• search
  • Live TV
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮದುವೆ ನಿಶ್ಚಿಯವಾಗಿದ್ದ ಯುವಕನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು

By ಹಾಸನ ಪ್ರತಿನಿಧಿ
|
Google Oneindia Kannada News

ಹಾಸನ, ನವೆಂಬರ್‌ 30: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ‌ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯಲ್ಲಿ ನಡೆದಿದೆ.

ಕೂಡ್ಲೂರು ಗ್ರಾಮದ ದಿನೇಶ್ ಜೊತೆ ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಮದುವೆ ನಿಶ್ಚಯವಾಗಿತ್ತು. ಆಕೆಗೆ ಇನ್ನೂ 16 ವರ್ಷವಾಗಿದ್ದು ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ದಿನೇಶ್ ಆಕೆಯನ್ನು ನವೆಂಬರ್ 29 ರಂದು ರಾಮನಾಥಪುರ ಷಷ್ಠಿ ಜಾತ್ರೆಗೆಂದು ಕರೆದೊಯ್ದಿದ್ದ. ಸೋಮವಾರ ಮಧ್ಯಾಹ್ನ 2:30 ರ ವೇಳೆಗೆ ದಿನೇಶ್ ಆಕೆಯನ್ನು ಕರೆದೊಯ್ದಿದಿದ್ದಾನೆ. 4 ಗಂಟೆ ವೇಳೆಗೆ ಆಕೆಯ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ವಿಷ ಕುಡಿದಿದ್ದಾಳೆ ಎಂದು ತಿಳಿಸಿದ್ದಾನೆ.

ಸ್ಥಳಾಂತರಿಸಿದರೂ ತಪ್ಪದ ಕಾಟ: ನೂರಾರು ಮೈಲಿ ಸಾಗಿ ಬಂದು ಮನೆ ಮೇಲೆ ಕಾಡಾನೆ ದಾಳಿಸ್ಥಳಾಂತರಿಸಿದರೂ ತಪ್ಪದ ಕಾಟ: ನೂರಾರು ಮೈಲಿ ಸಾಗಿ ಬಂದು ಮನೆ ಮೇಲೆ ಕಾಡಾನೆ ದಾಳಿ

ಆಕೆಯನ್ನು ಬಳಿಕ ದಿನೇಶ್ ಕುಟುಂಬದವರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆ. ಆದರೆ ಆಕೆ ಆಸ್ಪತ್ರೆಗೆ ದಾಖಲಾಗುವ ವೇಳೆಗೆ ಮೃತಪಟ್ಟಿದ್ದಾಳೆ. ಇದೇ ವೇಳೆ ದಿನೇಶ್ ಕೂಡಾ ವಿಷ ಸೇವಿಸಿರುವುದು ತಿಳಿದುಬಂದಿದ್ದು, ಆತನಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಸಾವಿನ ಬಗ್ಗೆ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಬಾಲಕಿ ಮೃತದೇಹದ ಮೇಲೆ ಗಾಯದ ಗುರುತು, ಕುತ್ತಿಗೆಯಲ್ಲಿ ಪೆಟ್ಟಾಗಿರುವ ಗಾಯದ ಗುರುತು ಪತ್ತೆಯಾಗಿದೆ. ಘಟನೆ ಸಂಬಂಧ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ತನಿಖೆ ನಡೆಸುವಂತೆ ಜಿಲ್ಲಾ ಎಸ್‌ಪಿಗೆ ದೂರು ನೀಡಿದ್ದಾರೆ. ಹಾಗೂ ಮಕ್ಕಳ ದೌರ್ಜನ್ಯ ತಡೆ ವಿಶೇಷ ಪೊಲೀಸ್ ಅಧಿಕಾರಿಗೂ ದೂರು ನೀಡಲಾಗಿದೆ.

ಸಿಎಂ ನನ್ನನ್ನು ಯಾವಾಗಲೂ ಆತ್ಮೀಯವಾಗಿ ಕಾಣುತ್ತಾರೆ: ಜೆಡಿಎಸ್‌ ಶಾಸಕ ಲಿಂಗೇಶ್ಸಿಎಂ ನನ್ನನ್ನು ಯಾವಾಗಲೂ ಆತ್ಮೀಯವಾಗಿ ಕಾಣುತ್ತಾರೆ: ಜೆಡಿಎಸ್‌ ಶಾಸಕ ಲಿಂಗೇಶ್

ಇನ್ನು ಅಪ್ರಾಪ್ತ ಬಾಲಕಿ ಸಾವಿನ ಬಗ್ಗೆ ಅನುಮಾನವಿದ್ದು, ಸೂಕ್ತ ತನಿಖೆ ನಡೆಸುವಂತೆ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೋಷಕರು ಕೂಡ ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

English summary
Suspicious death of a minor girl who had gone with her fiance at Hassan Arkalgud.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X