ಹಾಸನ ಜಿಲ್ಲೆಯಲ್ಲಿ ಮತ್ತೆ ಅಪಘಾತ:ಮೂವರು ಸಾವು, ನಾಲ್ವರಿಗೆ ಗಾಯ

ಹಾಸನ, ಮಾರ್ಚ್ 13:ಕೆಎಸ್ಆರ್ ಟಿಸಿ ಸಾರಿಗೆ ಬಸ್ ಮತ್ತು ಓಮಿನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅರಸೀಕೆರೆ ತಾಲೂಕು ದೇವರಸನಹಳ್ಳಿ ಬಳಿ ನಡೆದಿದೆ.

ಇಂದು ಬುಧವಾರ ಬೆಳಗಿನ ಜಾವ 3.30ಕ್ಕೆ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ತಾಯಿ ಮುಜೀಬಾ(53), ಪುತ್ರ ಮಹಮದ್ ಸಾಧಿಖ್(22), ಮಗಳು ಮುಷ್ಕಾನ್(19) ಮೃತಪಟ್ಟ ದುರ್ದೈವಿಗಳು.

ತುಮಕೂರು ಜಿಲ್ಲೆಯ ಮಧುಗಿರಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ.ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಇತ್ತೀಚೆಗೆ ಇದು 3 ನೇ ಕುಟುಂಬ ದುರಂತ.

Three people died in car accident

ಒಂದೂವರೆ ತಿಂಗಳ ಹಿಂದೆ ಚನ್ನರಾಯಪಟ್ಟಣ ಬಳಿ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದರು. ಕಳೆದ ಭಾನುವಾರ ಶಿರಾಡಿಘಾಟ್ ನಲ್ಲಿ ನಾಲ್ವರು ಸಾವನ್ನಪ್ಪಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+