Haveri Election Results: ಸಂಸತ್‌ಗೆ ಆಯ್ಕೆ ಬಗ್ಗೆ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಹಾವೇರಿ, ಜೂನ್ 04: ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕ ಸ್ಥಾನ ಗಳಿಸಿದ್ದ ಕಾಂಗ್ರೆಸ್‌ನ ನಂಬಿಕೆಯನ್ನು ಬಿಜೆಪಿ ಈ ಚುನಾವಣೆಯಲ್ಲಿ ಒಡೆದಿದೆ.
ಗೆಲುವಿನ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಮತ್ತೆ ಎನ್ ಡಿಎ ಸರ್ಕಾರ ರಚನೆಯಾಗುವ ವಿಶ್ವಾಸ ಇದೆ ಎಂದರು.

ದೇಶದಲ್ಲಿ ಎನ್‌ಡಿಗೆ ಇರುವ ಮುನ್ನಡೆ ನೋಡಿದಾಗ ನಿರೀಕ್ಷೆಗಿಂತ ಕಡಿಮೆ ಸೀಟುಗಳು ಬಂದಿರುವುದು ಗೊತ್ತಾಗಿದೆ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ನಿರೀಕ್ಷಿತ ಮಟ್ಟಕ್ಕಿಂತ ಕಡಿಮೆ ಸೀಟುಗಳು ಬಂದಿವೆ. ಎನ್ ಡಿಎ ಗೆ ಹೆಚ್ಚು ಸ್ಥಾನ ಸಿಗಲಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಅವರು ಪುನರುಚ್ಚರಿಸಿದರು.
ಹಿನ್ನಡೆ ಬಗ್ಗೆ ಶೀಘ್ರವೇ ವಿಶ್ಲೇಷಣೆ
ಕೆಲವು ರಾಜ್ಯದಲ್ಲಿ ನಿರೀಕ್ಷೆಗಿಂತ ಕಡಿಮೆ ಸೀಟುಗಳು ಎನ್‌ಡಿಗೆ ಬಂದಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ. ಈ ಹಿನ್ನಡೆಗೆ ಸ್ಥಳೀಯ ಕಾರಣಗಳು ಇವೆ ಎಂದು ಮನವರಿಕೆಯಾಗಿದ್ದು, ಅವುಗಳನ್ನು ವಿಶ್ಲೇಷಣೆ ಮಾಡಲಾಗುವುದು ಎಂದು ಹೇಳಿದರು.

ಸೀಟುಗಳು ಕಡಿಮೆ ಬರಲು, ಕಳೆದ ಬಾರಿಗಿಂತ ಈ ಭಾರಿ ಹಿನ್ನಡೆ ಆಗಲು ಕೆಲವು ಸ್ಥಳಿಯ ಮಟ್ಟದ ಕಾರಣಗಳು ಇರಬಹುದು. ವಿಶ್ಲೇಷಣೆ ಜೊತೆಗೆ ಆ ಕೊರತೆಗಳನ್ನು ಸರಿಪಡಿಸಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸುತ್ತೇವೆ ಎಂದು ಅವರು ತಿಳಿಸಿದರು.
ಕರ್ನಾಟಕದಲ್ಲಿ 4-5 ಸ್ಥಾನ ಕಳೆದುಕೊಂಡಿದ್ದೇವೆ
ಇನ್ನೂ ಕರ್ನಾಟಕದ ವಿಷಯಕ್ಕೆ ಬರುವುದಾದರೆ ಕಲ್ಯಾಣ ಕರ್ನಾಟಕದಲ್ಲೂ ಬಿಜೆಪಿ ಹಿನ್ನೆಡೆಯಾಗಿದೆ. ಬರುವ ದಿನದಲ್ಲಿ ವಿಶ್ಲೇಷಣೆ ಮಾಡುತ್ತೇವೆ. ಕರ್ನಾಟಕದಲ್ಲಿ ಇನ್ನೂ 4 ರಿಂದ 5 ಸ್ಥಾನ ಬರಬೇಕಿತ್ತು. ಆದರೆ, ಅಲ್ಪ ಪ್ರಮಾಣದಲ್ಲಿ ಮೂರು ನಾಲ್ಕು ಸ್ಥಾನ ಕಳೆದುಕೊಂಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಜೆ 4.30ರವರೆಗೆ 7.05 ಲಕ್ಷ ಮತಗಳು ಬಂದಿದ್ದು, ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ 6.62 ಲಕ್ಷ ಮತಗಳು ಬಂದಿವೆ. ಸದ್ಯ ಬಿಜೆಪಿ ಮುನ್ನಡ ಸಾಧಿಸಿ ಗೆಲುವು ಗಳಿಸಿದೆ. ಸಂಜೆ ಅಧಿಕೃತ ಘೋಷಣೆ ಆಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications