ಹಾಸನದಲ್ಲಿ ಮೂವರು ಪಿಡಿಒಗಳ ಅಮಾನತು
ಹಾಸನ, ಸೆಪ್ಟೆಂಬರ್ 9: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಹಾಸನ ಜಿಲ್ಲಾ ಪಂಚಾಯಿತಿಯ ಮೂವರು ಪಂಚಾಯತಿ ಅಭಿವೃದ್ದಿ ಅಧಿಕಾರಿ(ಪಿಡಿಒ)ಗಳನ್ನು ಸೇವೆಯಿಂದ ಅಮಾನತುಗೊಳಿಸಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಜಾನಕಿ ಅವರು ಆದೇಶ ಹೊರಡಿಸಿದ್ದಾರೆ.
ಅರಸೀಕೆರೆ ತಾಲೂಕು ಜಾವಗಲ್ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಎಸ್.ಸಿ.ವಿರೂಪಾಕ್ಷ, ಚನ್ನರಾಯಪಟ್ಟಣ ತಾಲೂಕು ಅಕ್ಕನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಮಂಜುನಾಥ್.

ಇದೇ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ಎಸಗಿದ ಆರೋಪದ ಮೇಲೆ ಹಾಲಿ ಚನ್ನರಾಯಪಟ್ಟಣ ತಾಲೂಕು ಬೆಕ್ಕ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಮೂವರ ಮೇಲೆ ಹಣ ದುರುಪಯೋಗ, ಕೆಲಸದಲ್ಲಿ ನಿರ್ಲಕ್ಷ್ಯ, ಬೇಜವಾಬ್ದಾರಿತನ ಹಾಗೂ ನಿಗದಿಪಡಿಸಿದ ಗುರಿಗಳನ್ನು ಸಮರ್ಪಕವಾಗಿ ಸಾಧನೆ ಮಾಡದ ದೂರುಗಳಿದ್ದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಸಲಾಗಿದೆ ಎಂದು ಸಿಇಒ ತಿಳಿಸಿದ್ದಾರೆ.












Click it and Unblock the Notifications