ಶಿರಾಡಿ ಘಾಟ್ ಕಾಮಗಾರಿಗೆ ಅಕಾಲಿಕ ಮಳೆಯ ಅಡ್ಡಿ
ಹಾಸನ, ಮೇ 23 : ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಶಿರಾಡಿ ಘಾಟ್ ರಸ್ತೆ ಕಾಮಗಾರಿಗೆ ಅಡ್ಡಿ ಉಂಟು ಮಾಡಿದೆ. ಜೂನ್ 15ರ ಬಳಿಕ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.
ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಶಿರಾಡಿಘಾಟ್.
12.38 ಕಿ.ಮೀ ಉದ್ದದ ರಸ್ತೆಯನ್ನು 74 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.
ಜನವರಿ 20ರಿಂದ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಕಾಮಗಾರಿ ಕೈಗೊಳ್ಳಲಾಗಿದೆ. ನಿರೀಕ್ಷೆಯಂತೆ ಮೇ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅಕಾಲಿಕ ಮಳೆಯ ಕಾರಣ ಕಾಮಗಾರಿ ವಿಳಂಬವಾಗಿದೆ.

ಓಷನ್ ಕನ್‌ಸ್ಟ್ರಕ್ಷನ್ ಕಂಪನಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ನಡೆಸುತ್ತಿದೆ. ಆದರೆ, ಅಕಾಲಿಕವಾಗಿ ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ. ಆದ್ದರಿಂದ ಜೂನ್ 15ರ ಬಳಿಕ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.
2 ಹಂತದಲ್ಲಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಶಿರಾಡಿ ಘಾಟ್ ರಸ್ತೆಯ 11.77 ಕಿ.ಮೀ. ಉದ್ದದ ರಸ್ತೆಯನ್ನು ಒಟ್ಟು 69.90 ಕೋ. ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗಿದೆ.












Click it and Unblock the Notifications