ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಿಂದ ನರೇಂದ್ರ ಮೋದಿ ಸ್ಪರ್ಧೆ : ದೇವೇಗೌಡರು ಹೇಳಿದ್ದೇನು?

|
Google Oneindia Kannada News

Recommended Video

ಮೋದಿ ಲೋಕಸಭಾ ಚುನಾವಣೆ 2019ಕ್ಕೆ ಕರ್ನಾಟಕದಿಂದ ಸ್ಪರ್ಧೆ ಮಾಡುವ ಬಗ್ಗೆ ಗೌಡ್ರ ಪ್ರತಿಕ್ರಿಯೆ

ಹಾಸನ, ಅಕ್ಟೋಬರ್ 13 : 'ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. 2019ರಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡುವ ಮೂಲಕ ರಾಜ್ಯವನ್ನು ಉದ್ದಾರ ಮಾಡಲಿ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು.

ಶನಿವಾರ ಹಾಸನದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, 'ಪ್ರಧಾನಿ ಮೋದಿ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಅನುದಾನ ಹಂಚಿಕೆಯಲ್ಲಿ ಕೂಡಾ ತಾರತಮ್ಯ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.

ಕರ್ನಾಟಕದಿಂದ ಲೋಕಸಭೆಗೆ ಮೋದಿ ಸ್ಪರ್ಧೆ: ಬಿಎಸ್ವೈ ಪ್ರತಿಕ್ರಿಯೆ ಏನು?ಕರ್ನಾಟಕದಿಂದ ಲೋಕಸಭೆಗೆ ಮೋದಿ ಸ್ಪರ್ಧೆ: ಬಿಎಸ್ವೈ ಪ್ರತಿಕ್ರಿಯೆ ಏನು?

2019ರ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಕರ್ನಾಟಕ ಬಿಜೆಪಿ ಘಟಕ ಈ ಸುದ್ದಿಗಳನ್ನು ತಳ್ಳಿ ಹಾಕಿದೆ. ಮೋದಿ ಪ್ರಸ್ತುತ ವಾರಣಾಸಿ ಕ್ಷೇತ್ರದ ಸಂಸದರು.

ಮಂಡ್ಯ ಉಪ ಚುನಾವಣೆ : ಟಿಕೆಟ್ ಆಕಾಂಕ್ಷಿಗಳಿಗೆ ದೇವೇಗೌಡರ ಷರತ್ತುಮಂಡ್ಯ ಉಪ ಚುನಾವಣೆ : ಟಿಕೆಟ್ ಆಕಾಂಕ್ಷಿಗಳಿಗೆ ದೇವೇಗೌಡರ ಷರತ್ತು

'ಮಂಡ್ಯ, ಶಿವಮೊಗ್ಗ ಸೇರಿದಂತೆ ಉಪ ಚುನಾವಣೆ ಘೋಷಣೆಯಾದ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹುಡುಕಾಟ ನಡೆದಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು....

ಬ್ರೇಕಿಂಗ್ ನ್ಯೂಸ್ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸೋಲ್ಲಬ್ರೇಕಿಂಗ್ ನ್ಯೂಸ್ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸೋಲ್ಲ

ಬಿಎಸ್‌ಪಿ ನಮ್ಮ ಬೆಂಬಲಕ್ಕಿದೆ

ಬಿಎಸ್‌ಪಿ ನಮ್ಮ ಬೆಂಬಲಕ್ಕಿದೆ

ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಬಗ್ಗೆ ಮಾತನಾಡಿದ ದೇವೇಗೌಡರು, 'ಮಹೇಶ್ ಅವರ ರಾಜೀನಾಮೆ ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಬಿಎಸ್‌ಪಿ ನಾಯಕರು ಈಗಲೂ ನಮ್ಮೊಂದಿಗೆ ಇದ್ದಾರೆ. ಮಹಾಘಟಬಂಧನ್‌ನಿಂದ ಹಿನ್ನಡೆಯಾಗಿ ರಾಜೀನಾಮೆ ನೀಡಿದರು ಎಂಬುದು ಉಹಾಪೋಹ. ಬಿಎಸ್‌ಪಿ ಈಗಲೂ ನಮ್ಮ ಜೊತೆಗಿದೆ' ಎಂದು ಹೇಳಿದರು.

ಲೋಕಸಭೆ ಚುನಾವಣೆ ದಿಕ್ಸೂಚಿಯಲ್ಲ

ಲೋಕಸಭೆ ಚುನಾವಣೆ ದಿಕ್ಸೂಚಿಯಲ್ಲ

'ಉಪ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಸಚಿವರು, ಶಾಸಕರ ಜೊತೆ ಚರ್ಚೆ ನಡೆಯುತ್ತಿದೆ. ರಾಮನಗರಕ್ಕೆ ಅಭ್ಯರ್ಥಿ ಘೋಷಣೆಯಾಗಿದೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಈ ಉಪಚುನಾವಣೆ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಲ್ಲ' ಎಂದು ದೇವೇಗೌಡರು ಹೇಳಿದರು.

ಅಭ್ಯರ್ಥಿಗಳ ಆಯ್ಕೆಗೆ ಬಂದಿಲ್ಲ

ಅಭ್ಯರ್ಥಿಗಳ ಆಯ್ಕೆಗೆ ಬಂದಿಲ್ಲ

'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಬಂದಿಲ್ಲ. ಬೆಂಗಳೂರಿಗೆ ಅವರು ಬೇರೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಉಪ ಚುನಾವಣೆ ಘೋಷಣೆಯಾದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹುಡುಕಾಟ ನಡೆದಿದೆ' ಎಂದು ದೇವೇಗೌಡರು ಹೇಳಿದರು.

ಮೊಮ್ಮಕ್ಕಳ ಸ್ಪರ್ಧೆ ಇಲ್ಲ

ಮೊಮ್ಮಕ್ಕಳ ಸ್ಪರ್ಧೆ ಇಲ್ಲ

'ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಪ್ರಜ್ವಲ್ ಅಥವ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ. ಮಂಡ್ಯದವರೇ ಆದ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಬಗ್ಗೆಯೂ ಅಂತಿಮ ತೀರ್ಮಾನ ಕೈಗೊಂಡಿಲ್ಲ' ಎಂದು ದೇವೇಗೌಡರು ಹೇಳಿದರು.

English summary
Prime Minister Narendra Modi should contest from Karnataka for 2019 Lok Sabha Election said JDS(S) supremo H.D.Deve Gowda. Narendra Modi neglected development of Karnataka he alleged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X