ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್

|
Google Oneindia Kannada News

ಹಾಸನ, ಮಾರ್ಚ್ 02 : ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿ ನಾಯಕ ಎಂ. ಮಂಜು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು.

Recommended Video

Supreme Court Of India issued notice to Hassan MP Prajwal Revanna | JDS | SC | Oneindia Kannada

ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಎ. ಮಂಜು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2020ರ ಜನವರಿಯಲ್ಲಿ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಪ್ರಜ್ವಲ್ ರೇವಣ್ಣಗೆ ಜಯ; ಎ. ಮಂಜು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ಪ್ರಜ್ವಲ್ ರೇವಣ್ಣಗೆ ಜಯ; ಎ. ಮಂಜು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎ.ಮಂಜು ಸೋಲು ಕಂಡಿದ್ದರು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಎ. ಮಂಜು ಹೈಕೋರ್ಟ್ ಮೊರೆ ಹೋಗಿದ್ದರು.

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರ

ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಬಿಜೆಪಿ ನಾಯಕ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ತಾಂತ್ರಿಕ ಕಾರಣದಿಂದಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆದೇಶದಲ್ಲಿ ಹೇಳಿತ್ತು.

ಪ್ರಜ್ವಲ್ ಸಂಸತ್ ಸ್ಥಾನ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಂಜುಪ್ರಜ್ವಲ್ ಸಂಸತ್ ಸ್ಥಾನ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಂಜು

ಅರ್ಜಿಯಲ್ಲಿ ಮಾಡಿದ ಮನವಿ ಏನು?

ಅರ್ಜಿಯಲ್ಲಿ ಮಾಡಿದ ಮನವಿ ಏನು?

ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಎ.ಮಂಜು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದನ್ನು ಎ.ಮಂಜು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಸುಳ್ಳು ಮಾಹಿತಿ ನೀಡಿದ್ದಾರೆ

ಸುಳ್ಳು ಮಾಹಿತಿ ನೀಡಿದ್ದಾರೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ಅಫಿಡೆವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಎ. ಮಂಜು ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಅರ್ಜಿ ತಿರಸ್ಕಾರವಾಗಿತ್ತು.

ಆರೋಪವೇನು?

ಆರೋಪವೇನು?

ಎ. ಮಂಜು ಅವರು ಅರ್ಜಿಯಲ್ಲಿ ಪ್ರಜ್ವಲ್ ರೇವಣ್ಣ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ್ದಾರೆ. ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಆಸ್ತಿ ಘೋಷಣೆ ಮಾಡುವಾಗ ಪ್ರಮಾಣ ಪತ್ರದಲ್ಲಿ ಇದನ್ನು ಉಲ್ಲೇಖಿಸಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು.

ಸುಪ್ರೀಂನಲ್ಲಿ ಅರ್ಜಿಯ ವಿಚಾರಣೆ

ಸುಪ್ರೀಂನಲ್ಲಿ ಅರ್ಜಿಯ ವಿಚಾರಣೆ

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಬಿಜೆಪಿ ನಾಯಕ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಎ. ಮಂಜು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

English summary
Supreme Court Of India issued notice to Hassan MP and JD(S) leader Prajwal Revanna. BJP leader A.Manju challenged Karnataka high court order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X