ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Kannada Sahitya Sammelana : ಇಂದಿನಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹಾವೇರಿ, ಜನವರಿ 6: ಇಂದಿನಿಂದ ಜನವರಿ 8 ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಕೆಲ ತಿಂಗಳಿನಿಂದ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು, ಶುಕ್ರವಾರ ನುಡಿ ಜಾತ್ರೆಯ ತೇರಿಗೆ ಚಾಲನೆ ಸಿಗಲಿದೆ.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಏಲಕ್ಕಿ ಕಂಪಿನ ನಗರಿ ಹಾವೇರಿ ಸಂಪೂರ್ಣವಾಗಿ ಸಜ್ಜಾಗಿದೆ. ಸುಮಾರು 128 ಎಕರೆ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಿಸಲಾಗಿದೆ. ಪ್ರಧಾನ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕುಳಿತುಕೊಳ್ಳಲು ಆಸನ ಕಲ್ಪಿಸಲಾಗಿದೆ. ಇದರ ಜೊತೆಗೆ ಸಮನಾಂತರ ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ಸಾವಿರಾರು ಜನರಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಮೂರು ವೇದಿಕೆಗಳಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪುಸ್ತಕ ಮತ್ತು ವಾಣಿಜ್ಯ ಬಳಕೆಗೆ ಸುಮಾರು 600 ಮಳಿಗೆಗಳನ್ನು ಸಿದ್ಧಪಡಿಸಲಾಗಿದೆ. ಪ್ರಮುಖವಾಗಿ ಮೂರು ಬೃಹತ್ ಮಳಿಗೆಗಳಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ. ಒಂದರಲ್ಲಿ ತೋಟಗಾರಿಕೆ ಇಲಾಖೆ ಫಲಪುಷ್ಪಪ್ರದರ್ಶನ, ಎರಡನೇಯದರಲ್ಲಿ ವಾರ್ತಾ ಇಲಾಖೆ ಪ್ರದರ್ಶನ ಮತ್ತು ಮೂರನೇಯ ಪ್ರದರ್ಶನವನ್ನು ಕಸಾಪ ಏರ್ಪಡಿಸಿತ್ತು. ಕಸಾಪ ಪ್ರದರ್ಶನದಲ್ಲಿ ವಿಶೇಷವಾಗಿ ಕನ್ನಡದ ಪ್ರಥಮಗಳ ಪುಸ್ತಕಗಳ ಪ್ರದರ್ಶನ ಮಾಡಲಾಗಿದೆ.

86th Kannada Sahitya Sammelana Inauguration In Haveri

ಸಾಹಿತ್ಯ ಸಮ್ಮೇಳನ ನಡೆಯುವ 6,7 ಮತ್ತು 8 ರಂದು ಸಂಜೆ 7 ಗಂಟೆಯಿಂದ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. 'ನಾವಾಡುವ ನುಡಿಯೇ ಕನ್ನಡ ನುಡಿ' ಶೀರ್ಷಿಕೆ ಅಡಿಯಲ್ಲಿ ಚಲನಚಿತ್ರ ಗೀತೆಗಳ ಗಾಯನ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಗಂಗಾವತಿ ಪ್ರಾಣೇಶ್‌ ಅವರ ವತಿಯಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

86th Kannada Sahitya Sammelana Inauguration In Haveri

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಂಗವಾಗಿ 86 ಸಾಧಕರಿಗೆ ಸನ್ಮಾನ ಮತ್ತು 86 ಕೃತಿಗಳನ್ನು ಬಿಡುಗಡೆ ಮಾಡುತ್ತಿರುವುದು ಸಾಹಿತ್ಯ ಸಮ್ಮೇಳನದ ವಿಶೇಷವಾಗಿದೆ.

English summary
86th Kannada Sahitya Sammelana inauguration In Haveri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X