ಹಾಸನ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ, ಮೇ 06 : ಹಾಸನ ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮೇ 9 ಹಾಸನದಲ್ಲಿ ನೇರ ಸಂದರ್ಶನ ನಡೆಸಲಿವೆ. ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮೇ 9ರಂದು ಬೆಳಗ್ಗೆ 10 ಗಂಟೆಯಿಂದ ನೇರ ಸಂದರ್ಶನ ನಡೆಯಲಿದೆ. 7ನೇ ತರಗತಿ ಪಾಸ್/ಫೇಲ್, ಎಸ್.ಎಸ್.ಎಲ್.ಸಿ/ಪಿ.ಯು.ಸಿ/ ಪದವಿ/ ಐ.ಟಿ.ಐ/ ಡಿಪ್ಲೊಮೋ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಆಸಕ್ತ ನಿರುದ್ಯೋಗಿ ಯುವಕ/ಯುವತಿಯರು ತಮ್ಮ ಮೂಲ ದಾಖಲಾತಿಯ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

Various job openings in Hassan Karnataka

ಅತಿಥಿ ಉಪನ್ಯಾಸಕರ ನೇಮಕಾತಿ : 2019-20ನೇ ಸಾಲಿಗೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾವತಿಯಿಂದ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ, ವಾಣಿಜ್ಯ ವಿಭಾಗಕ್ಕೆ ವಿವಿಧ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರಿಂದ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ಶೈಕ್ಷಣಿಕ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಸರ್ಕಾರಿ ಮೊರಾರ್ಜಿ ದೇಸಾಯಿ ಮಹಿಳಾ ವಸತಿ ಪದವಿ ಪೂರ್ವ ಕಾಲೇಜು, ಗುರುಮಾರನಹಳ್ಳಿ, ಚನ್ನರಾಯಪಟ್ಟಣ ವಿಳಾಸಕ್ಕೆ ಮೇ.13 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+