ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಟಿ ದಾಳಿ : ನಾರಾಯಣ ಗೌಡ ಬಿ.ಪಾಟೀಲ ಅಮಾನತು

|
Google Oneindia Kannada News

ಹಾವೇರಿ, ಮಾರ್ಚ್ 17 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ ಬಿ.ಪಾಟೀಲ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣ ಗೌಡ ಅವರಿಗೆ ಸೇರಿದ ಹಣವನ್ನು ಐಟಿ ಇಲಾಖೆ ವಶಕ್ಕೆ ಪಡೆದಿದೆ.

ನಾರಾಯಣ ಗೌಡ ಬಿ.ಪಾಟೀಲ ಅವರನ್ನು ಅಮಾನತು ಮಾಡಿ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಓ ಕೆ.ಲೀಲಾವತಿ ಆದೇಶ ಹೊರಡಿಸಿದ್ದಾರೆ. ಒಂದು ವಾರದಿಂದ ಅವರು ಕೆಲಸಕ್ಕೆ ಗೈರು ಹಾಜರಾಗಿದ್ದರು.

ಬೆಂಗಳೂರಿನ ಖಾಸಗಿ ಹೋಟೆಲ್‌ ಮೇಲೆ ಐಟಿ ದಾಳಿಬೆಂಗಳೂರಿನ ಖಾಸಗಿ ಹೋಟೆಲ್‌ ಮೇಲೆ ಐಟಿ ದಾಳಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ವಿನಾಯಕ ಹಲ್ಲೂರ ಅವರು ಜಿಲ್ಲಾ ಪಂಚಾಯಿತಿ ಸಿಒಓಗೆ ಪತ್ರ ಬರೆದಿದ್ದರು. 'ನಾರಾಯಣ ಗೌಡ ಪಾಟೀಲ್ ಒಂದು ವಾರದಿಂದ ಕೆಲಸಕ್ಕೆ ಗೈರಾಗಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಮನವಿ ಮಾಡಿದ್ದರು.

ಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲ

ರಾಜ್ಯ ಲೆಕ್ಕಪತ್ರ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿದ್ದ ನಾರಾಯಣ ಗೌಡ ಬಿ.ಪಾಟೀಲ ಅವರು 2015ರ ಏಪ್ರಿಲ್‌ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ನಿಯೋಜನೆಗೊಂಡಿದ್ದರು.

ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?

ಹೋಟೆಲ್‌ನಲ್ಲಿ ಹಣ ಪತ್ತೆ

ಹೋಟೆಲ್‌ನಲ್ಲಿ ಹಣ ಪತ್ತೆ

ಗುರುವಾರ ಸಂಜೆ ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿಯ ರಾಜಮಹಲ್ ಹೋಟೆಲ್‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಕೊಠಡಿ ಸಂಖ್ಯೆ 104, 105, 115ರಲ್ಲಿ 1.5 ಕೋಟಿಗೂ ಅಧಿಕ ಹಣ ಪತ್ತೆಯಾಗಿತ್ತು.

ನಾರಾಯಣ ಗೌಡ ಬಿ.ಪಾಟೀಲ

ನಾರಾಯಣ ಗೌಡ ಬಿ.ಪಾಟೀಲ

ರಾಜಮಹಲ್ ಹೋಟೆಲ್‌ ಮೇಲೆ ಐಟಿ ದಾಳಿ ನಡೆಸಿದಾಗ 1.5 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿತ್ತು. ಈ ಹಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ ಬಿ.ಪಾಟೀಲ ಅವರಿಗೆ ಸೇರಿದ್ದು ಎಂದು ಶಂಕಿಸಲಾಗಿದೆ.

ಐಟಿ ಇಲಾಖೆ ನೋಟಿಸ್

ಐಟಿ ಇಲಾಖೆ ನೋಟಿಸ್

ಐಟಿ ದಾಳಿಯ ಬಳಿಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ ಬಿ.ಪಾಟೀಲ ಪರಾರಿಯಾಗಿದ್ದು ಇನ್ನೂ ಪತ್ತೆಯಾಗಿಲ್ಲ. ವಿಚಾರಣೆಗೆ ಹಾಜರಾಗುವಂತೆ ಐಟಿ ಅವರಿಗೆ ನೋಟಿಸ್ ನೀಡಿದೆ.

ಬಿಜೆಪಿ ಆರೋಪ

ಬಿಜೆಪಿ ಆರೋಪ

ಹೋಟೆಲ್‌ನಲ್ಲಿ ಹಣ ಪತ್ತೆಯಾದ ಬಳಿಕ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಚುನಾವಣೆಗಾಗಿ ಸರ್ಕಾರ ಹಣ ಸಂಗ್ರಹ ಮಾಡುತ್ತಿದೆ. ಇದು 20 ಪರ್ಸೆಂಟ್ ಸರ್ಕಾರ ಎಂದು ಟೀಕಿಸಿತ್ತು. ಸಚಿವ ಕೃಷ್ಣಬೈರೇಗೌಡ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತ್ತು.

English summary
Haveri zilla panchayath CEO suspended the Narayana Gowda Patil engineer belongs to the rural development department. Income Tax department conduct a search and seize the unaccounted money 1.5 crore money in Rajmahal hotel Bengaluru. It is suspect that money belongs to Narayana Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X