ಹಾಸನ: ಸಾಲ ಬಾಧೆಗೆ ಮತ್ತಿಬ್ಬರು ರೈತರ ಬಲಿ
ಸೋಮನಾಥ ಹಳ್ಳಿ ಹಾಗೂ ಬ್ಯಾಡರ ಹಳ್ಳಿಯ ರೈತರ ಸಾವು; ಮುಂದುವರಿದೇ ಇದೇ ರಾಜ್ಯದ ಅನ್ನದಾತರ ಆತ್ಮಹತ್ಯೆ ಪ್ರಕರಣ
ಹಾಸನ, ಮೇ 4: ಸಾಲ ಹೊರೆಯಿಂದ ಬೇಸತ್ತಿದ್ದ ಜಿಲ್ಲೆಯ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿಯ ಸೋಮನಾಥಹಳ್ಳಿಯ ಗ್ರಾಮದ ಚಿಕ್ಕೇಗೌಡ ( 44) ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬಾಗೂರು ಬ್ಯಾಡರಹಳ್ಳಿ ಗ್ರಾಮದ ರಾಮಯ್ಯ ( 41) ತನ್ನ ಹೊಲದ ಹಲಸಿನ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.

ಬೆಳೆ ನಷ್ಟ ಹಾಗೂ ಬ್ಯಾಂಕ್ , ಕೈ ಸಾಲ ತೀರಿಸಲಾಗದೇ ಆ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರೈತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಿಣಿ ಆತ್ಮಹತ್ಯೆ: ಲೋಕೋಪಯೋಗಿ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಶಿವ ಪ್ರಕಾಶ್ ಎಂಬುವರ ಪತ್ನಿ ರಾಧಿಕಾ ( 36) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಧಿಕಾ ಅವರು ಶಿವಪ್ರಕಾಶ್ ಅವರನ್ನು ಕೈ ಹಿಡಿದು ಎಂಟು ವರ್ಷಗಳಾಗಿದ್ದವು. ಪತಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications