ಸಂವಿಧಾನ ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ; ಹಾಸನದಲ್ಲಿ ದಿನೇಶ್ ಅಮೀನ್ ಮಟ್ಟು ಕಳವಳ
ಹಾಸನ, ಸೆಪ್ಟೆಂಬರ್, 15: ದೇಶದಲ್ಲಿ ಸಂವಿಧಾನ ಮತ್ತು ಅಟ್ರಾಸಿಟಿ ಕಾಯ್ದೆ ದುರ್ಬಲ ಮಾಡಲು ಅನೇಕ ಪ್ರಯತ್ನಗಳು ನಡೆಯುತ್ತಲೇ ಇವೆ ಎಂದು ಪ್ರಗತಿಪರ ಚಿಂತಕರಾದ ದಿನೇಶ್ ಅಮ್ಮಿನ ಮಟ್ಟು ಹಾಸನದಲ್ಲಿ ಹೇಳಿದರು.
ನಗರದ ತಾಲೂಕು ಪಂಚಾಯತಿ ರಸ್ತೆಯಲ್ಲಿ ದಲಿತ ಮತ್ತು ಜನಪರ ಸಂಘಟನೆಗಳ ವತಿಯಿಂದ ಮತೀಯವಾದಿ, ಕೋಮುವಾದಿ, ಜನವಿರೋಧಿ, ಸಂವಿಧಾನ ವಿರೋಧಿ ಸಂಘಪರಿವಾರ ಶಕ್ತಿಗಳ ವಿರುದ್ಧ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಇಂದು ದಲಿತರು ಧೈರ್ಯದಿಂದ ಬದುಕಲು ಇರುವ ಒಂದೇ ಒಂದು ಆಯುಧ ಸಂವಿಧಾನವಾಗಿದೆ. ಸಂವಿಧಾನವನ್ನೇ ಬುಡಮೇಲು ಮಾಡಲು ಮುಂದಾಗಿರುವ ಸರ್ಕಾರಗಳ ನಡೆಯ ಬಗ್ಗೆ ಜನರು ಯೋಚಿಸಬೇಕಿದೆ ಎಂದರು.
ಇಂದಿನ ಕಾಲಘಟ್ಟದಲ್ಲಿ ಹಿಂದಿನ ಕಾಲದ ಹೋರಾಟದ ಹೆಜ್ಜೆಗಳನ್ನು ಇಡಬೇಕಿದೆ. ದೇಶಕ್ಕೆ ಸ್ವತಂತ್ರ್ಯ ಬಂದು 75 ವರ್ಷ ಕಳೆದರೂ, ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯುರೋ ಪ್ರಕಾರ ದೇಶದಲ್ಲಿ ಪ್ರತಿ 16 ನಿಮಿಷಕ್ಕೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಪ್ರತಿದಿನ 13 ದಲಿತರ ಕೊಲೆ, ಅದರಲ್ಲಿ 4 ಜನ ದಲಿತ ಮಹಿಳೆಯರ ಮೇಲೆ ಅತ್ಯಾಚಾರದಂತಹ ಪ್ರಕರಣಗಳು ದಾಖಲಾಗುತ್ತಿದೆ ಎಂಬುದು ಅಂಕಿ ಅಂಶಗಳ ಸಮೇತ ಬಹಿರಂಗವಾಗಿದೆ ಎಂದರು.

