ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಬಸವರಾಜ ಬೊಮ್ಮಾಯಿ

By Lekhaka
|
Google Oneindia Kannada News

ಹಾವೇರಿ, ನವೆಂಬರ್ 02: ಹಾವೇರಿಯಲ್ಲಿ ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದರು.

85 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಕಳೆಗಟ್ಟಿದ ಕಲಬುರಗಿ85 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಕಳೆಗಟ್ಟಿದ ಕಲಬುರಗಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬ ಕುರಿತು ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿ ನಂತರ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.

Akhila Bharatha Kannada Sahitya Sammelana Will Be Held In Haveri This Time

ಇದೇ ಸಮಯ ಯಡಿಯೂರಪ್ಪ ಅವರ ಬದಲಾವಣೆ ಕುರಿತ ಸುದ್ದಿಯ ಕುರಿತು ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಸಂಪೂರ್ಣ ಅವಧಿ ಪೂರೈಸಲಿದ್ದಾರೆ. ಮುಂದಿನ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದರು.

Recommended Video

DK Ravi ನಾನು ತುಂಬಾ ಚನ್ನಾಗಿದ್ವಿ! | Kusuma Exclusive Interview | Part 2 | Oneindia Kannada

ಕಳೆದ ಬಾರಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರಗಿ ಜಿಲ್ಲೆಯಲ್ಲಿ ನಡೆಸಲಾಗಿತ್ತು. 2020ರ ಫೆಬ್ರುವರಿ ತಿಂಗಳಿನಲ್ಲಿ ಸಮ್ಮೇಳನವನ್ನು ನಡಸಲಾಗಿದ್ದು, ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ ಅವರು ವಹಿಸಿದ್ದರು.

English summary
Akhila Bharatha Kannada Sahitya Sammelana will be decided to held in Haveri this time, informed minister Basavaraj Bommai
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X