ಹಾಸನ: ಅಕ್ರಮ ಸಾಗಾಟದ ವೇಳೆ ಬೇಲೂರಿನಲ್ಲಿ 20ಕ್ಕೂ ಹೆಚ್ಚು ಕರುಗಳು ಸಾವು
ಹಾಸನ, ಆಗಸ್ಟ್ 19: ಕಳೆದ ಜುಲೈ ತಿಂಗಳಿನಂದು ನಡೆದ 38 ಮಂಗಗಳ ಮಾರಣಹೋಮ ಮಾಸುವ ಮುನ್ನವೇ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.
ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿ ಗೂಡ್ಸ್ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ.
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗಾಟ ಮಾಡುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ವಾಹನದಲ್ಲಿದ್ದ ೨೦ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಈ ಪೈಕಿ ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಇನ್ನೂ ಕೆಲವು ಕರುಗಳು ಅಪಘಾತದ ತೀವ್ರತೆಗೆ ಗೂಡ್ಸ್ ವಾಹನದಲ್ಲಿಯೇ ಮೃತಪಟ್ಟಿವೆ ಎನ್ನಲಾಗಿದೆ.
ಸದ್ಯ ಅಪಘಾತ ಸ್ಥಳಕ್ಕೆ ಬೇಲೂರು ಶಾಸಕ ಲಿಂಗೇಶ್ ತೆರಳಿ 30 ಕರುಗಳನ್ನು ರಕ್ಷಿಸಿದ್ದಾರೆ. ಘಟನೆ ಬಗ್ಗೆ ಶಾಸಕ ಲಿಂಗೇಶ್ ಬೇಸರ ವ್ಯಕ್ತಪಡಿಸಿದ್ದು, ಘಟನಾ ಸ್ಥಳದಲ್ಲಿ ಆಹಾರವಿಲ್ಲದೆ 20ಕ್ಕೂ ಹೆಚ್ಚು ಕರುಗಳು ರೋದಿಸುತ್ತಿವೆ. ಸ್ಥಳಕ್ಕೆ ಇನ್ನೂ ಬಾರದ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
38 ಕೋತಿಗಳ ಮಾರಣಹೋಮ
ಇದೇ ಹಾಸನ ಜಿಲ್ಲೆಯ ಉಗನೆ ಗ್ರಾಮದಲ್ಲಿ ಆಹಾರದ ಆಸೆ ತೋರಿಸಿ ಕಳೆದ ಜುಲೈ 28 ರಂದು 50ಕ್ಕೂ ಹೆಚ್ಚು ಕೋತಿಗಳನ್ನು ಚೀಲದಲ್ಲಿ ಬಂಧಿಸಿಟ್ಟಿದ್ದ ಯಶೋಧ ಹಾಗೂ ರಾಮು, ಅವುಗಳನ್ನು ಸ್ಥಳಾಂತರ ಮಾಡುವಾಗ ಉಸಿರುಗಟ್ಟಿ ಮೃತಪಟ್ಟಿವೆ ಎಂದು ತಿಳಿಸಿದ್ದು ನಿಮಗೆಲ್ಲ ನೆನೆಪಿದೆ.

ಈ ವೇಳೆ ಬೇಲೂರು ತಾಲೂಕಿನ ಚೌಡನಹಳ್ಳಿ ಬಳಿ 38 ಕೋತಿಗಳ ಸಾಮೂಹಿಕ ಮಾರಣಹೋಮ ನಡೆದಿತ್ತು. ಮಂಗಗಳನ್ನು ಚೀಲದಲ್ಲಿ ತುಂಬಿ ಬಿಸಾಡಿ ಹೋಗಿದ್ದ ಆರೋಪಿಗಳಿಗೆ, ಮರುದಿನ ಕೋತಿಗಳ ಸಾವಿನ ಸುದ್ದಿ ತಿಳಿದಿದೆ. ಹೀಗಾಗಿ ಆಂಜನೇಯ ದೇಗುಲದಲ್ಲಿ ಹೋಮ ಹವನ, ವಿಶೇಷ ಪೂಜೆ ಮಾಡಿಸಿದ್ದಾರೆ ಎಂಬುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಅರಸೀಕೆರೆ ತಾಲ್ಲೂಕಿನ ಬಾಣಾವರದ ಕೋತಿ ಸೆರೆ ತಂಡಕ್ಕೆ ಮನವಿ ಮಾಡಿದ್ದ ಜಮೀನಿನ ಮಾಲೀಕರು, ಕೋತಿ ಸೆರೆಹಿಡಿದ ದಂಪತಿ, ಮೃತ ಕೋತಿ ಸ್ಥಳಾಂತರ ಮಾಡಿದ ವಾಹನ ಚಾಲಕ ಸೇರಿ, ಒಟ್ಟು 7 ಜನರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದರು.
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣಾವರದ ಕೋತಿ ಸೆರೆ ತಂಡಕ್ಕೆ ಮನವಿ ಮಾಡಿದ್ದ ಜಮೀನಿನ ಮಾಲೀಕರು, ಕೋತಿ ಸೆರೆಹಿಡಿದ ದಂಪತಿ, ಮೃತ ಕೋತಿ ಸ್ಥಳಾಂತರ ಮಾಡಿದ ವಾಹನ ಚಾಲಕ ಸೇರಿ, ಒಟ್ಟು 7 ಜನ ಆರೋಪಿಗಳನ್ನು ಹಾಸನ ಪೊಲೀಸರು ವಶಕ್ಕೆ ಪಡೆದಿದ್ದರು.

ಮರುದಿನ ಹೈಕೋರ್ಟ್‌ಗೆ ವರದಿ ನೀಡಬೇಕಿದ್ದ ಹಿನ್ನೆಲೆಯಲ್ಲಿ ತ್ವರಿತ ತನಿಖೆ ನಡೆಸಿದ್ದ ಪೊಲೀಸರು ವಶಕ್ಕೆ ಪಡೆದ ಎಲ್ಲರನ್ನು ಬಂಧಿಸಿದ್ದರು.
39 ಮಂಗಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಮಾನ ಕೈಗೊಂಡು, ಪ್ರಕರಣದ ವಿಚಾರಣೆಗೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಹಾಸನದ ಚೌಡನಹಳ್ಳಿಯಲ್ಲಿ ಮಂಗಗಳ ಮಾರಣಹೋಮ ನಡೆದಿರುವ ಕುರಿತು ಇಂತಹ ಅಮಾನವೀಯ ಕೃತ್ಯಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.
ಮಂಗಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾಧಿಕಾರಿ, ಎಸ್ಪಿ, ಆರ್ಎಫ್ಒರನ್ನು ಪ್ರತಿವಾದಿಯಾಗಿಸಲು ಹೈಕೋರ್ಟ್ ಸೂಚನೆ ನೀಡಿತ್ತು. "ಕಾಡಿನ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಮಂಗಗಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಆಘಾತಕಾರಿ. ಇಲ್ಲಿ ಪ್ರಾಣಿಗಳ ದೌರ್ಜನ್ಯ ತಡೆ ಕಾಯ್ದೆ ಸ್ಪಷ್ಟ ಉಲ್ಲಂಘನೆ ಆಗಿದೆ. ಮಂಗಗಳ ಹಾವಳಿಯನ್ನೂ ಘನತೆಯಿಂದ ನಿಯಂತ್ರಿಸಬೇಕು,'' ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
ಮಂಗಗಳ ಮಾರಣಹೋಮ ಆರೋಪಿಗಳಿಗೆ ಜಾಮೀನು ಅರ್ಜಿ ತಿರಸ್ಕಾರ
ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಗಳನ್ನು ಮಾರಣಹೋಮ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಾಸನದ ಘನ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿತ್ತಲ್ ವಿಷ್ಣುಪಂತ್ ಜೋಷಿರವರು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಅಭಿಯೋಜಕರಾದ ಈ.ಡಿ. ಶ್ರೀನಿವಾಸ ಸರ್ಕಾರದ ಪರ ವಾದ ಮಂಡಿಸಿದ್ದು, ಜು.29 ರಂದು ಬೇಲೂರು ತಾಲ್ಲೂಕು ಬಿಕ್ಕೋಡು ಹೋಬಳಿ, ಚೌಡನಹಳ್ಳಿ ಗ್ರಾಮದ ಸರ್ಕಾರಿ ರಸ್ತೆಯಲ್ಲಿ ಯಾರೋ ಮಂಗಗಳ ಶವಗಳನ್ನು ಹಾಕಿರುತ್ತಾರೆಂದು ಪಿರ್ಯಾದಿಯವರಿಗೆ ಬಂದ ಮಾಹಿತಿ ಮೇರೆಗೆ ಪಿರ್ಯಾದಿಯವರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ 20 ಗಂಡು ಮತ್ತು 18 ಹೆಣ್ಣು ಮಂಗಗಳನ್ನು ಯಾರೋ ಆಸಾಮಿಗಳು ಬೇರೆ ಜಾಗದಲ್ಲಿ ಕೊಂದು ತಂದು ಹಾಕಿರುವುದು ಕಂಡು ಬಂದಿತ್ತು.
ನಂತರ ಈ ಬಗ್ಗೆ ಬೇಲೂರು ವಲಯದ ಅರಣ್ಯ ಮೊಕದ್ದಮೆ ಸಂಖ್ಯೆ 11/2021.22 ರ ರೀತ್ಯಾ ಪ್ರಕರಣ ದಾಖಲಿಸಿ 38 ಮಂಗಗಳ ಶವಗಳನ್ನು ಅಮಾನತ್ತು ಪಡಿಸಿಕೊಂಡು ಘನ ನ್ಯಾಯಾಲಯದ ಅನುಮತಿ ಪಡೆದು ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ಮಾಡಿಸಿ ನಂತರ ಶವಗಳನ್ನು ತಗರೆ ರಕ್ಷಿತ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಿರುತ್ತಾರೆ.
ನಂತರ ಈ ದಿನ ಪಿರ್ಯಾದಿಯವರು ಠಾಣೆಗೆ ಹಾಜರಾಗಿ ಮಂಗಗಳನ್ನು ಹತ್ಯೆ ಮಾಡಿರುವವರ ವಿರುದ್ದ ಪ್ರಕರಣ ದಾಖಲಿಸುವಂತೆ ನೀಡಿದ ದೂರಿನ ಮೇರೆಗೆ ಮೇಲ್ಕಂಡವರುಗಳ ಮೇಲೆ ಪೊಲೀಸ್ ಠಾಣಾಧಿಕಾರಿಗಳು ತಮ್ಮ ಠಾಣಾ ಅ.ಕ್ರ.ನಂ. 93/21 ರಲ್ಲಿ ಕಲಂ 429 ಐಪಿಸಿ ಜೊತೆಗೆ 11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ ರೀತ್ಯಾ ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications