ಹಾವೇರಿಯಲ್ಲಿ ಹೊಸ ದಾಖಲೆ ಬರೆದ ಕೊರೊನಾವೈರಸ್!
ಹಾವೇರಿ, ಆಗಸ್ಟ್.02: ಕರ್ನಾಟಕದಲ್ಲಿ ಸಾವಿರ ಸಾವಿರ ಪ್ರಕರಣಗಳು ಪತ್ತೆಯಾಗಿದ್ದಾಗಲೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 50ರ ಗಡಿ ದಾಟುತ್ತಿರಲಿಲ್ಲ. ಇದೀಗ ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟುವ ಮಟ್ಟಿಗೆ ಸೋಂಕಿತ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲೇ ಜಿಲ್ಲೆಯಲ್ಲಿ 146 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 1189ಕ್ಕೆ ಏರಿಕೆಯಾಗಿದೆ. ಒಂದೇ ದಿನ ಜಿಲ್ಲೆಯಲ್ಲಿ 34 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಹಾವೇರಿ ಜಿಲ್ಲೆಯ ಒಟ್ಟು 1189 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಇದುವರೆಗೂ 599 ಸೋಂಕಿತರು ಗುಣಮುಖರಾಗಿದ್ದಾರೆ. 565 ಕೊವಿಡ್-19 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಮಹಾಮಾರಿಗೆ ಜಿಲ್ಲೆಯಲ್ಲಿ ಇದುವರೆಗೂ 25 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಹಾವೇರಿ ಜಿಲ್ಲೆಯ ಯಾವ ತಾಲೂಕಿನಲ್ಲೆಷ್ಟು ಪ್ರಕರಣ:
ರಾಣೆಬೆನ್ನೂರು ತಾಲೂಕು - 56
ಹಾವೇರಿ ತಾಲೂಕು - 27
ಶಿಗ್ಗಾಂವ ತಾಲೂಕು - 20
ಹಿರೇಕೆರೂರು ತಾಲೂಕು - 17
ಬ್ಯಾಡಗಿ ತಾಲೂಕು - 15
ಸವಣೂರು ತಾಲೂಕು - 11












Click it and Unblock the Notifications