ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾಡಿ ಘಾಟ್ ಕಾಮಗಾರಿಗೆ ಅಕಾಲಿಕ ಮಳೆಯ ಅಡ್ಡಿ

By Gururaj
|
Google Oneindia Kannada News

ಹಾಸನ, ಮೇ 23 : ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಶಿರಾಡಿ ಘಾಟ್ ರಸ್ತೆ ಕಾಮಗಾರಿಗೆ ಅಡ್ಡಿ ಉಂಟು ಮಾಡಿದೆ. ಜೂನ್ 15ರ ಬಳಿಕ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಶಿರಾಡಿಘಾಟ್.
12.38 ಕಿ.ಮೀ ಉದ್ದದ ರಸ್ತೆಯನ್ನು 74 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.

ಚಿತ್ರಗಳು : ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ-ಮುಕ್ತಚಿತ್ರಗಳು : ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ-ಮುಕ್ತ

ಜನವರಿ 20ರಿಂದ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಕಾಮಗಾರಿ ಕೈಗೊಳ್ಳಲಾಗಿದೆ. ನಿರೀಕ್ಷೆಯಂತೆ ಮೇ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅಕಾಲಿಕ ಮಳೆಯ ಕಾರಣ ಕಾಮಗಾರಿ ವಿಳಂಬವಾಗಿದೆ.

Shiradi Ghat

ಓಷನ್ ಕನ್‌ಸ್ಟ್ರಕ್ಷನ್ ಕಂಪನಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ನಡೆಸುತ್ತಿದೆ. ಆದರೆ, ಅಕಾಲಿಕವಾಗಿ ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ. ಆದ್ದರಿಂದ ಜೂನ್ 15ರ ಬಳಿಕ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳುಶಿರಾಡಿ ಘಾಟ್ ಬಂದ್, ಪರ್ಯಾಯ ಮಾರ್ಗಗಳು

2 ಹಂತದಲ್ಲಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಶಿರಾಡಿ ಘಾಟ್ ರಸ್ತೆಯ 11.77 ಕಿ.ಮೀ. ಉದ್ದದ ರಸ್ತೆಯನ್ನು ಒಟ್ಟು 69.90 ಕೋ. ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗಿದೆ.

English summary
Development work of Shiradi Ghat road delayed due to rain. The Shiradi Ghat stretch on the Mangaluru-Bengaluru National Highway 75 closed form January 2018. Road may open for vehicles form June 15, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X