• search
 • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ ದೃಢ

|

ಹಾಸನ, ಜೂನ್ 27: ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಅಧಿಕಾರಿಗಳು ಶನಿವಾರ ಸ್ಪಷ್ಟಪಡಿಸಿದ್ದಾರೆ.

   Shivraj Singh Chouhan MP CM visits Mandya's melukote with family | Oneindia Kannada

   ಹಾಸನ ಜಿಲ್ಲೆಯ ಅರಕಲಗೂಡಿನ ಪಟ್ಟಣದ ಎಸ್ಎಸ್ಎಲ್‌ಸಿ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆಗೆ ಭಾಗವಹಿಸಿದ್ದ 16 ವರ್ಷದ ವಿದ್ಯಾರ್ಥಿಗೆ ಸೋಂಕು ದೃಢವಾಡವಾಗಿದೆ. ಪರೀಕ್ಷೆ ಆರಂಭಕ್ಕೂ ಮುನ್ನ ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದ ವಿದ್ಯಾರ್ಥಿ ನಂತರ ಚೇತರಿಸಿಕೊಂಡಿದ್ದ. ಬಳಿಕ, ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಪರೀಕ್ಷೆ ವರದಿ ಬಂದ ಬಳಿಕ ಕೊವಿಡ್ ಅಂಟಿಕೊಂಡಿರುವುದು ಖಚಿತವಾಗಿದೆ.

   ನಿನ್ನೆ PUC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

   ಈ ವಿದ್ಯಾರ್ಥಿ ಗುರುವಾರ ಪರೀಕ್ಷೆಗೆ ಹಾಜರಾಗಿ ಗಣಿತ ವಿಷಯ ಬರೆದಿದ್ದರು ಎಂದು ತಿಳಿದು ಬಂದಿದೆ. ಕೊರೊನಾ ಪರೀಕ್ಷೆ ವರದಿ ಹೊರಬಂದ ಕೂಡಲೇ ಆ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿದೆ. ಪರೀಕ್ಷೆಯನ್ನು ಪೂರ್ಣಗೊಳಿಸಿದ ಬಳಿಕ ಆ ವಿದ್ಯಾರ್ಥಿಯನ್ನು ಪ್ರತ್ಯೇಕ ತರಗತಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

   ಅಂದ್ಹಾಗೆ, ಪರೀಕ್ಷೆ ಬರೆಯಲು ಶಾಲೆಗೆ ಬಂದ ವೇಳೆ ತಾಪಮಾನ ಪರೀಕ್ಷಿಸಿದಾಗಲೂ ಆ ವಿದ್ಯಾರ್ಥಿಗೆ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

   ಕೊರೊನಾ ಭೀತಿಯ ನಡುವೆಯೂ 10ನೇ ತರಗತಿ ಪರೀಕ್ಷೆ ನಡೆಯುತ್ತಿದ್ದು, ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.

   English summary
   A Student Appearing for SSLC Exam Tests Positive for Coronavirus in Hassan.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X