ಸರ್ಕಾರದ ವಿರುದ್ಧ ಅಮ್ಮಿನ ಮಟ್ಟು ಗುಡುಗು
ಉತ್ತರ ಪ್ರದೇಶದ ಮಾದರಿಯಲ್ಲಿ ಆಡಳಿತವನ್ನು ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದರೆ ಉತ್ತರಪ್ರದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಶೇಕಡ 25ರಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ದುರಾಡಳಿತ ಕರ್ನಾಟಕಕ್ಕೆ ಬೇಕೆ? ಎಂದು ಪ್ರಶ್ನಿಸುವ ಮೂಲಕ ಅಸಮಾಧಾನವನ್ನು ಹೊರಹಾಕಿದರು. ಇಂದಿಗೂ ಪರಿಶಿಷ್ಟ ಜಾತಿ ಪಂಗಡದ ಮೇಲೆ ನಡೆದಿರುವ ಸಾವಿರಾರು ದೌರ್ಜನ್ಯ ಪ್ರಕರಣಗಳು ವಿಚಾರಣೆ ಹಂತದಲ್ಲಿ ಇದೆ. ಸಕಲೇಶಪುರದಲ್ಲಿ ನಡೆದ ಘಟನೆ ನೋಡಿದರೆ ಇತಿಹಾಸದ ಚಕ್ರದ ಹಿಂದೆ ಹೋಗಬೇಕಿತ್ತು. ಆದರೆ ವಿರೋಧಿ ದಿಕ್ಕಿಗೆ ಹೋಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಚುನಾವಣೆ ಗಿಮಿಕ್‌ಗೆ ರಾಮನ ಹೆಸರು
ಭೀಮ ಕೊರಂಗಾವ್ ಪ್ರಕರಣದಲ್ಲಿ 800 ಜನ 8,000 ಜನ ಸೈನಿಕರು ಹಿಮ್ಮೆಟ್ಟಿಸಿದರು. ಹಿಂದುಳಿದ ಪರಿಶಿಷ್ಟ ಜಾತಿ ಪಂಗಡ ಮುಸ್ಲಿಮರು ದೇಶದಲ್ಲಿ 90ರಷ್ಟು ಜನಸಂಖ್ಯೆಯನ್ನು ಹೊಂದಿದ್ದಾರೆ. ಇವರು ದಲಿತ ವಿರೋಧಿಗಳಾಗಿರುವ ಶೇಕಡಾ 10ರಷ್ಟು ಜನರನ್ನು ಹಿಮ್ಮೆಟ್ಟಿಸಲು ಆಗುತ್ತಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ದೇಶದಲ್ಲಿ ದಲಿತರು, ಹಿಂದುಳಿದ ಹಾಗೂ ಮುಸ್ಲಿಮರನ್ನು ಹೊಡೆದಾಳುವ ಶಕ್ತಿ ಸೃಷ್ಟಿ ಆಗುತ್ತಿದೆ. ಹಿಂದುತ್ವದ ಮೇಲೆ ರಾಜಕಾರಣ ಮಾಡುವವರಿಗೆ ದೇವರ ಮೇಲೆ ಎಳ್ಳಷ್ಟು ಭಕ್ತಿ ಇಲ್ಲದಂತೆ ಆಗಿದೆ. "ರಾಮನ ಹೆಸರಿನಲ್ಲಿ ಪೋಸ್ಟರ್‌ಗಳು ಬರೀ ಚುನಾವಣೆ ಗಿಮಿಕ್ ಆಗಿದೆ." ಇಂದು ಅಂಬೇಡ್ಕರ್ ಚಿಂತನೆಗಳು ಮಾತ್ರ ಬೀದಿಗೆ ಬರಬೇಕು. ಚಳುವಳಿ ಮೂಲಕ ಸರ್ಕಾರಗಳನ್ನು ಬದಲಾವಣೆ ಮಾಡಬಹುದಾಂತಹ ಕಾರ್ಯಕ್ಕೆ ಜನರು ಮುಂದಾಗುವ ಮೂಲಕ ಉತ್ತಮ ಆಡಳಿತದ ಆಯ್ಕೆಗೆ ಸಹಕರಿಸಬೇಕು ಎಂದರು.

ಕೋಮುವಾದಿ ಸಂಘಟನೆಗಳನ್ನು ಹಿಮ್ಮಟಿಸಬೇಕು
ಮುಖಂಡರಾದ ಧರ್ಮೇಶ್ ಅವರು ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಕೋಮುವಾದಿ ಸಂಘಟನೆಗಳನ್ನು ಹಿಮ್ಮಟಿಸಬೇಕಿದೆ. ದೇಶದ ಸಂವಿಧಾನ ಅಪ್ರಸ್ತುತಗೊಳಿಸುವ ದುರ್ಬಲ ಮಾಡುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ಇದರ ವಿರುದ್ಧ ದಲಿತ ಹಾಗೂ ಹಿಂದುಳಿದ ವರ್ಗದವರು ಸಂಘಟಿತರಾಗಿ ಹೋರಾಡಬೇಕು ಎಂದರು.

ಸಭೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿದ್ದು, ಕೋಮುವಾದಿ ಶಕ್ತಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿದ್ದ ಸಂಘಟನೆ ಸದಸ್ಯರು ಬಹಿರಂಗ ಸಭೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ದಲಿತ ಸಂಘಟನೆ ಮುಖಂಡರಾದ ಎಚ್.ಕೆ ಸಂದೇಶ್, ರಾಜಶೇಖರ್, ಕೆ.ಟಿ. ಶಿವಪ್ರಸಾದ್, ಎಸ್.ಎನ್ ಮಲ್ಲಪ್ಪ, ಹೆತ್ತೂರು ನಾಗರಾಜ್, ಎಂ.ಜಿ ಪೃಥ್ವಿ, ಮರಿಜೋಸೆಪ್, ವಸಂತ್ ಕುಮಾರ್, ಸೋಮಶೇಖರ್, ಟಿ.ಆರ್. ವಿಜಯ್ ಕುಮಾರ್, ಅಂಬುಗ ಮಲ್ಲೇಶ್, ಎಂ.ಆರ್ ವೇಣು, ಕೃಷ್ಣದಾಸ್, ಆರ್.ಪಿ.ಐ ಸತೀಶ್, ಎಚ್.ಆರ್.ನವೀನ್ ಕುಮಾರ್, ಗಂಗಾಧರ್ ಬಹುಜನ್, ಎಂ.ಬಿ ಪುಷ್ಪ, ಗೋವಿಂದರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications