Kodi Mutt Swamiji: ಕೋಡಿಮಠ ಶ್ರೀಗಳ ಭೇಟಿ ಬಳಿಕ ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಘೋಷಣೆ; ಸ್ವಾಮೀಜಿಯ ಆಶೀರ್ವಾದ ಏನು?
Kodi Mutt Seer: ಕೊಡಿಮಠ ಶ್ರೀಗಳು ಮಳೆ, ಬೆಳೆ, ರಾಜಕೀಯದ ಬಗ್ಗೆ ಆಗಾಗ ಸ್ಫೋಟಕ ಭವಿಷ್ಯಗಳನ್ನು ನುಡಿಯುತ್ತಿರುತ್ತಾರೆ. ಇದೀಗ ರಾಜ್ಯ ರಾಜಕೀಯದಲ್ಲಿ 'ಸೆಪ್ಟೆಂಬರ್' ಕ್ರಾಂತಿಯ ಅಲೆ ಎದ್ದಿದ್ದು, ಈ ಹಿನ್ನೆಲೆ ಡಿಕೆ ಶಿವಕುಮಾರ್ ಕೋಡಿಮಠದ ಶ್ರೀಗಳನ್ನು ಭೇಟಿ ಮಾಡಿದರು. ಈ ವೇಳೆ ಶ್ರೀಗಳು ಹೇಳಿದ್ದೇನು ಹಾಗೂ ಮುಂದಿನ ಸಿಎಂ ಆಗಿ ಯಾರು ಮುಂದುವರೆಯಲಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ತಿಳಿಯಿರಿ.
ಸಚಿವ ಕೆ.ಎನ್. ರಾಜಣ್ಣ ಅವರು ರಾಜ್ಯ ರಾಜ್ಯಕೀಯದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತೊಯಾಗಲಿದೆ ಎನ್ನುವ ಹೇಳಿಕೆಯನ್ನು ನೀಡುತ್ತಲಿದ್ದಾರೆ. ಅಲ್ಲದೆ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೋಡಿ ಶ್ರೀ ಭೇಟಿ ಮಾಡಿದರು.

ಹಾಸನ ಜಿಲ್ಲೆಯಲ್ಲಿನ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಡಿಮಠದ ಶ್ರೀಗಳನ್ನು ಭೇಟಿ ಆದರು. ಈ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ಶ್ರೀಗಳು ಮುಂದಿನ ಸಿಎಂ ಬಗ್ಗೆ ಕೊಟ್ಟ ಸೂಚನೆ ಏನು ಎಂಬ ಪ್ರಶ್ನೆ ಬಹುತೇಕರಲ್ಲಿ ಮೂಡಿದೆ. ಇದೆಲ್ಲದಕ್ಕೂ ಉತ್ತರ ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಇತ್ತೀಚೆಗೆ ಅರಸೀಕೆರೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದರು. ಹಾಲು ಕೆಟ್ಟರೂ, ಹಾಲುಮತ ಸಮುದಾಯ ಕೆಡುವುದಿಲ್ಲ ಎಂದು ಹೇಳಿದ್ದರು. ಅಂದರೆ, ಸಿದ್ದರಾಮಯ್ಯ ಅವರು ಅವರಾಗಿಯೇ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕು. ಬಲವಂತವಾಗಿ ಅವರನ್ನು ಇಳಿಸಲು ಸಾಧ್ಯ ಇಲ್ಲ ಎಂದು ಹೇಳಿದ್ದರು. ಈ ಹಿನ್ನಲೆ ಡಿ.ಕೆ.ಶಿ, ಕೋಡಿ ಶ್ರೀಗಳನ್ನು ಭೇಟಿ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದಯ, ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಇದೇ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದರು.
ನನಗೆ ಧರ್ಮ, ದೇವರು, ಸಂಸ್ಕೃತಿಯ ಬಗ್ಗೆ ನಮ್ಮ ಆಚಾರ-ವಿಚಾರಗಳ ಬಗ್ಗೆ ನಂಬಿಕೆ ಸ್ವಲ್ಪ ಹೆಚ್ಚಾಗೇ ಇದೆ. ಯಾವುದೇ ಧರ್ಮದ, ಯಾವುದೇ ಪದ್ದತಿಗಳು, ತನ್ನದೇ ಆದಂತಹ ಶಕ್ತಿಯನ್ನು ಹೊಂದಿದೆ. ಕೆಲವರು ನಂಬದೇ ಇರಬಹುದು, ಆದರೆ ಇದನ್ನು ನಂಬುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಡಿ ಶ್ರೀಗಳನ್ನು ಭೇಟಿಯಾದ ಬಳಿಕ ಹೇಳಿದರು.
ಅಲ್ಲದೆ, ತುಂಬಾ ವರ್ಷಗಳ ಬಳಿಕ ಬಳಿಕ ಇಲ್ಲಿಗೆ ಬಂದಿದ್ದೇನೆ. ಕೋಡಿಶ್ರೀಗಳು ಮಠದಲ್ಲೇ ಇದ್ದಾರೆ ಎನ್ನುವ ಮಾಹಿತಿ ಸಿಕ್ಕಿತು. ಆದ್ದರಿಂದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ. ಎಲ್ಲವೂ ಒಳ್ಳೆದಾಗುತ್ತದೆ ಎನ್ನುವ ನಂಬಿಕೆ ಇದೆ ಎಂದು ಅಂತಲೂ ಹೇಳಿದರು.
ಸರ್ಕಾರಿ ಕಾರ್ಯಕ್ರಮ ನಿಮಿತ್ತ ಅರಸೀಕೆರೆಗೆ ಸಿಎಂ ಸಿದ್ದರಾಮಯ್ಯ ಜೊತೆ ಹೆಲಿಕಾಪ್ಟರ್‌ನಲ್ಲಿ ಬಂದಿದ್ದ ಡಿ.ಕೆ.ಶಿವಕುಮಾರ್ ನಂತರ ಅಲ್ಲಿಂದ ದೇವಾಲಯಗಳಿಗೆ ಭೇಟಿ ನೀಡಿದ್ದು, ಅರಸೀಕೆರೆ ಜೇನುಕಲ್ಲು ಸಿದ್ದೇಶ್ವರ ಬೆಟ್ಟದ ಮೆಟ್ಟಿಲುಗಳಿಗೆ, ಬಳಿಕ ಜೇನುಕಲ್ಲು ಸಿದ್ದೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಬಳಿಕ ಕೋಡಿಮಠಕ್ಕೆ ಭೇಟಿ ನೀಡಿ ಬಂದ ವೇಳೆ ಮಾಧ್ಯಮದವರು ಪ್ರಶ್ನೆ ಕೇಳುವಾಗ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂಬ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ಅವರು ಕಾರ್ಯಕರ್ತರನ್ನು ಸುಮ್ಮನಿರುವಂತೆ ಹೇಳಿ ಗಮನ ಸೆಳೆದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications