ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟಿನಿಂದ ನೋಟಿಸ್ ಏಕೆ?

|
Google Oneindia Kannada News

ಬೆಂಗಳೂರು, ಜೂನ್ 4: ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ಜೆಡಿಎಸ್ ನ ಯುವ ಮುಖಂಡ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಕಾನೂನು ಹೋರಾಟ ಮುಂದುವರೆಸಲು ಸಜ್ಜಾಗಬೇಕಿದೆ.

ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸೋತ ಅಭ್ಯರ್ಥಿ ಬಿಜೆಪಿಯ ಅರಕಲಗೂಡು ಮಂಜು ಅವರು ಸಲ್ಲಿಸಿದ್ದ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದಾದ ಬಳಿಕ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರ

ಇದೇ ರೀತಿ ಇದಲ್ಲದೆ, ವಕೀಲ ಜಿ.ದೇವರಾಜೇಗೌಡ ಅವರು ಕೂಡಾ ಪ್ರತ್ಯೇಕವಾಗಿ ದೂರು ದಾಖಲಿಸಿದ್ದರು. ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಅರ್ಜಿಯನ್ನು ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕರಿಸಲಾಗಿದೆ ಎಂದು ಆದೇಶಿಸಿತ್ತು. ಆದರೆ, ದೇವರಾಜೇಗೌಡ ಅವರು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಿದ ಅರ್ಜಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ಮುಖ್ಯ ನ್ಯಾ. ಎಸ್ಎ ಬೊಬ್ಡೆ ಹಾಗೂ ಎಎಸ್ ಬೋಪಣ್ಣ ಅವರು ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯೆ ನೀಡಲು ಸೂಚಿಸಿದೆ.

ಅಕ್ರಮವಾಗಿ ಆಸ್ತಿ ಗಳಿಕೆ ಆರೋಪ

ಅಕ್ರಮವಾಗಿ ಆಸ್ತಿ ಗಳಿಕೆ ಆರೋಪ

"ಪ್ರಜ್ವಲ್​ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. ಹಲವು ಕಂಪೆನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಅದನ್ನು ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ. ಸುಮಾರು 6 ಕೋಟಿ ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ. ಈ ಬಗ್ಗೆ ಈ ಮುಂಚೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿತ್ತು" ಎಂದು ಮಂಜು ಹಾಗೂ ವಕೀಲ ದೇವರಾಜು ಆರೋಪಿಸಿದ್ದರು. ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯಕ್ಕೂ ದೂರು ಸಲ್ಲಿಸಿ ತನಿಖೆಗೆ ಆಗ್ರಹಿಸಿದ್ದರು. ಅಂದಿನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಕೂಡಾ ಇದು ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತವಾದ ಪ್ರಕರಣ ಎಂದು ವರದಿ ನೀಡಿದ್ದರು. ನಂತರ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು.

ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿತ್ತು

ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿತ್ತು

ಸಂಸದ ಪ್ರಜ್ವಲ್ ರೇವಣ್ಣ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕಿದ್ದ ಕಂಟಕ ದೂರಾಗಿದೆ. ವಕೀಲ ದೇವರಾಜ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಕೋರಿದ್ದ ದೇವರಾಜ್, ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕಚೇರಿ ಅರ್ಜಿಯಲ್ಲಿ ಹಲವು ಲೋಪದೋಷ ತೋರಿಸಿತ್ತು. ಆದರೆ, ಕಾಲಮಿತಿಯಲ್ಲಿ ಕಚೇರಿ ಆಕ್ಷೇಪಣೆ ಸರಿಪಡಿಸಿರಲಿಲ್ಲ. ಈ ಬಗ್ಗೆ ಪ್ರಜ್ವಲ್ ಪರ ವಕೀಲ ಕೇಶವ ರೆಡ್ಡಿ ವಾದಿಸಿ ತಕರಾರು ಅರ್ಜಿ ಕ್ರಮಬದ್ದವಾಗಿಲ್ಲವೆಂದು ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿ ನ್ಯಾ.ಜಾನ್ ಮೈಕಲ್ ಕುನ್ಹಾ ರವರ ಪೀಠ ಮಹತ್ವದ ಆದೇಶ ನೀಡಿದೆ. ಈ ಹಿಂದೆ ಎ ಮಂಜು ಅರ್ಜಿ ಕೂಡಾ ವಜಾಗೊಂಡಿತ್ತು.

ಲೋಕಸಭೆ ಅಭ್ಯರ್ಥಿ ನಾಮಪತ್ರದ ಬಗ್ಗೆ ಪ್ರಶ್ನೆ

ಲೋಕಸಭೆ ಅಭ್ಯರ್ಥಿ ನಾಮಪತ್ರದ ಬಗ್ಗೆ ಪ್ರಶ್ನೆ

ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕಾ ಕನ್ವೆನ್ಶನ್ ಹಾಲ್‌ಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆಯೋಗಕ್ಕೆ ನೀಡಿರುವ ಮಾಹಿತಿಯಲ್ಲಿ ವಾಣಿಜ್ಯ ಕಟ್ಟಡಗಳನ್ನು ತಾವು ಹೊಂದಿಲ್ಲವೆಂದು ರೇವಣ್ಣ ಹೇಳಿದ್ದಾರೆ. ಆದರೆ ಚೆನ್ನಕಾಂಬಾ ಕನ್ವೆನ್ಶನ್ ಹಾಲ್‌ ರೇವಣ್ಣ ಅವರದ್ದೇ ಆಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ದೇವೇಗೌಡ ಅವರ ನಾಮಪತ್ರದಲ್ಲಿ ಪ್ರಜ್ವಲ್ ರೇವಣ್ಣಗೆ 23 ಲಕ್ಷ ಕೊಟ್ಟಿರುವುದಾಗಿ ನಮೂದು ಮಾಡಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ನಾಮಪತ್ರದಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖಗಳು ಇಲ್ಲ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಕಿರಿಯ ಸಂಸದರಲ್ಲಿ ಪ್ರಜ್ವಲ್ ಕೂಡ ಒಬ್ಬರು

ಕಿರಿಯ ಸಂಸದರಲ್ಲಿ ಪ್ರಜ್ವಲ್ ಕೂಡ ಒಬ್ಬರು

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎ.ಮಂಜು ಸೋಲು ಕಂಡಿದ್ದರು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಎ. ಮಂಜು ಹೈಕೋರ್ಟ್ ಮೊರೆ ಹೋಗಿದ್ದರು. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಎ.ಮಂಜು ವಿರುದ್ಧ 1.40 ಲಕ್ಷ ಮತಗಳ ಅಂತರದ ಗೆಲುವು ಸಾಧಿಸುವ ಮೂಲಕ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸಂಸತ್ ಪ್ರವೇಶಿಸಿದ್ದಾರೆ. ಲೋಕಸಭೆಗೆ ಪ್ರವೇಶಿಸುತ್ತಿರುವ ಅತಿ ಕಿರಿಯ ಸಂಸದರಲ್ಲಿ ಪ್ರಜ್ವಲ್ ಕೂಡ ಒಬ್ಬರು.

English summary
The Supreme Court on Wednesday sought response from Prajwal Revanna, the grandson of former Prime Minister HD Deve Gowda, on a plea challenging his election in 2019 from Hassan Lok Sabha constituency as a joint candidate of the Janata Dal Secular and the Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X