ಕರ್ನಾಟಕ: ಖಾಸಗಿ ವಲಯದಲ್ಲಿ ವಾರ್ಷಿಕ 13 ಲಕ್ಷ ಉದ್ಯೋಗ ಸೃಷ್ಟಿ
ಹಾವೇರಿ ಮಾರ್ಚ್ 26: ಕರ್ನಾಟಕದಾದ್ಯಂತ ಈ ಹಿಂದಿನ ನಾಲ್ಕು ವರ್ಷದಲ್ಲಿ ಖಾಸಗಿ ವಲಯದಲ್ಲಿ ಪ್ರತಿ ವರ್ಷವು ಸರಿಸರು ಮಾರು 13 ಲಕ್ಷ ಉದ್ಯೋಗ ಸೃಜನೆಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಸವಣೂರಿನಲ್ಲಿ ಭಾನುವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲ್ಯಾಣ ಗ್ರಾಮದ ಜಿಟಿಟಿಸಿ ನಿವೇಶನದ ಬಳಿ ಆಯೋಜಿಸಿದ್ದ ಸಮಾರಂಭದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಕಲ್ಯಾಣ ಗ್ರಾಮದಲ್ಲಿ ನೂತನ ತರಬೇತಿ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಉದ್ಯೋಗ ಸೃಷ್ಟಿಯಾಗಿರುವುದು ಸತ್ಯ. ಪ್ರಾವಿಡೆಂಟ್ ಫಂಡ್ ಮತ್ತು ಇಎಸ್ಐ ನಲ್ಲಿ ದಾಖಲಾಗಿರುವ 18ರಿಂದ 25 ವರ್ಷದ ಒಳಗಿನ ದಾಖಲಿಸಿಕೊಂಡಿರುವುದನ್ನು ಆಧರಿಸಿ, ಅಧ್ಯಯನ ಮಾಡಿ ಸಮಾಜಕ್ಕೆ ಈ ಮಾಹಿತಿ ನೀಡಲಾಗಿದೆ ಎಂದರು.
ಅನುತ್ತೀರ್ಣ ಅಭ್ಯರ್ಥಿಗಳಿಗೂ ಅವಕಾಶ
ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ಐಟಿ-ಬಿಟಿ ಅಷ್ಟೇ ಅಲ್ಲದೇ ಪಿಯುಸಿ ಅನುತ್ತೀರ್ಣ ಆದವರಿಗೂ ಉದ್ಯೋಗ ದೊರೆಯಬೇಕು. ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಒಂದಷ್ಟು ಯೋಜನೆ ರೂಪಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ, ಬಂಕಾಪುರ, ಉಡಚೆನ್ನಾಪುರ ಪಾಲಿಟೆಕ್ನಿಕ್ ಇಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ.
ಶಿಗ್ಗಾಂವಿ ಹಾಗೂ ಸವಣೂರು ಐಟಿಐಗಳು ತಲಾ ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಜವಳಿ ತರಬೇತಿ ಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. KSRTI ಪಾಲಿಟೆಕ್ನಿಕ್ ನಿರ್ಮಾಣವಾಗುತ್ತಿದೆ. ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದ ಕೌಶಲ್ಯಾಭಿವೃದ್ದಿ, ತರಬೇತಿಯನ್ನು ಎಲ್ಲಾ ಸಂಸ್ಥೆಗಳಲ್ಲಿಯೂ ದೊರೆಯುವಂತಾಗಬೇಕು ಎಂಬದು ನನ್ನ ಕನಸು ಎಂದು ಹೇಳಿದರು.

ತಾಲೂಕಿನ ಶಿಗ್ಗಾಂವಿಯ ಪಶು ವೈದ್ಯಕೀಯ ಪಾಲಿಟೆಕ್ನಿಕ್ ಅನ್ನು ಆರು ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇಲ್ಲಿನ ಎಲ್ಲ ಸಂಸ್ಥೆಗಳು ಸದೃಢವಾಗಿ ಬೆಳೆದು ಸಾವಿರಾರು ಯುವಕರಿಗೆ ತರಬೇತಿ ನೀಡಿದರೆ ಬದುಕಿನಲ್ಲಿ ಮುಂದೆ ಸಾಗುತ್ತಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೋವಿಡ್ ಇದ್ದರೂ ಕೂಡ ಆರ್ಥಿಕತೆ ಕಾಪಾಡಿಕೊಂಡು ಬಂದಿದ್ದರ ಪರಿಣಾಮವಾಗಿ ವಿದೇಶಿ ಬಂಡವಾಳ ಹೆಚ್ಚು ಹರಿದು ಬಂದಿದೆ. ಕರ್ನಾಟಕ ಪ್ರಗತಿಪರ ಆಡಳಿಗಾರರ ಕೈಯಲ್ಲಿ ಇದ್ದುದರಿಂದ ಇದು ಸಾಧ್ಯವಾಗಿದೆ ಎಂದರು.
ದೂರದೃಷ್ಟಿಯಿಂದ ಯುವಕರ ಭವಿಷ್ಯ ಬದಲು?
ಮುಂದಿನ ದಿನಗಳಲ್ಲಿ ಹೆಚ್ಚಿನ ಆರ್ಥಿಕತೆ, ಮೂಲ ಸೌಕರ್ಯ, ತರಬೇತಿ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಆದರೆ ಕರ್ನಾಟಕದ ಯುವಕರಿಗೆ ಕೆಲಸ, ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಎಂಬ ನಿಟ್ಟಿನಲ್ಲಿ ಪ್ರಗತಿಪರ, ದೂರದೃಷ್ಟಿ ಇರುವ ಯುವಕರ ಭವಿಷ್ಯವನ್ನು ಬರೆಯಲು ಈ ನಿರ್ಣಯಗಳನ್ನು ಸರ್ಕಾರ ತೆಗೆದುಕೊಂಡಿದೆ.
ಇಲ್ಲಿನ ಜವಳಿ ಪಾರ್ಕಿನಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಸುಮಾರು 73 ಕೋಟಿ ರೂಪಾಯಿಗಳ ಜಿಟಿಟಿಸಿ ಇಲ್ಲಿ ಬರಲಿದೆ. ನಾಲ್ಕು ವರ್ಷಗಳ ಡಿಪ್ಲೊಮಾ ಕೋರ್ಸ್,ಅಲ್ಪಾವಧಿ, ಸರ್ಟಿಫೈಡ್ ಕೋರ್ಸುಗಳು ಲಭ್ಯವಿದೆ. ಜಗತ್ತಿನ ಆಧುನಿಕ ತರಬೇತಿಯನ್ನು ಇಲ್ಲಿ ಪಡೆಯಬಹುದು. ಜವಳಿ ಪಾರ್ಕ್, ಪಶು ವೈದ್ಯಕೀಯ ಪಾಲಿಟೆಕ್ನಿಕ್ ಆಗುತ್ತಿದೆ. ಈಜವಳಿ ಪಾರ್ಕಿನಲ್ಲಿಯೇ 10 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ.
ಇದನ್ನು ಹೊರತುಪಡಿಸಿ 5 ಸಾವಿರ ಜನರಿಗೆ ಗಾರ್ಮೆಂಟ್ ಗಳಲ್ಲಿ ಕೆಲಸ ದೊರೆಯುತ್ತದೆ. ಯುವಕರಿಗೆ ಉದ್ಯೋಗದ ಭಿವಿಷ್ಯ ಬರೆಯಲು ಕಾರ್ಯಕ್ರಮ ರೂಪಿಸಿದ್ದು ಇದರ ಪ್ರಯೋಜನವನ್ನು ಯುವಕರು ಪಡೆಯಬೇಕು ಎಂದು ಸಲಹೆ ನೀಡಿದರು.
ಉದ್ಯೋಗದ ಗ್ಯಾರಂಟಿ: ಸಿಎಂ
ಜಿಟಿಟಿಸಿ ಬಹಳ ಪ್ರಮುಖ ಸಂಸ್ಥೆ. ಇಂಜಿನಿಯರಿಂಗ್ ಮುಗಿಸಿದ ನಂತರ ಜಿಟಿಟಿಸಿ ಬೆಂಗಳೂರಿನಲ್ಲಿ ಆರು ತಿಂಗಳ ತರಬೇತಿ ಪಡೆದ ಹಳೆ ನೆನಪುಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಕಲಿಕೆಯಿಂದ ಟಾಟಾ ಮೊಟರ್ಸ್ ನಲ್ಲಿ ಉದ್ಯೋಗ ಲಭಿಸಿತು. ಇಲ್ಲಿ ತರಬೇತಿ ಪಡೆದವರಿಗೆ ಶೇಕಡಾ ನೂರಕ್ಕೆ ನೂರರಷ್ಟು ಕೆಲಸ ಗ್ಯಾರಂಟಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಭಾರತಕ್ಕೆ ಕೌಶಲ್ಯವಿರುವ ಯುವಕರು ಅಗತ್ಯವಾಗಿದೆ. ಶೇಕಡಾ 40 ರಷ್ಟಿರುವ ಯುವಜನಾಂಗಕ್ಕೆ ಕೌಶಲ್ಯ ನೀಡಿದರೆ ಕೈಗಾರೀಕರಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಬಹುದು ಎಂದು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭ ಮಾಡಿದರು.ಯುವತಿಗೆ ಹಲವಾರು ವಿಧದ ತರಬೇತಿ ನೀಡಿ ಯುವಕರನ್ನು ತಯಾರು ಮಾಡಬಹುದಾಗಿದೆ. ರಾಜ್ಯದಲ್ಲಿ 1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications