Yettinahole Project: ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಸೆ.6ಕ್ಕೆ ಚಾಲನೆ, ಯೋಜನೆ ವಿವರ

ಹಾಸನ, ಸೆಪ್ಟೆಂಬರ್ 05: ಕರ್ನಾಟಕದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. 7 ಜಿಲ್ಲೆಯ ಜನರ ಕುಡಿಯುವ ನೀರಿನ ಬವಣೆ ನಿಗಿಸುವ ಯೋಜನೆಗೆ ಸೆಪ್ಟೆಂಬರ್ 6ರ ಶುಕ್ರವಾರ ಚಾಲನೆ ಸಿಗಲಿದೆ. ಇದರಿಂದಾಗಿ 10 ವರ್ಷಗಳ ಜನರ ಕನಸು ನನಸಾಗಲಿದೆ. ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ. ಎನ್. ರಾಜಣ್ಣ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡುವ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಮಹತ್ವಕಾಂಕ್ಷಿ ಎತ್ತಿನಹೊಳೆ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಕುರಿತು ಮಾಹಿತಿ ಪಡೆದ ಸಚಿವರು, ಅಧಿಕಾರಿಗಳಿಗೆ ಸೂಚನೆಗಳನ್ನು ಸಹ ಕೊಟ್ಟರು.

Yettinahole Project Inauguration Know Project Details

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆಪ್ಟೆಬಂಬರ್ 6ರಂದು ವಿದ್ಯುಕ್ತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗೌರಿ ಹಬ್ಬದ ದಿನವೇ ಎತ್ತಿನಹೊಳೆ ಯೋಜನೆಗೆ ಶುಭ ಚಾಲನೆ ಸಿಗಲಿದೆ" ಎಂದರು.

ಎತ್ತಿನಹೊಳೆ ಯೋಜನೆ ವಿವರಗಳು: ಸಚಿವ ಕೆ. ಎನ್. ರಾಜಣ್ಣ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹಾಗೂ ಹಲವು ಸಚಿವರು ಎತ್ತಿನಹೊಳೆ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ" ಎಂದರು.

"ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು ಪೂರ್ವಾಭಿಮುಖವಾಗಿ ತಿರುಗಿಸುವ ವಿನೂತನ ಯೋಜನೆ ಇದ್ದಾಗಿದೆ. ಒಟ್ಟು 7 ಪೈಪ್‌ಲೈನ್ ಮೂಲಕ ನೀರು ಮೇಲೆತ್ತಲಾಗುತ್ತಿದೆ. ಇದಕ್ಕಾಗಿ ನೀರನ್ನು ಸಂಗ್ರಹ ಮಾಡಲಾಗಿದೆ. ಮುಂದಿನ ವರ್ಷದ ವೇಳೆಗೆ ಅರಸೀಕೆರೆ ಹಾಗೂ ಜಿಲ್ಲೆಯ ಬೇರೆ ಭಾಗಕ್ಕೆ ನೀರು ಹರಿಯಲಿದೆ" ಎಂದು ಸಚಿವರು ಭರವಸೆ ನೀಡಿದರು.

"ಪ್ರಸ್ತುತ 4ನೇ ವಿತರಣೆ ತೊಟ್ಟಿಯಿಂದ ವಾಣಿವಿಲಾಸ ಸಾಗರದತ್ತ ಲಿಫ್ಟ್ ಮಾಡಿದ ನೀರು ಹರಿಯುತ್ತಿದೆ. ಎಲ್ಲಾ ಅಡೆತಡೆ ನಿವಾರಣೆ ಮಾಡಿ ಯೋಜನೆ ಜಾರಿ ಮಾಡಲಾಗುತ್ತಿದೆ. ಉಪ ಮುಖ್ಯಮತ್ರಿಗಳು ವೈಯಕ್ತಿಕ ಮುತುವರ್ಜಿಯಿಂದ ಯೋಜನೆ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಫಲಾನುಭವಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ" ಎಂದರು.

"ಇದೊಂದು ಕುಡಿಯುವ ನೀರಿನ ಯೋಜನೆಯಾಗಿದೆ. ಗುತ್ತಿಗೆದಾರರು ಸಾಕಷ್ಟು ಕಷ್ಟದ ಸನ್ನಿವೇಶ ಎದುರಿಸಿ ಯೋಜನೆ ಕಾರ್ಯಗತಗೊಳಿಸಿದ್ದಾರೆ. ಯೋಜನೆಗೆ ಸಹಕಾರ ನೀಡಿದ ಕೆಲ ಅಧಿಕಾರಿಗಳನ್ನೂ, ಜನರನ್ನು ಉದ್ಘಾಟನಾ ಕಾರ್ಯಕ್ರಮದ ದಿನ ಸನ್ಮಾನಿಸಲಾಗುತ್ತದೆ" ಎಂದು ಸಚಿವರು ತಿಳಿಸಿದರು.

"ಯೋಜನೆಗೆ ಕೆಲವೆಡೆ ಅರಣ್ಯ ಇಲಾಖೆಯ ಆಕ್ಷೇಪಗಳಿರುವುದರಿಂದ ಅಡಚಣೆ ಆಗಿದೆ. ಅರಣ್ಯ ಇಲಾಖೆಯ ಆಕ್ಷೇಪಗಳಿರುವುದರಿಂದ ಪರ್ಯಾಯ ಭೂಮಿ ನೀಡಿ ಮುಂದಿನ ವರ್ಷ ಅರಸೀಕೆರೆ ಸೇರಿದಂತೆ 7 ಜಿಲ್ಲೆಗಳಿಗೂ ನೀರು ಪೂರೈಕೆ ಮಾಡಲಾಗುವುದು. ಈ ಯೋಜನೆಯಿಂದ ನೀರಿನ ಅಗತ್ಯತೆ ಇರುವ ಬಯಲು ಸೀಮೆಯ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಉಳಿದ ಕಾಮಗಾರಿಗಳನ್ನು ಅತಿ ತುರ್ತಾಗಿ ಮಾಡಿ ಮುಂದಿನ ವರ್ಷ ಕೆರೆಗಳಿಗೆ ನೀರು ಹರಿಸುತ್ತೇವೆ" ಎಂದು ಸಚಿವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+