ಹಾಸನ: ಕಾಯಿಲೆ ಗುಣಪಡಿಸುತ್ತೇನೆಂದು ಹೇಳಿ ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಸಾವು!
ಹಾಸನ, ಡಿಸೆಂಬರ್ 11: ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದಲ್ಲಿ ನಡೆದಿದೆ.
ದೇವರು ಹೆಸರಿನಲ್ಲಿ ವಂಚನೆ ಮಾಡುವುದನ್ನು ನೋಡಿದ್ದೀವಿ, ದೇವರ ಹೆಸರಿನಲ್ಲಿ ಶಿಕ್ಷೆ ನೀಡುವುದನ್ನು ನೋಡಿದ್ದೀವಿ, ಆದರೆ ಇಲ್ಲೊಬ್ಬ ಪೂಜಾರಿ ಪೂಜೆ ವೇಳೆ ನನಗೆ ದೇವರು ಬಂದಿದೆ, ನಾನು ನಿನ್ನನ್ನು ಕಾಯಿಲೆಯಿಂದ ಗುಣಪಡಿಸುತ್ತೇನೆಂದು ಬೆತ್ತದ ಕೋಲಿನಲ್ಲಿ ಬಲವಾಗಿ ಹೊಡೆದು, ಓರ್ವ ಮಹಿಳೆಯ ಸಾವಿಗೆ ಕಾರಣವಾಗಿದ್ದಾನೆ.
ಪೂಜಾರಿ ನೀಡಿದ ಬೆತ್ತದ ಏಟಿಗೆ 47 ವರ್ಷದ ಪಾರ್ವತಿ ಮೃತಪಟ್ಟಿರುವ ಮಹಿಳೆಯಾಗಿದ್ದಾಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಪಾರ್ವತಿ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ದೇವರ ಮೊರೆ ಹೋಗಿದ್ದರು.

ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ದೇವಸ್ಥಾನದ ಪೂಜಾರಿ ತಿಳಿಸಿದ್ದಾನೆ. ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ. ಹಿರಿಯಾಪಟ್ಟಣದಮ್ಮ ದೇವಸ್ಥಾನದ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ನಂತರ ಪೂಜಾರಿ ಮಧು ನಾಪತ್ತೆಯಾಗಿದ್ದು, ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಒಟ್ಟಾರೆಯಾಗಿ ಆಧುನಿಕ ಪ್ರಪಂಚ ಎಷ್ಟೇ ಮುಂದುವರೆದಿದ್ದರೂ ಜನ ಮಾತ್ರ ಮೂಢನಂಬಿಕೆಯನ್ನು ನಂಬುವುದು ಬಿಟ್ಟಿಲ್ಲ. ದೇವರ ಮೇಲೆ ನಂಬಿಕೆ ವಿನಃ ಪೂಜಾರಿ ಮೇಲಲ್ಲ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆಯಾಗಿದೆ.
ಆಸ್ಪತ್ರೆಯಲ್ಲಿ ಕಾಯಿಲೆ ಗುಣವಾಗಿಲ್ಲ ಎಂದು ದೇವಸ್ಥಾನಕ್ಕೆ ಹೋದರೆ ಪೂಜಾರಿ ಮಾತಿಗೆ ಬೆಲೆ ಕೊಟ್ಟು ಬೆತ್ತದ ಏಟಿ ತಿಂದು ಮಹಿಳೆ ಸಾವನಪ್ಪಿರುವುದು ನಿಜಕ್ಕೂ ವಿಪರ್ಯಾಸವೇ ಸರಿ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದ್ದು, ಆರೋಪಿ ಪೂಜಾರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಮೃತ ಮಹಿಳೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
Recommended Video
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications