ಹಾವೇರಿ: ಅತ್ಯಾಚಾರಿಗಳಿಂದ ಮಹಿಳೆಯನ್ನು ರಕ್ಷಿಸಿದ ಎಮ್ಮೆ!
ಹಾವೇರಿ, ಜೂನ್ 30: ದನ ಮೇಯಿಸಲು ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಕಾಮುಕರನ್ನು ಎಮ್ಮೆ ಅಟ್ಟಾಡಿಸಿಕೊಂಡು ಹೋಗುವ ಮೂಲಕ ಮಹಿಳೆಯನ್ನು ರಕ್ಷಿಸಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿಗಳನ್ನು ಹಿರೇಮರಳಿಹಳ್ಳಿ ಗ್ರಾಮದ ಬಸವರಾಜ ಗಾಳೆಪ್ಪ ದಂಡಿನ್ ಹಾಗೂ ಪರಶುರಾಮ ತಮ್ಮಣ್ಣ ಹಟ್ಟಿ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಮಹಿಳೆಯು ಹಿರೇಮರಳಿಹಳ್ಳಿ ಗ್ರಾಮದ ತಮ್ಮ ಜಮೀನಿನ ಬದುವಿನ ಹತ್ತಿರವಿರುವ ನೀಲಗಿರಿ ತೋಪಿನಲ್ಲಿ ದನ ಮೇಯಿಸುತ್ತಿದ್ದಾಗ ಬಸವರಾಜ ಅಸಭ್ಯವಾಗಿ ವರ್ತಿಸಿದ್ದಾನೆ.
ಈತನಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ಮಹಿಳೆಗೆ ಇನ್ನೋರ್ವ ಆರೋಪಿ ಪರಶುರಾಮ ಎದುರಿನಿಂದ ಬಂದು ಹಲ್ಲೆ ನಡೆಸಿದ್ದಾನೆ. ಅಲ್ಲದೆ ಪ್ರತಿರೋಧ ಒಡ್ಡಿದ ಮಹಿಳೆಯ ಕತ್ತನ್ನು ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ. ಮಹಿಳೆ ಚೀರಾಡುತ್ತಿರುವುದನ್ನು ಗಮನಿಸಿದ ಎಮ್ಮೆ, ಅತ್ಯಾಚರಿಗಳಿಂದ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದು ಓಡಿಬಂದು ಆರೋಪಿಯಲ್ಲೊಬ್ಬನನ್ನು ಅಟ್ಟಾಡಿಸಿಕೊಂಡು ಹೋಗಿದೆ.

Recommended Video
ಮಹಿಳೆ ಇನ್ನೋರ್ವನಿಂದ ತಪ್ಪಿಸಿಕೊಂಡು ಓಡಿಹೋಗುವ ಸಂದರ್ಭದಲ್ಲಿ ಎಮ್ಮೆ ಇಬ್ಬರು ಆರೋಪಿಗಳ ಬೆನ್ನಟ್ಟಿ ಹೋಗಿದೆ. ಪ್ರಾಣಾಪಾಯದಿಂದ ಪಾರಾಗಿ ಬಂದ ಮಹಿಳೆ ಹಿರೇಮರಳಿಹಳ್ಳಿ ಗ್ರಾಮಸ್ಥರಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪರಶುರಾಮ ಹಟ್ಟಿಯನ್ನು ಪೋಲಿಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಬಸವರಾಜ ಪರಾರಿಯಾಗಿದ್ದಾನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications