Breaking; ಬೇಲೂರಿನಲ್ಲಿ ಕಾಡಾನೆ ದಾಳಿ, ಇಬ್ಬರು ಬಲಿ

ಹಾಸನ, ಮಾರ್ಚ್ 09: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ಬೆಂಕಿ ಹಾಕಿ ರಸ್ತೆ ತಡೆ ಮಾಡಿದ್ದಾರೆ. ಸ್ಥಳಕ್ಕೆ ಶಾಸಕರು, ಡಿಎಫ್‌ಓ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ.

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಚಿಕ್ಕಯ್ಯ (60), ಚಿಕ್ಕಯ್ಯ (50) ಮೃತಪಟ್ಟವರು. ಏಕಾಏಕಿ ತೋಟಕ್ಕೆ ಆನೆಗಳು ನುಗ್ಗಿದ್ದು, ಸೊಂಡಲಿನಿಂದ ತಿವಿದು ಬಡಿದು, ಇಬ್ಬರನ್ನು ತುಳಿದು ಹಾಕಿದೆ. ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರ ಆಕ್ರಂದ‌ನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Two Killed In Elephant Attack At Beluru

ಜನರಿಂದ ರಸ್ತೆ ತಡೆ ; ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಬೆಂಕಿ ಹಾಕಿ, ರಸ್ತೆ ತಡೆ ನಡೆಸಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಶಾಸಕರು, ಡಿಎಫ್‌ಓ ಬರುವಂತೆ ಜನರು ಒತ್ತಾಯ ಮಾಡುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸರು ಧಾವಿಸಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಭಟನೆ
ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಸಾವು ಪ್ರಕರಣದ ವಿಚಾರವಾಗಿ ಕಾಡಾನೆ ಹಾವಳಿ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು, ಸ್ಥಳಕ್ಕೆ ಸಿಎಂ ಬರಲಿ ಎಂದು ಪಟ್ಟು ಹಿಡಿದರು. ಪ್ರತಿಭಟನೆಯಿಂದ ಬೇಲೂರು- ಸಕಲೇಶಪುರ ನಡುವಿನ ಸಂಚಾರ ಬಂದ್ ಆಗಿದೆ. ಸಿಎಂ ಸ್ಥಳಕ್ಕೆ ಬರುವವರೆಗೆ ಮೃತದೇಹ ತೆಗೆಯಲು ಬಿಡಲ್ಲ ಎಂದು ಪಟ್ಟು ಹಿಡಿದು ಹೋರಾಟ ನಡೆಸುತ್ತಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಈ ವಿಚಾರವಾಗಿ ಕಾಡಾನೆ ಹಾವಳಿ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜನರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿಎಫ್‌ಓ ಬಸವರಾಜು ಆಗಮಿಸಿ ಪ್ರತಿಭಟನಕಾರರ ಮನವೊಲಿಸಲು ಯತ್ನಿಸಿದರು.

ಸ್ಥಳಕ್ಕೆ ಅರಣ್ಯ ಸಚಿವರು, ಮುಖ್ಯಮಂತ್ರಿ ಬರಬೇಕು, ಅಲ್ಲಿಯವರೆಗೂ ಪ್ರತಿಭಟನೆ ಹಿಂಪಡೆಯಲ್ಲ. ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಕಾರರ ಹೇಳಿದ್ದು, ಕಳೆದ ನಾಲ್ಕು ಗಂಟೆಯಿಂದ ರಸ್ತೆ ತಡೆದು ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+