Yagachi Dam: ಬೇಲೂರಿನ ಯಗಚಿ ಜಲಾಶಯಕ್ಕಿಲ್ಲ ಬಾಗಿನ ಭಾಗ್ಯ: ಯಾಕೆ..?
ಹಾಸನ, ಅಕ್ಟೋಬರ್ 22: ಜಿಲ್ಲೆಯ ಬೇಲೂರು ವಾಸ್ತುಶಿಲ್ಪಕ್ಕೆ ಹೆಸರು ಮಾಡಿದ್ದು ಇಲ್ಲಿರುವ ಚೆನ್ನಕೇಶವ ದೇಗುಲ ವಿಶ್ವ ವಿಖ್ಯಾತಿ ಪಡೆದಿದೆ. ಜೊತೆಗೆ ತಾಲೂಕಿಗೆ ಸೇರುವ ಯಗಚಿ ಜಲಾಶಯ ಕೂಡ ಪ್ರೇಕ್ಷಣೀಯ ತಾಣವೇ. ಆದರೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಇಚ್ಛಾಸಕ್ತಿಯ ಕೊರತೆಯಿಂದಾಗಿ ಅಭಿವೃದ್ಧಿ ಮರೀಚಿಕೆಯಾಗುತ್ತಿದೆ. ಅದಕ್ಕಿಂತ ಹೆಚ್ಚಾಗಿ ಇಲ್ಲಿರುವ ಯಗಚಿ ಜಲಾಶಯ ಭರ್ತಿಯಾಗಿದ್ದರೂ ಬಾಗಿನ ಅರ್ಪಿಸಲು ಮುಂದಾಗದಿರುವುದು ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ವಿಶ್ವ ಪಾರಂಪರಿಕಪಟ್ಟಿಗೆ ಸೇರ್ಪಡೆಯಾಗುವ ಮೂಲಕ ಜಾಗತಿಕ ಮನ್ನಣೆ ಪಡೆದ ಬೇಲೂರಿನ ಮೇಲೆ ಸರ್ಕಾರ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಕನಿಷ್ಟ ಸೌಜನ್ಯಕ್ಕೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಅಧಿಕಾರಿಗಳು ಬೇಲೂರಿನ ಸಮಸ್ಯೆಗಳ ಬಗ್ಗೆ ಗಮನ ನೀಡುತ್ತಿಲ್ಲ. ಜೊತಗೆ ಯಗಚಿಗೆ ಬಾಗಿನ ಅರ್ಪಣೆ ಮಾಡುತ್ತಿಲ್ಲ, ಹೊಯ್ಸಳ ಮತ್ತು ಹಲ್ಮಿಡಿ ಉತ್ಸವ ನಡೆಸುತ್ತಿಲ್ಲ ಎಂಬ ಆಕ್ರೋಶ ಕನ್ನಡಪರ ಸಂಘಟನೆಗಳದ್ದಾಗಿದೆ.

ಬೇರೆ ಕಡೆಗಳಲ್ಲಿ ಬಾಗಿನ ಅರ್ಪಣೆ ಮಾಡಲಾಗುತ್ತದೆ. ಆದರೆ ಯಗಚಿ ಜಲಾಶಯಕ್ಕೆ ಏಕೆ ಬಾಗಿನ ಅರ್ಪಿಸಲು ಮುಂದಾಗುತ್ತಿಲ್ಲ ಎಂಬುದು ಪ್ರಶ್ನೆಯಾಗಿದೆ. ಈ ಕುರಿತಂತ ಮಾತನಾಡಿರುವ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್. 2004ರಲ್ಲಿ ಯಗಚಿ ಜಲಾಶಯ ನಿರ್ಮಿಸಿದ್ದು, ಅನ್ಯ ತಾಲ್ಲೂಕಿಗೆ ಮಾತ್ರ ಉಪಯುಕ್ತವಾಗಿದೆಯೇ ಹೊರತು ಬೇಲೂರು ತಾಲ್ಲೂಕಿಗೆ ಜೋಳಿಗೆ ಸಿಕ್ಕಿದೆ.
ಜಲಾಶಯವಿದ್ದರೂ ನೀರಿಗೆ ಸಂಕಷ್ಟ
ಇದಕ್ಕೆ ಕಾರಣ ಇಲ್ಲಿನ ಇಚ್ಚಾಶಕ್ತಿ ಇಲ್ಲದ ರಾಜಕಾರಣಿಗಳು, ಪ್ರವಾಸಿತಾಣ ಬೇಲೂರಿನ ಅಭಿವೃದ್ದಿಗೊಳಿಸಲು ಮೀನಾ-ಮೇಷ ಎಣಿಸಿದ್ದಾರೆ. ಈ ಹಿಂದೆ ಶಾಸಕರಾಗಿದ್ದ ಕೆ.ಎಸ್.ಲಿಂಗೇಶ್ ಅವರು ಕೆಆರ್ಎಸ್ ಮಾದರಿಯಲ್ಲಿ ಹೈಟೆಕ್ ಉದ್ಯಾನವನ ನಿರ್ಮಿಸುವ ಭರವಸೆ ನೀಡಿದ್ದರೂ ಇಲ್ಲಿಯ ತನಕ ಬರುವ ಪ್ರವಾಸಿಗರಿಗೆ ಕನಿಷ್ಟ ಶೌಚಾಲಯ ಇಲ್ಲದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.
ಯಗಚಿಗೆ ಸೂಕ್ತ ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮಾರ ಇಲ್ಲವಾಗಿದೆ. ಅಲ್ಲದೆ ಯಗಚಿ ಸಮೀಪದ ನೂರಾರು ಹಳ್ಳಿಗಳಲ್ಲಿ ಇಂದಿಗೂ ಕುಡಿಯುವ ನೀರಿನ ಅಭಾವವಿದೆ.

ಯಗಚಿ ಜಲಾಶಯದ ನೀರು ಮಾತ್ರ ಚಿಕ್ಕಮಗಳೂರು ಮತ್ತು ಹೊಳೆನರಸೀಪುರಕ್ಕೆ ಹರಿಯುತ್ತಿದೆ ಈ ಬಗ್ಗೆ ಹತ್ತಾರು ಬಾರಿ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ, ಜಿಲ್ಲಾ ಮಂತ್ರಿಗಳು ಬೇಲೂರಿನ ಮೇಲೆ ಏಕೆ? ಮಲತಾಯಿಧೋರಣೆ ಅನುಸರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ತಾಲ್ಲೂಕು ಅಧ್ಯಕ್ಷ ವಿ.ಎಸ್.ಬೋಜೇಗೌಡ, ಮಾತನಾಡಿ, ಐತಿಹಾಸಿಕ ಮತ್ತು ಭವ್ಯ ಪರಂಪರೆಯನ್ನು ಹೊಂದಿರುವ ಬೇಲೂರಿನಲ್ಲಿ ನಡೆಯುತ್ತಿದ್ದ ಹೊಯ್ಸಳ ಮಹೋತ್ಸವ ಹಾಗೂ ಕನ್ನಡಕ್ಕೆ ಪ್ರಥಮ ಶಿಲಾ ಶಾಸನ ನೀಡಿದ ಹಲ್ಮಿಡಿಯ ಉತ್ಸವಗಳು ಸ್ಥಗೀತವಾಗಿದೆ. ಇದಕ್ಕೆ ಕಾರಣ ಜಿಲ್ಲಾಡಳಿತ ಮತ್ತು ಜಿಲ್ಲಾ ಮಂತ್ರಿಗಳ ಮೃದುಧೋರಣೆಯಾಗಿದೆ ಎಂದು ಕಿಡಿಕಾರಿದರು.
ಇನ್ನಾದರೂ ಇತ್ತ ಗಮನ ನೀಡುತ್ತಾರಾ?
ಜಿಲ್ಲಾ ಮಂತ್ರಿಗಳಾದ ಕೆ.ಎನ್.ರಾಜಣ್ಣ ಅವರಿಗೆ ಹಾಸನಾಂಬೆ ಮಾತ್ರ ಉತ್ಸವ ನಡೆಸಲು ಮನಸ್ಸು ಮಾಡುತ್ತಾರೆ. ಆದರೆ ಅದಾಯವಿಲ್ಲದ ಕಡೆ ತಿರಗಿ ನೋಡುತ್ತಿಲ್ಲ. ಈಗಾಗಲೇ ನಾಲ್ಕು ಬಾರಿ ಯಗಚಿ ಜಲಾಶಯ ಭರ್ತಿಯಾಗಿದೆ. ಜಿಲ್ಲಾ ಮಂತ್ರಿಗಳ ಇಲ್ಲಿಗೆ ಆಗಮಿಸಿ ಬಾಗಿನ ಅರ್ಪಣೆ ಜೊತೆಗೆ ಬೇಲೂರು ಅಭಿವೃದ್ಧಿಗೆ ಸೂಕ್ತ ಅನುದಾನ ನೀಡಬೇಕು. ಸ್ಥಳೀಯ ಶಾಸಕರು ಕೂಡ ತಮ್ಮ ಇಚ್ಚಾಶಕ್ತಿಯಿಂದ ನೆನಗುಂದಿಗೆ ಬಿದ್ದ ಹೊಯ್ಸಳ ಮಹೋತ್ಸವ, ಹಲ್ಮಿಡಿ ಉತ್ಸವ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಾದರೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಯಗಚಿ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ಹರಿಸುತ್ತಾರಾ? ಹಾಗೆಯೇ ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿದ ಚೆನ್ನಕೇಶವ ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗೂ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications