ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಹಾವೇರಿ, ಡಿಸೆಂಬರ್ 21 : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟ ಘಟನೆ ಹಾವೇರಿಯಲ್ಲಿ ಗುರುವಾರ ನಡೆದಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಸಂಕ್ಲಿಪೂರ ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು ಮಹಬೂಬಸಾಬ ಮೌಲಾಸಾಬ ಮೇವುಂಡಿ (38) ರಮೇಶ ಬಸಪ್ಪ ತೋಟಗೇರ (32 ) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆಗೆ ಗಾಯಗಳಾಗಿವೆ.

ಲಕ್ಷ್ಮೇಶ್ವರ ನಿವಾಸಿ ಮೆಹಬೂಬ್, ಕಡಕೋಳ ನಿವಾಸಿ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೇಖಾ, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications