ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಣೆ

|
Google Oneindia Kannada News

ಹಾಸನ, ಸೆಪ್ಟೆಂಬರ್ 02; ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಾಸನ ಜಿಲ್ಲಾಡಳಿತ ಎರಡು ವಾರಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 3ರ ಶುಕ್ರವಾರ ರಾತ್ರಿ 9 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಜಾರಿಗೆ ಬರಲಿದೆ.

ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಎರಡು ವಾರಗಳ ವಾರಾಂತ್ಯದ ಕರ್ಫ್ಯೂ ವಿಧಿಸುವುದು ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿರುವುದು ಸೂಕ್ತ ಎಂದು ಮನಗಂಡು ಈ ಕುರಿತು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ-75ರ ಟೋಲ್ ದರ ಹೆಚ್ಚಳನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ-75ರ ಟೋಲ್ ದರ ಹೆಚ್ಚಳ

ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಮಾಡುವ ಸಂಬಂಧ ವಿಪತ್ತು ನಿರ್ವಹಣೆ ಕಾಯ್ದೆ 2005ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಾಂತ ಕೆಲವು ಆಯ್ದು ಚಟುವಟಿಕೆ ಕಾರ್ಯಾಚರಣೆಯನ್ನು ದಿನಾಂಕ 31/8/2021ರ ಬೆಳಗ್ಗೆ 6 ಗಂಟೆಯಿಂದ ದಿನಾಂಕ 13/9/2021ರ ಬೆಳಗ್ಗೆ 6 ಗಂಟೆಯ ವರೆಗೆ ನಿರ್ಬಂಧಿಸಿ ಮತ್ತು ಅನುಮತಿಸಿ ಉಲ್ಲೇಖ (1)ರಲ್ಲಿ ಹೊರಡಿಸಿರುವ ಆದೇಶದಂತೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ನೀಡಲಾಗಿರುತ್ತದೆ.

3/9/2021ರ ರಾತ್ರಿ 9 ಗಂಟೆಯಿಂದ 6/9/2021ರ ಬೆಳಗ್ಗೆ 5 ಗಂಟೆಯ ತನಕ ಮತ್ತು 10/9/2021ರ ರಾತ್ರಿ 9 ಗಂಟೆಯಿಂದ 13/9/2021ರ ಬೆಳಗ್ಗೆ 5 ಗಂಟೆಯ ತನಕ ಅಂದರೆ ಎರಡು ವಾರಗಳ ಕಾಲ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭಾರತದಲ್ಲಿ 66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಭಾರತದಲ್ಲಿ 66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

Weekend Curfew Imposed In Hassan District

ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಹಾಸನ ಜಿಲ್ಲೆಯಲ್ಲಿ 81 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 1063 ಆಗಿದೆ. ಇದುವರೆಗೂ ಜಿಲ್ಲೆಯಲ್ಲಿ 1227 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 109716 ಆಗಿದೆ.

ಹಾಸನ ವಿಮಾನ ನಿಲ್ದಾಣ ಯೋಜನೆಗೆ ಅನುದಾನ ಕೊಟ್ಟ ಸರ್ಕಾರಹಾಸನ ವಿಮಾನ ನಿಲ್ದಾಣ ಯೋಜನೆಗೆ ಅನುದಾನ ಕೊಟ್ಟ ಸರ್ಕಾರ

ಶೇ 100ರಷ್ಟು ಲಸಿಕೆ ನೀಡುವಂತೆ ಸೂಚನೆ; ಹೆಚ್ಚಿನ ಕೋವಿಡ್ ಸೋಂಕು ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಶೇ. 100 ರಷ್ಟು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚನೆ ನೀಡಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಬಳಸಿಕೊಂಡು ತಾಲ್ಲೂಕುವಾರು ನಿಗದಿಪಡಿಸಿರುವ ಲಸಿಕೆ ಗುರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಲಸಿಕೆ ನೀಡಲು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ತಾಲೂಕು ಆಸ್ಪತ್ರೆ ಸಿಬ್ಬಂದಿಗಳನ್ನು ಬಳಸಿಕೊಳ್ಳಿ, ಅವಶ್ಯವಿದ್ದಲ್ಲಿ ಎಸ್.ಡಿ.ಆರ್.ಎಫ್. ನಿಧಿಯಿಂದ ಹಣ ಬಳಕೆ ಮಾಡಿಕೊಳ್ಳಿ. ಸರ್ಕಾರಿ ಅಥವಾ ಖಾಸಗಿ ಶಾಲಾ ವಾಹನಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಲಸಿಕೆ ನೀಡಿ ಎಂದು ಸೂಚನೆ ನೀಡಲಾಗಿದೆ.

ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಪ್ರತಿ ತಾಲೂಕುಗಳಲ್ಲಿ ಒಂದು ಕೋವಿಡ್ ಕೇರ್ ಕೇಂದ್ರ ಇರುವಂತೆ ನೋಡಿಕೊಳ್ಳಬೇಕು. ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಜಿಲ್ಲೆಯಲ್ಲಿ ವಾರಾಂತ್ಯದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಆಂಟಿಜೆನ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದವರನ್ನು ಆರ್. ಟಿ. ಪಿ. ಸಿ. ಆರ್ ಪರೀಕ್ಷೆ ನಡೆಸಿ ಸೋಂಕು ಇದೆಯೇ?, ಇಲ್ಲವೇ? ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಹಾಲಿನ ಡೈರಿ ಹಾಗೂ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಗೆ ಕ್ರಮಗಳನ್ನು ಕೈಗೊಳ್ಳಬೇಕು. ಲಸಿಕೆ, ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಂದು ಅವರು ಹೇಳಿದರು.

Recommended Video

ಆಕ್ಸಿಜನ್‌ ಪೂರೈಕೆ ಮಾಡಲಾಗದವರು ಈಗ ರೇಶನ್‌,ಪೆನ್ಷನ್‌ ಕೊಡಲ್ಲ ಅಂತಿದ್ದಾರೆ | D K Shivakumar | Oneindia Kannada

English summary
R. Girish deputy commissioner of Hassan imposed weekend curfew in the district. It will come to effect from 3/9/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X