ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆ.5ರಿಂದ ಶಿರಾಡಿ ಘಾಟ್ ವಾಹನ ಸಂಚಾರಕ್ಕೆ ಮುಕ್ತ

By Gururaj
|
Google Oneindia Kannada News

ಹಾಸನ, ಸೆಪ್ಟೆಂಬರ್ 04 : ಹಾಸನ ಜಿಲ್ಲಾಡಳಿತ ಶಿರಾಡಿ ಘಾಟ್‌ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿದೆ. ಸೆ.5ರ ಬುಧವಾರದಿಂದ ವಾಹನ ಸಂಚಾರ ಆರಂಭವಾಗಲಿದೆ.

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.

ಶಿರಾಡಿ ಘಾಟ್: ತಜ್ಞ ಇಂಜಿನಿಯರ್ಸ್ ಸಿಎಂಗೆ ನೀಡಿದ ವರದಿಯಲ್ಲೇನಿದೆ?ಶಿರಾಡಿ ಘಾಟ್: ತಜ್ಞ ಇಂಜಿನಿಯರ್ಸ್ ಸಿಎಂಗೆ ನೀಡಿದ ವರದಿಯಲ್ಲೇನಿದೆ?

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆಯನ್ನು ಪರಿಶೀಲಿಸಿ ವಾಹನ ಸಂಚಾರಕ್ಕೆ ಅನುಮತಿ ನೀಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜಿಲ್ಲಾಡಳಿತ ಲಘು ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿದೆ.

ಶಿರಾಡಿ ಘಾಟ್ ನಲ್ಲಿ ಕಾಸಿದ್ದವನೇ ಬಾಸ್, ಡಿಸಿ ಅಲ್ಲ ಅವ್ನ ಅಪ್ಪನಿಗೆ ಹೇಳುಶಿರಾಡಿ ಘಾಟ್ ನಲ್ಲಿ ಕಾಸಿದ್ದವನೇ ಬಾಸ್, ಡಿಸಿ ಅಲ್ಲ ಅವ್ನ ಅಪ್ಪನಿಗೆ ಹೇಳು

Shiradi Ghat

ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ಶಿರಾಡಿ ಘಾಟ್ ಮುಚ್ಚಿರುವುದರಿಂದ ಆಗುತ್ತಿರುವ ತೊಂದರೆ ವಿವರಿಸಿದ್ದರು.

ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರವೇ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರವೇ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ

ನಿತಿನ್ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ರಸ್ತೆಯನ್ನು ದುರಸ್ಥಿ ಮಾಡಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಸೂಚನೆ ನೀಡಿದ್ದರು.

ಶಿರಾಡಿ ಘಾಟ್ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ. ಸಂಪಾಜೆ ಘಾಟ್‌ಬಳಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಶಿರಾಡಿ ಘಾಟ್ ಬಂದ್ ಆಗಿತ್ತು. ಆದ್ದರಿಂದ, ಚಾರ್ಮಾಡಿ ಘಾಟ್‌ ಮೇಲೆ ಒತ್ತಡ ಹೆಚ್ಚಾಗಿತ್ತು.

ಆದ್ದರಿಂದ, ಶಿರಾಡಿ ಘಾಟ್‌ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು.

English summary
Deputy Commissioner of Hassan Rohini Sindhuri said that, Shiradi Ghat will be opened for light vehicles form September 5, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X