Accident News: ಇನ್ನೋವಾ ಕಾರು-ಬೈಕ್‌ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಇನ್ನೋವಾ ಕಾರು-ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಹಾಸನಾಂಬ ದೇವಿಯ ದರ್ಶನ ಪಡೆದು ಹೋಗುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.

ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಎಂಬುವವರು ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾ ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ.
ಇನ್ನೂ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿ ಛಾಯಾ ಎಂಬುವವರ ಸ್ಥಿತಿ ಗಂಭೀರವಾಗಿದೆ. ಇವರಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.












Click it and Unblock the Notifications