ಹಾಸನದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಶಾಕ್ ಕೊಟ್ಟ ಬಿಜೆಪಿ

Recommended Video

      ಜೆಡಿಎಸ್-ಕಾಂಗ್ರೆಸ್ ಪಕ್ಷಕ್ಕೆ ಹಾಸನದಲ್ಲಿ ಇಂದು ಶಾಕ್ ಕೊಟ್ಟ ಬಿಜೆಪಿ

      ಹಾಸನ, ಏಪ್ರಿಲ್ 10: ಕಾಂಗ್ರೆಸ್ - ಜೆಡಿಎಸ್ ಮೈತ್ರಿಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಕ್ ಕೊಟ್ಟಿದೆ. ಹೌದು, ಇಂದು ಬುಧವಾರ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಜಿಪಂ ಸದಸ್ಯರು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

      ಹಾಸನ‌ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಕಡೂರು ವಿಧಾನಸಭಾ ಕ್ಷೇತ್ರದ 'ಕೈ' ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಿಪಂ ಸದಸ್ಯ ಮಹೇಶ್ ಒಡೆಯರ್ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

      ಕಡೂರಿನ ಎಪಿಎಂಸಿ ಆವರಣದಲ್ಲಿ ನಡೆಯುತ್ತಿರುವ ಪ್ರಚಾರ ಸಭೆಯಲ್ಲಿ ಬಿಎಸ್ ವೈ, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಪ್ರೀತಂ ಗೌಡ ಭಾಗಿಯಾಗಿದ್ದು, ಹಾಸನ ಲೋಕಸಭಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಎ ಮಂಜು ಪರ ಪ್ರಚಾರ ನಡೆಸುತ್ತಿದ್ದಾರೆ.

      Several Congress leaders have joined the BJP in Hassan

      ಇತ್ತೀಚೆಗಷ್ಟೇ ಎ ಮಂಜು ಪರವಾಗಿ ಕೆಲಸ ಮಾಡುವಂತೆ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ, ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಆಡಿರುವ ಮಾತು, ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಘಟನೆ ನಡೆದ ಎರಡೇ ದಿನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿರುವುದು ಹಾಸನ‌ ಲೋಕಸಭಾ ಕ್ಷೇತ್ರದಲ್ಲಿ ಸಂಚಲವನ್ನುಂಟು ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+