ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವ ಬಿ.ಸಿ. ಪಾಟೀಲ್

|
Google Oneindia Kannada News

ಬೆಂಗಳೂರು, ಮಾ. 02: ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ಲಸಿಕೆ ಪಡೆಯುವ ಮೂಲಕ ಜನ ಸಾಮಾನ್ಯರಲ್ಲಿನ ಅನಗತ್ಯ ಭಯ ಹಾಗೂ ತಪ್ಪು ಅಭಿಪ್ರಾಯವನ್ನು ಹೋಗಲಾಡಿಸಲು ಪ್ರಯತ್ನಿಸಿದ್ದಾರೆ. ಆ ಮೂಲಕ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸಿಕೊಂಡಿದ್ದನ್ನು ಹಲವು ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಈ ಮಧ್ಯೆ ಬಿಜೆಪಿ, ತನ್ನ ಸಂಸದರು, ಸಚಿವರು ಹಾಗೂ ಶಾಸಕರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಹೀಗಾಗಿ ರಾಜ್ಯದಲ್ಲಿಯೂ ಬಿಜೆಪಿ ಸಚಿವರು, ಶಾಸಕರು ಒಬ್ಬೊಬ್ಬರಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ತಮ್ಮ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೊರೊನಾ ಲಸಿಕೆ ಪಡೆದಿದ್ದಾರೆ.

Agriculture Minister BC Patil has taken corona virus vaccine in Hirekerur

ಲಸಿಕೆ ಹಾಕಿಸಿಕೊಂಡ ಬಳಿಕ ಮಾತನಾಡಿದ ಅವರು, ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಅದರತ್ತ ಯಾರೂ ಗಮನ ಕೊಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಗಾಗಿ ಕೊರೊನಾ ಲಸಿಕೆ ನೀಡುತ್ತಿದೆ‌. ಅದರಲ್ಲಿಯೂ ಪ್ರಧಾನಿ ನರೇಂದ್ರ‌ ಮೋದಿ ಅವರೂ ಕೂಡ ಕೊರೊನಾ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.

Agriculture Minister BC Patil has taken corona virus vaccine in Hirekerur

ಸಂಪೂರ್ಣ ಸ್ವದೇಶಿ ಕೊರೊನಾ ಲಸಿಕೆಗೆ, ವಿಶ್ವದಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ. ಕೊರೋನಾ ಆತಂಕದ ಸಮಯದಲ್ಲಿ ರಾಜ್ಯ ಹಾಗೂ ಹಾಗೂ ಕೇಂದ್ರ ಸರ್ಕಾರಗಳು ಜನರೊಂದಿಗೆ ನಿಂತು, ಅವರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಿವೆ. ಲಸಿಕೆ ಪಡೆದ ಬಳಿಕ ವೈದ್ಯರು ಸೂಚಿಸುವ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ಭಯವಿಲ್ಲದೆ ನಿರ್ಭೀತಿಯಿಂದ ಕೊರೊನಾ ಲಸಿಕೆ ಪಡೆಯಬೇಕೆಂದು ಸಚಿವ ಪಾಟೀಲ್ ಇದೇ ಸಂದರ್ಭದಲ್ಲಿ ಜನರಲ್ಲಿ ಮನವಿ ಮಾಡಿದ್ದಾರೆ.

Recommended Video

ಭಾರತೀಯರಿಲ್ಲದೆ ಪರ್ಸಿವರೆನ್ಸ್ ರೋವರ್ ನಿಯಂತ್ರಣ ಸಾಧ್ಯವಿಲ್ಲ | Oneindia Kannada

English summary
Minister of Agriculture B.C. Patil has taken corona virus vaccine in his home at Hirekerurr in Haveri district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X