• search
 • Live TV
ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮನೆಯಲ್ಲಿ ಲಸಿಕೆ ಪಡೆದ ಸಚಿವರು; ಅಧಿಕಾರಿ ಅಮಾನತು

|
Google Oneindia Kannada News

ಹಾವೇರಿ, ಏಪ್ರಿಲ್ 01; ಕರ್ನಾಟಕದ ಕೃಷಿ ಸಚಿವ ಬಿ. ಸಿ. ಪಾಟೀಲ್ ಆಸ್ಪತ್ರೆಗೆ ತೆರಳದೇ ಮನೆಯಲ್ಲಿಯೇ ಕೋವಿಡ್ ಲಸಿಕೆ ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

64 ವರ್ಷದ ಬಿ. ಸಿ. ಪಾಟೀಲ್ ಮಾರ್ಚ್ ತಿಂಗಳಿನಲ್ಲಿ ಕೋವಿಡ್ ಲಸಿಕೆ ಪಡೆದಿದ್ದರು. ಆಸ್ಪತ್ರೆಗೆ ಹೋಗದ ಸಚಿವರು ಹಿರೆಕೇರೂರಿನ ನಿವಾಸದಲ್ಲಿಯೇ ಲಸಿಕೆ ಪಡೆದಿದ್ದರು. ಈ ಕುರಿತು ಭಾರೀ ಚರ್ಚೆಗಳು ನಡೆದಿದ್ದವು.

ಕೊರೊನಾ ಎರಡನೇ ಅಲೆ; ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಸಚಿವ ಬಿ.ಸಿ. ಪಾಟೀಲ್ ಹೇಳಿಕೆಕೊರೊನಾ ಎರಡನೇ ಅಲೆ; ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿ ಝೆಡ್. ಆರ್. ಮಕಾನದಾರ್ ಅಮಾನತುಗೊಳಿಸಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ. ವಿ. ತ್ರಿಲೋಕಚಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಕಿಸಾನ್ ಕಾಂಗ್ರೆಸ್ ಪ್ರತಿಭಟನೆ

ಮಾರ್ಚ್ 2ರಂದು ತಾಲೂಕು ಆಸ್ಪತ್ರೆಯ ಸಿಬ್ಬಂದಿ ಕೃಷಿ ಸಚಿವರ ನಿವಾಸಕ್ಕೆ ಆಗಮಿಸಿ ಕೋವಿಡ್ ಲಸಿಕೆ ನೀಡಿದ್ದರು. ತಾಲೂಕು ಆರೋಗ್ಯಾಧಿಕಾರಿಗಳ ಸೂಚನೆಯಂತೆ ಸಿಬ್ಬಂದಿಗಳು ಲಸಿಕೆಯನ್ನು ಆಸ್ಪತ್ರೆಯಿಂದ ಹೊರಗೆ ತೆಗೆದುಕೊಂಡು ಹೋಗಿದ್ದರು.

ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ

ಸಚಿವರ ಮನೆಗೆ ಹೋಗಿ ಲಸಿಕೆ ನೀಡಿದ ಪ್ರಕರಣದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು. ವರದಿ ಬಂದ ಬಳಿಕ ಇದು ಕರ್ತವ್ಯ ಲೋಪ, ಇದಕ್ಕೆ ತಾಲೂಕು ಆರೋಗ್ಯಾಧಿಕಾರಿ ಬೇಜವಬ್ದಾರಿಯೇ ಕಾರಣ ಎಂದು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸಚಿವರ ಸಮರ್ಥನೆ; ಮನೆಯಲ್ಲಿ ಲಸಿಕೆ ಪಡೆದಿದ್ದು ವಿವಾದವಾದ ಬಳಿಕ ಸಚಿವರು ಪ್ರತಿಕ್ರಿಯೆ ನೀಡಿದ್ದರು. "ನಾನು ನನ್ನ ಪತ್ನಿ ಜೊತೆ ಲಸಿಕೆ ತೆಗೆದುಕೊಂಡಿದ್ದೇನೆ. ಆದರೆ, ಇದನ್ನು ಕೆಲವರು ಟಾರ್ಗೆಟ್ ಮಾಡುತ್ತಿದ್ದಾರೆ. ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದರು.

   ಮೂಗಿನಿಂದ ವೈರಸ್ ಹರಡೋದು ಜಾಸ್ತಿ ! | Oneindia Kannada

   "ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಆಸ್ಪತ್ರೆಗೆ ಹೋದರೆ ಅಲ್ಲಿರುವ ಜನರಿಗೆ ತೊಂದರೆ ಆಗುತ್ತದೆ ಎಂಬ ದೃಷ್ಟಿಯಿಂದ ಆಸ್ಪತ್ರೆಗೆ ಹೋಗಿಲ್ಲ. ಮನೆಯಲ್ಲಿಯೇ ಜನರ ದೂರುಗಳನ್ನು ಆಲಿಸುತ್ತಾ ಲಸಿಕೆ ಪಡೆದಿದ್ದೇನೆ" ಎಂದು ಹೇಳಿದ್ದರು.

   English summary
   Karnataka agricultural minister B C Patil got into a controversy after taking the COVID vaccine at his house instead of going to a hospital. Now taluk health officer suspended in the issue.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X