Swati Case: 'ಲವ್ ಜಿಹಾದ್ ಆರೋಪಿ ಬಂಧಿಸದ ಸರ್ಕಾರ: ಹದಗೆಟ್ಟ ಕಾನೂನು ಸುವ್ಯವಸ್ಥೆ'
ಹಾವೇರಿ, ಮಾರ್ಚ್ 18: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಮೇಲೆ ಸರ್ಕಾರ ಹಿಡಿದ ಕಳೆದುಕೊಂಡಿದ್ದು, ಇದಕ್ಕೆ ಹಾವೇರಿ, ಹಂಪಿ ಪ್ರಕರಣಗಳೇ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ಈಗಾಗಲೇ ರಾಮನಗರದಲ್ಲಿ ತಲೆ ತಗ್ಗಿಸುವಂತಹ ಘಟನೆ ಜರುಗಿದೆ. ಬಿಡದಿಯ ಟೊಯೋಟಾ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಪರ ಘೋಷಣೆ ಬರೆಯಲಾಗಿತ್ತು. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದು ಬಹಳ ಪ್ರತಿಷ್ಠಿತ ಕಂಪನಿಯಾಗಿದ್ದು, ಎಲ್ಲ ಕಡೆ ಸಿಸಿಟಿವಿ ಕ್ಯಾಮರಾ ಇದೆ. ಆದರೂ ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸ ಮಾಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹಾವೇರಿ ಸ್ವಾತಿ ಬ್ಯಾಡಗಿಯದ್ದ ಲವ್ ಜಿಹಾದ್ ಪ್ರಕರಣ!
ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬದ ಸ್ನೇಹ ಲವ್ ಜಿಹಾದ್‌ನಲ್ಲಿ ಅಂತ್ಯವಾಗಿದೆ. ಹಾವೇರಿ ಜಿಲ್ಲೆಯ ಯುವತಿ ಸ್ವಾತಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸಲಾಗಿತ್ತು. ನಂತರ ಕಿಡಿಗೇಡಿ ಯುವಕರು ಮದುವೆಯ ಪ್ರಸ್ತಾಪ ಮಾಡಿ ಆಕೆಯನ್ನು ನಂಬಿಸಿದ್ದರು. ಬಳಿಕ ಆಕೆಯನ್ನು ಪಾಳು ಬಿದ್ದ ಶಾಲೆಗೆ ಕರೆದುಕೊಂಡು ಹೋಗಿ ಕೇಸರಿ ಟವೆಲ್‌ನಲ್ಲಿ ಸಾಯಿಸಿದ್ದಾರೆ. ಈ ಪ್ರಕರಣದ ಎಫ್‌ಐಆರ್ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೆ ಪೊಲೀಸರು ಪ್ರಕರಣ ಮುಚ್ಚಿಹಾಕಿದ್ದಾರೆ ಎಂದು ದೂರಿದರು.
ಈ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಲವ್ ಜಿಹಾದ್ ಘಟನೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿತ್ತು. ಲವ್ ಜಿಹಾದ್ ನಡೆಯುತ್ತಿದ್ದರೂ ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅವರು ಗಂಭೀರ ಆರೋಪ ಮಾಡಿದರು.

ಸ್ವಾತಿಯ ಕುಟುಂಬದ ಸ್ಥಿತಿ ಚೆನ್ನಾಗಿಲ್ಲ. ಅವರ ತಂದೆ ವಿದ್ಯುತ್ ಶಾಕ್ ತಗುಲಿ ತೀರಿಕೊಂಡಿದ್ದರು. ಸ್ವಾತಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಹೋರಿ ಹಬ್ಬ ನಡೆದಾಗ ಅಲ್ಲಿಗೆ ಸ್ನೇಹಿತರ ಜೊತೆ ಹೋಗುತ್ತಿದ್ದರು. ಈಗ ಅವರ ಕುಟುಂಬ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದರು.
ಐತಿಹಾಸಿ, ಪ್ರವಾಸಿ ಸ್ಥಳ ಹಂಪಿ ಘಟನೆ
ರಾಜ್ಯದ ಪ್ರವಾಸಿ ತಾಣ, ಐತಿಹಾಸಿಕ ಸ್ಥಳ ಹಂಪಿ ಸಮೀಪ ಕೊಪ್ಪಳ ಜಿಲ್ಲೆ ವ್ಯಾಪ್ತಿಯ ಗಂಗಾವತಿ ತಾಲೂಕಿನ ತುಂಗಭದ್ರಾ ನದಿ ಕಾಲುವೆಯಲ್ಲಿ ಶವ ಪತ್ತೆಯಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರಿಗೆ ಇಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ. ಮೂರು ಆರೋಪಿಗಳು ಒಡಿಶಾ ಮೂಲದ ವ್ಯಕ್ತಿಯನ್ನು ನಾಲೆಗೆ ನೂಕಿದ್ದು, ಆತ ಶವವಾಗಿ ಪತ್ತೆಯಾಗಿದ್ದಾರೆ.
ಇಸ್ರೇಲ್ ಮಹಿಳೆ ಹಾಗೂ ಹೋಮ್‌ಸ್ಟೇ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ರಾಜ್ಯದೆಲ್ಲಡೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶೇಕಡಾ 60ಕ್ಕೂ ಗೂ ಅಧಿಕ ಪ್ರವಾಸಿಗರು ಇಸ್ರೇಲ್‌ನಿಂದ ರಾಜ್ಯಕ್ಕೆ ಬರುತ್ತಾರೆ. ಇಲ್ಲಿ ಸುರಕ್ಷತೆ ಇರುವ ಕಾರಣಕ್ಕೆ ವಿದೇಶಿಯರು ಭೇಟಿ ನೀಡುತ್ತಾರೆ. ಈ ಘಟನೆಯಿಂದಾಗಿ ಪ್ರವಾಸಿಗರು ಬರುತ್ತಿಲ್ಲ. ಇದರಿಂದಾಗಿ ಹಂಪಿಗೆ ಕೆಟ್ಟ ಹೆಸರು ಬರುವುದರ ಜೊತೆಗೆ, ಆರ್ಥಿಕತೆ ಕುಸಿದಿದೆ. ಇಷ್ಟೆಲ್ಲ ಆದ ನಂತರವೂ, ವಿದೇಶಿಯರು ನಮ್ಮನ್ನು ಹೊಗಳಿದ್ದಾರೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿದ್ದಾರೆ. ಆದರೆ ಘಟನೆ ನಡೆದಿದ್ದರ ಬಗ್ಗೆ ಆರ್.ಅಶೋಕ್ ಕಳವಳ ವ್ಯಕ್ತಪಡಿಸಿದರು.
ಗೂಂಡಾ ರಾಜ್ಯ ಸೃಷ್ಟಿ
ತಲೆ ತಗ್ಗಿಸುವಂತಹ ಅಪರಾಧಿ ಚಟುವಟಿಕೆಗಳು ನಡೆಯುತ್ತಿದ್ದರೂ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಇದರಿಂದಾಗಿ ಸರ್ಕಾರ ಬದುಕಿದೆಯೇ ಸತ್ತಿದೆಯೇ ಎಂಬ ಪ್ರಶ್ನೆ ಬರುತ್ತಿದೆ. ಹೇಳುವವರು, ಕೇಳುವವರು ಯಾರೂ ಇಲ್ಲದೆ ಗೂಂಡಾ ರಾಜ್ಯ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇಂತಹ ಸ್ಥಿತಿಯನ್ನು ಸೃಷ್ಟಿಸಿದ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಎಂದರು.












Click it and Unblock the Notifications