ ಸಂಚಾರ ನಡೆಸಿದ್ದಾನೆ.

bus

ಈ ವೇಳೆ ವೇಗವಾಗಿದ್ದ ಟಿಟಿ ವಾಹನ ಹಾಲಿನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಇದೇ ವಾಹನದ ಹಿಂಬದಿಯಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ.‌

ಈ ಸರಣಿ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 12 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 10 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ಟಿಟಿ ವಾಹನವನ್ನು ತೆರುವುಗೊಳಿಸಲಾಯಿತು.‌

ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಸಾವನ್ನಪ್ಪಿದ್ದಾರೆ. ಒಂದೇ ಗ್ರಾಮದ ನಾಲ್ವರು ಮಕ್ಕಳು, ಮೂವರು ಮಹಿಳೆಯರು, ಓರ್ವ ಪುರುಷ ಸಾವನ್ನಪ್ಪಿದ್ದು, ಮೃತದೇಹಗಳು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇವೆ.

ಅಪಘಾತ ನಡೆದ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸರ್ಕಾರಿ ಬಸ್‌ನಲ್ಲಿದ್ದ ಜಾವಗಲ್ ಮೂಲದ ಯತೀಶ್ ಮಾತನಾಡಿದ್ದು, "ಹಾಲಿನ ಲಾರಿ ಚಾಲಕನದ್ದೇ ಸಂಪೂರ್ಣ ತಪ್ಪು. ಆತ ರಾಂಗ್ ರೂಟ್‌ನಲ್ಲಿ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಟೆಂಪೋಗೆ ಹಿಂದೆ, ಮುಂದೆ ಎರಡೂ ಭಾಗಕ್ಕೂ ವಾಹನಗಳು ಡಿಕ್ಕಿಯಾಗಿದೆ" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+