Get Updates
Get notified of breaking news, exclusive insights, and must-see stories!

Shiradi Ghat: ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್, ಸ್ಪಷ್ಟನೆಗಳು

ಹಾಸನ, ಮಾರ್ಚ್‌ 03: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ವಾಹನ ಸಂಚಾರ ಬಂದ್ ಆಗಲಿದೆ ಎಂಬ ಸುದ್ದಿಗಳು ಹಬ್ಬಿವೆ. ಮಾರ್ಚ್‌ 15ರಿಂದಲೇ ಜಾರಿಗೆ ಬರುವಂತೆ ಜೂನ್‌ ತನಕ ವಾಹನ ಸಂಚಾರ ಬಂದ್ ಮಾಡಲಾಗುತ್ತದೆ ಎಂಬ ವರದಿಗಳು ಕಳೆದ ವಾರ ಪ್ರಕಟವಾಗಿದ್ದವು. ಈ ಕುರಿತು ಹಾಸನ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

ಮಳೆಗಾಲ ಆರಂಭಕ್ಕೂ ಮೊದಲು ಬೆಂಗಳೂರು-ಮಂಗಳೂರು ನಡುವಿನ ಚತುಷ್ಪಥ ಹೆದ್ದಾರಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಎನ್‌ಹೆಚ್‌ಎಐ ಶಿರಾಡಿ ಘಾಟ್ ರಸ್ತೆಯನ್ನು ಮಾರ್ಚ್‌ 15ರಿಂದ ಬಂದ್ ಮಾಡಲಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ ಈ ಕುರಿತು ಪ್ರಸ್ತಾಪ ಇಲ್ಲ ಎಂಬ ಮಾಹಿತಿ ಈಗ ಲಭ್ಯವಾಗಿದೆ.

Vehicles Movement Ban In Shiradi Ghat Road Soon Clarification

ಅಧಿಕಾರಿಗಳ ಸ್ಪಷ್ಟನೆ: ಈ ಕುರಿತು ಹಾಸನ ಉಪ ವಿಭಾಗಾಧಿಕಾರಿ ಡಾ. ಎಂ. ಕೆ. ಶೃತಿ ಸ್ಪಷ್ಟನೆಯನ್ನು ನೀಡಿದ್ದಾರೆ. ಸಕಲೇಶಪುರ-ಶಿರಾಡಿ ಮಾರ್ಗದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡುವ ಪ್ರಸ್ತಾವನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನ-ಮಂಗಳೂರು ರಸ್ತೆಯಲ್ಲಿ ಸಕಲೇಶಪುರದ ದೋಣಿಗಾಲ್‌-ಮಾರನಹಳ್ಳಿ ನಡುವಿನ ಚತುಷ್ಪಥ ರಸ್ತೆ ಕಾಮಗಾರಿಗಾಗಿ ಹೆದ್ದಾರಿ ಬಂದ್ ಮಾಡುವುದಿಲ್ಲ. ಆದರೆ ದೋಣಿಗಾಲ್‌ನಿಂದ ಕಪ್ಪಳ್ಳಿ ತನಕ ಏಕಮುಖ ಸಂಚಾರ ವ್ಯವಸ್ಥೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ) ಹಾಸನ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದ್ದಾರೆ.

ದೋಣಿಗಾಲ್-ಮಂಜರಾಬಾದ್ ಕೋಟೆ ಮುಂಭಾಗ ತುಂಬಾ ಕಡಿದಾದ ಇಳಿಜಾರು ಇರುವುದರಿಂದ ಆ ಸ್ಥಳದಲ್ಲಿ ಮಳೆಗಾಲ ಪ್ರಾರಂಭದ ಮೊದಲು ಕಾಮಗಾರಿಯನ್ನು ತ್ವರಿತವಾಗಿ ಮಾಡುವ ಸಲುವಾಗಿ, ಏಕಮುಖ ಸಂಚಾರಕ್ಕೆ ಮಾತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ಮಾರ್ಗದಲ್ಲಿ ಹಿಂದಿನ ವರ್ಷದಲ್ಲಿ ವಾಹನ ಸಂಚಾರ ಬಂದ್ ಮಾಡಿದ್ದರಿಂದ ಪ್ರಯಾಣಿಕರಿಗೆ ಹಾಗೂ ಸರಕು ಸಾಗಣೆ ವಾಹನಗಳಿಗೆ ಸಮಸ್ಯೆ ಉಂಟಾಗಿತ್ತು. ಆದ್ದರಿಂದ ಈಗ ವಾಹನಗಳ ಸಂಚಾರ ಬಂದ್ ಮಾಡುವುದಿಲ್ಲ ಎಂದು ಹಾಸನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ಹಾಸನ ಸಂಸದ ಶ್ರೇಯಸ್ ಎಂ. ಪಟೇಲ್ ಎನ್‌ಹೆಚ್-75 ಹಾಸನ-ಮಾರನಹಳ್ಳಿ ರಸ್ತೆ 45 ಕಿ. ಮೀ. ತನಕ ನಡೆಯುತ್ತಿರುವ ರಸ್ತೆ ಮತ್ತು ಇನ್ನಿತರ ಕಾಮಗಾರಿಗಳನ್ನು ವೀಕ್ಷಿಸಿದ್ದರು. ಆಗ ಅವರು ಮುಂದಿನ 3-4 ತಿಂಗಳ ಒಳಗೆ ಹಾಸನದಿಂದ ಮಾರನಹಳ್ಳಿ ತನಕದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬೆಂಗಳೂರು-ಮಂಗಳೂರು ನಡುವಿನ ಚತುಷ್ಪಥ ಹೆದ್ದಾರಿ ಯೋಜನೆಯ ಕಾಮಗಾರಿಯನ್ನು ಜೂನ್‌ 30ರೊಳಗೆ ಪೂರ್ಣಗೊಳಿಸಲು ಗಡುವು ಹಾಕಿಕೊಂಡಿತ್ತು. ಆದ್ದರಿಂದ ವಾಹನ ಸಂಚಾರ ಬಂದ್ ಮಾಡಿ ಕಾಮಗಾರಿ ಪೂರ್ಣಗೊಳಿಸಲು ಚಿಂತನೆ ನಡೆಸಿತ್ತು ಎಂಬ ಮಾಹಿತಿ ಬಂದಿತ್ತು.

ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಸನ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಜಿಲ್ಲಾಡಳಿತ ರಾಜ್ಯ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿದೆ. ಒಪ್ಪಿಗೆ ಸಿಕ್ಕಿದರೆ ಮಾರ್ಚ್‌ 15 ರಿಂದಲೇ ವಾಹನ ಸಂಚಾರ ಬಂದ್ ಆಗಲಿದೆ ಎಂಬ ಸುದ್ದಿಗಳು ಹಬ್ಬಿದ್ದವು.

ಎನ್‌ಹೆಚ್‌ಎಐ ಅಧಿಕಾರಿಗಳ ಪ್ರಕಾರ ಸಕಲೇಶಪುರದ ದೋಣಿಗಲ್‌ ಕ್ರಾಸ್‌ನಿಂದ ಮಾರನಹಳ್ಳಿ ತನಕ 10 ಕಿ. ಮೀ. ಚತುಷ್ಪಥ ರಸ್ತೆ ಕಾಮಗಾರಿ ನಡೆಯಬೇಕಿದೆ. ಇದು ಸಂಪೂರ್ಣ ಕಾಂಕ್ರೀಟ್‌ ರಸ್ತೆಯಾಗಿದೆ. ಸದ್ಯ 5 ಕಿ. ಮೀ. ಮಾತ್ರ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ಮೇ ಅಂತ್ಯ ಜೂನ್ ಮೊದಲ ವಾರದಲ್ಲಿ ನೈಋತ್ಯ ಮುಂಗಾರು ಮಳೆ ಆರಂಭವಾದರೆ ಮತ್ತೆ ಕಾಮಗಾರಿಗೆ ಅಡ್ಡಿಯಾಗಲಿದೆ. ಆದ್ದರಿಂದ ಮಳೆಗಾಲ ಆರಂಭಕ್ಕೂ ಮೊದಲು ಕಾಮಗಾರಿ ಪೂರ್ಣಗೊಳಿಸಲು ವಾಹನ ಸಂಚಾರ ಬಂದ್ ಮಾಡಿ ಕಾಮಗಾರಿ ಕೈಗೊಳ್ಳಲು ಆಲೋಚಿಸಲಾಗಿದೆ ಎಂಬ ವರದಿಗಳಿದ್ದವು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+