ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈತರು, ಕಾರ್ಮಿಕರು, ಪರಿಶಿಷ್ಟರಿಗೆ ಬಿಜೆಪಿ ಸರ್ಕಾರ ಸ್ಪಂದನೆ: ಸಿಎಂ ಬೊಮ್ಮಾಯಿ

By ಹಾವೇರಿ ಪ್ರತಿನಿಧಿ
|
Google Oneindia Kannada News

ಹಾವೇರಿ, ಆಗಸ್ಟ್ 28: "ರೈತರು, ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಪಂದಿಸುವುದೇ ರಾಜ್ಯ ಸರ್ಕಾರದ ಮುಖ್ಯ ಧ್ಯೇಯವಾಗಿದೆ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿಯಲ್ಲಿ ಮೆಗಾ ಜವಳಿ ಪಾರ್ಕ್, ಹಾವೇರಿಯಲ್ಲಿ ಒಂದು ಸಾವಿರ ಎಕರೆಯ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಿ ಉದ್ಯೋಗ ಹೆಚ್ಚಳಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಹಿರೇಕೆರೂರು ತಾಲ್ಲೂಕಿನ ಜಂಗಮನಕೊಪ್ಪದ ಕೆಎಂಎಫ್ ಘಟಕದಲ್ಲಿ ನೂತನ ಡೇರಿ ಹಾಗೂ ಯುಹೆಚ್‌ಟಿ ಹಾಲು ಪ್ಯಾಕಿಂಗ್ ಘಟಕದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

 BJP Government Responds To Farmers, Workers And Scheduled Tribes: CM Basavaraj Bommai

"ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೂವರೆ ಗಂಟೆಗಳ ಅವಧಿಯಲ್ಲಿ ರೈತರ ಮಕ್ಕಳಿಗೆ ಶಿಷ್ಯವೇತನ ಘೋಷಿಸಿದೆ. ಈ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಸೆ.5 ರಂದು ಕೇಂದ್ರ ಕೃಷಿ ಸಚಿವರು ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಒಂದು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. 20 ಲಕ್ಷ ಮಕ್ಕಳಿಗೆ ಪ್ರಯೋಜನವಾಗಲಿದೆ," ಎಂದು ವಿವರಿಸಿದರು.

"ನಗರಗಳ ಕೊಳಚೆ ಪ್ರದೇಶಗಳಲ್ಲಿ ಕೋವಿಡ್ ಲಸಿಕಾಕರಣಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಶೇ.90 ರಿಂದ 95 ರಷ್ಟು ಜನರ ಹಂಚಿನ ಮನೆಗಳಿದ್ದರೆ, ಮನೆಯಲ್ಲಿ ಯಾರಾದರೊಬ್ಬವರು ವಿದ್ಯಾವಂತರಿದ್ದು, ಕೃಷಿಯ ಜೊತೆಗೆ ಪೂರಕ ಉದ್ಯೋಗ, ನೌಕರಿಗಳನ್ನು ಮಾಡುವವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿರುವುದನ್ನು ಗಮನಿಸಿ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಈ ಯೋಜನೆಯನ್ನು ದೇಶದಲ್ಲೇ ಪ್ರಥಮವಾಗಿ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ," ಎಂದರು.

"ಆ.30ರಂದು ತಜ್ಞರ ಸಭೆ ನಡೆಸಿ ಶಾಲೆಗಳ ಪುನರಾರಂಭ ಹಾಗೂ ಕೋವಿಡ್ ಸಂಭಾವ್ಯ ಮೂರನೇ ಅಲೆ ತಡೆಯ ಕ್ರಮಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು," ಎಂದು ತಿಳಿಸಿದರು.

 BJP Government Responds To Farmers, Workers And Scheduled Tribes: CM Basavaraj Bommai

"ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಉದ್ಯೋಗ ಹೆಚ್ಚಳ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ದೆಹಲಿಯ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗೆ ಭೇಟಿ ನೀಡಲಾಗಿದೆ. ಅದೇ ಮಾದರಿಯಲ್ಲಿ ಉದ್ಯೋಗ ಸೃಜನೆಯ ಕ್ರಮವಾಗಿ ಶಿಗ್ಗಾಂವಿ, ಸವಣೂರ, ಹಿರೇಕೆರೂರು, ಬ್ಯಾಡಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು," ಎಂದರು.

"ರಾಜ್ಯವನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲು ಚಿಂತನೆ ನಡೆದಿದೆ. ಎಲ್ಲಾ ಹಳ್ಳಿಗಳಿಗೂ ಉತ್ತಮ ಗುಣಮಟ್ಟದ ಇಂಟರ್‌ನೆಟ್, ಬ್ರಾಡ್‌ಬ್ಯಾಂಡ್ ಸೌಲಭ್ಯ ಒದಗಿಸಿದರೆ ಆಡಳಿತದಲ್ಲಿ ಚುರುಕುತನ, ಸರಕಾರದ ಸೌಲಭ್ಯಗಳ ವಿತರಣೆ, ರೈತರ ಚಟುವಟಿಕೆಗಳಿಗೂ ಅನುಕೂಲವಾಗಲಿದೆ," ಎಂದರು.

"ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಹಾಗೂ ಮಾವು ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಮೆಣಸಿನಕಾಯಿ ಹಾಗೂ ಮಾವು ಬೆಳೆಯ ಉತ್ಪಾದನೆ ಹೆಚ್ಚಳ ಹಾಗೂ ಸಂಸ್ಕರಣ ಚಟುವಟಿಕೆಗಳಿಗೆ ನಬಾರ್ಡ್‌ನಿಂದ ಹಣಕಾಸಿನ ನೆರವು ನೀಡಲಾಗುವುದು," ಎಂದು ಹೇಳಿದರು.

"ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಮಗಾರಿ ನಡೆದಿದ್ದು, ಮುಂಬರುವ 18 ತಿಂಗಳಲ್ಲಿ ಆಡಳಿತ ಮತ್ತು ಬೋಧನಾ ವಿಭಾಗ ಪೂರ್ಣಗೊಳಿಸಿ ಎಂಬಿಬಿಎಸ್ ಪ್ರವೇಶ ಪ್ರಾರಂಭಿಸಲಾಗುವುದು. ಜಂಗಮನಕೊಪ್ಪದ ಮೆಗಾ ಡೇರಿಯೂ ಕೂಡ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಜನತೆಯ ಆಶೋತ್ತರಗಳ ಈಡೇರಿಕೆಗೆ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸಲಿದೆ. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದು, ಶೀಘ್ರವೇ ಆಯುಕ್ತರನ್ನು ನೇಮಿಸಿ, ಅನುದಾನ ಒದಗಿಸಲಾಗುವುದು," ಎಂದರು.

Recommended Video

ಧೋನಿ ವರ್ಷದ ಆದಾಯ ಕೇಳಿದ್ರೆ ಶಾಕ್ ಆಗ್ತೀರಾ! | Oneindia Kannada

ಈ ವೇಳೆ ಕೃಷಿ ಸಚಿವ ಬಿ.ಸಿ. ಪಾಟೀಲ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ, ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಹಾಗೂ ಇತರರು ಪಾಲ್ಗೊಂಡಿದ್ದರು.

English summary
The main objective of the state government is to respond to the farmers, the poor, the Scheduled Castes and the Scheduled Tribes, CM Basavaraj Bommai said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X