ಹಾವೇರಿ:ನಿಷೇಧದ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆ, ಓರ್ವ ಬಲಿ

Posted By:
Subscribe to Oneindia Kannada

ಹಾವೇರಿ, ಜನವರಿ 9: ಜಿಲ್ಲಾಡಳಿತದ ನಿರ್ಬಂಧದ ನಡುವೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಮಾಸೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಮಾಸೂರಿನಲ್ಲಿ ಮಂಗಳವಾರ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಅರುಣ್ ಮಡಿವಾಳರ (39) ಎನ್ನುವಾತ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮಾಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರಗಳು : ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ

ಕಳೆದ ವರ್ಷ ಇದೇ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಈ ವರ್ಷ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.

A man killed during bull taming sport in Masur village Haveri district

ನಿಷೇಧ ನಡೆಯೂ ಮಾಸೂರಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದು, ಇದೀಗ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. 2017 ನವೆಂಬರ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಆಯನೂರು ಕೋಟೆಯಲ್ಲಿ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಒಬ್ಬ ಸಾವನ್ನಪ್ಪಿದ್ದ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A Man (Arun Madiwalr) Killed during Bull Taming sport in Masur village Haveri district today. The bull taming sport was conducted despite a ban on it.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