Prajwal Revanna Case: ಏರ್‌ಪೋರ್ಟ್‌ಗಳನ್ನು ಮ್ಯಾನೇಜ್‌ ಮಡ್ತಿರೋದ್ಯಾರು?-ಸಂತೋಷ್‌ ಲಾಡ್‌ ಹೀಗೆ ಪ್ರಶ್ನೆ ಮಾಡಿದ್ಯಾಕೆ?

Prajwal Revanna Case: ಅಶ್ಲೀಲ ವಿಡಿಯೋ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್‌ ಲಾಡ್‌ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಲಾಗಿದ್ದು, ಈ ಬಗ್ಗೆ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ತನಿಖೆ ನಡೆಸಲು ಎಸ್‌ಐಟಿ ಸಜ್ಜಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

What did Santosh Lad say about Prajwal Revanna escaping to Germany

ಶಿವಮೊಗ್ಗದಲ್ಲಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿ, ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದೆ. ಆ ಘಟನೆಗಳು ನಡೆಯಬಾರದಿತ್ತು, ನಡೆದು ಹೋಗಿದೆ. ಈ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದಾರೂ ಅವರಿಗೆ ನಮ್ಮ ಸರ್ಕಾರ ಶಿಕ್ಷೆ ನೀಡಲಿದೆ ಎಂದು ಹೇಳಿದ್ದಾರೆ. ಇನ್ನು ಸಂಸ್ರಸ್ತ ಮಹಿಳೆಯರ‌ ವಿಡಿಯೋ, ಪೋಟೋಗಳು ವೈರಲ್ ಆಗಿದ್ದು, ಈ ಬೆಳವಣಿಗೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

"ಸಂಸದ ಪ್ರಜ್ವಲ್ ರೇವಣ್ಣ ವಿಶೇಶಕ್ಕೆ ಹೋಗುವ ಮೊದಲು ರೆಡ್ ಕಾರ್ನರ್ ನೋಟೀಸ್ ಹೊರಡಿಸಬಹುದಿತ್ತು. ಏರ್‌ಪೋರ್ಟ್‌ಗಳನ್ನು ಮ್ಯಾನೇಜ್‌ ಮಡ್ತಿರೋದ್ಯಾರು? ಪ್ರಶ್ನಿದರಲ್ಲದೆ, ಯಾಕೆ ಕೇಂದ್ರ ಬಿಜೆಪಿ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಬಿಜೆಪಿ ನಾಯಕರು ಯಾಕೆ ಉತ್ತರ ನೀಡುತ್ತಿಲ್ಲ," ಎಂದು ವಾಗ್ದಾಳಿ ನಡೆಸಿದರು.

ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿದೆ. ದೂರು ಕೂಡ ದಾಖಲಾಗಿದ್ದು, ಎಸ್ಐಟಿ ತನಿಖೆ ನಡೆದ ಬಳಿಕ ಈ ಬಗ್ಗೆ ಮಾತನಾಡೋಣ ಎಂದು ಹೇಳಿದರು.

ದೇವೇಗೌಡ ಅವರು ಹೇಳಿದ್ದಾದ್ರೂ ಏನು?: ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದಾಗಿ ಸರ್ಕಾರ ತೀರ್ಮಾನ ಮಾಡಿದೆ. ಈ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದಾದ್ರೂ ಏನು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಹಾಸನ ಪೆನ್‌ಡ್ರೈವ್ ಪ್ರಕರಣ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ಅವರೇ ಪ್ರಜ್ವಲ್‌ ಅವರನ್ನು ಕರೆತಂದು ವಿಚಾರಣೆ ಮಾಡಲಿದ್ದಾರೆ ಅಂತಲೂ ಈಗಾಗಲೇ ಗೃಹ ಸಚಿವರು ತಿಳಿಸಿದ್ದಾರೆ.

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧದ ಆರೋಪಗಳ ತನಿಖೆಗೆ ಎಸ್‌ಐಟಿ ತಂವನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು ಅಂತಾ ಪ್ರಜಾವಾಣಿ ವರದಿ ಮಾಡಿದೆ.

ಭಾನುವಾರ (ಏಪ್ರಿಲ್‌ 27) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಸಿಐಡಿ, ಎಸ್‌ಐಟಿ ಎಲ್ಲವೂ ಸರ್ಕಾರದ ಕೈಯಲ್ಲಿ ಇದೆ. ತನಿಖೆಯಿಂದ ಸತ್ಯ ಹೊರಬರಲಿದೆ. ಮತ್ತೊಂದೆಡೆ ಚುನಾವಣೆ ಸಮಯದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಾರೆ. ನಾವು ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಅಂತಲೂ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+