ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ

Posted By:
Subscribe to Oneindia Kannada

ಹಾಸನ, ಜುಲೈ 14: ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ರೋಹಿಣಿ ಅವರನ್ನು ಸ್ವಾಗತಿಸಿದರು. ಈ ವೇಳೆ ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

ಇದೇ ವೇಳೆ ಮಾತನಾಡಿದ ರೋಹಿಣಿ, ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿಯ ಸಮಸ್ಯೆ ಇರಲಿದೆ. ಆ ಎಲ್ಲಾ ಸಮಸ್ಯೆಗಳನ್ನು ಮನಗಂಡು, ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡುವುದಾಗಿ ಹೇಳಿದರು.

Rohini Sindhuri takes charge as Hassan DC

ಕಾನೂನು ಪ್ರಕಾರ, ಜನಪರವಾದ ಆಡಳಿತ ನೀಡಿದರೆ ಯಾವುದೇ ಸಮಸ್ಯೆ ಸೃಷ್ಟಿಯಾಗದು. ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ. ಒಳ್ಳೆಯ ಆಡಳಿತ ನೀಡಿದರೆ, ರಾಜಕೀಯದವರಿಗೂ ತಿಳಿಯಲಿದೆ ಅನ್ನೋ ವಿಶ್ವಾಸ ನನ್ನದು ಎಂದರು.

ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ -ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಲಕ್ಷಾಂತರ ಶೌಚಾಲಯ ನಿರ್ಮಾಣ ಮಾಡಿ ಸೈ ಎನಿಸಿಕೊಂಡರು. 2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Rohini Sindhuri an IAS officer of the 2009 batch, took charge as Deputy Commissioner of Hassan on Friday(July 14)
Please Wait while comments are loading...