ಉಪಚುನಾವಣೆ 2024: ಶಿಗ್ಗಾಂವ್‌ ಕ್ಷೇತ್ರದಿಂದ ಬೊಮ್ಮಾಯಿ ಪುತ್ರನಿಗೆ ಬಿಜೆಪಿ ಟಿಕೆಟ್ ಘೋಷಣೆ

ಶಿಗ್ಗಾಂವ್‌, ಅಕ್ಟೋಬರ್‌, 19: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಇನ್ನು ಇಂದು (ಅಕ್ಟೋಬರ್‌ 19) ಚನ್ನಪಟ್ಟಣ ಬಿಟ್ಟು ಉಳಿದ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಳನ್ನು ಘೋಷಿಸಿದೆ. ಅದರಲ್ಲೂ ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಮಗನಿಗೆ ಟಿಕೆಟ್‌ ನೀಡುವ ಮೂಲಕ ಕುಟುಂಬ ರಾಜಕೀಯಕ್ಕೆ ಮತ್ತೆ ಬಿಜೆಪಿ ಮಣೆ ಹಾಕಿದೆ.

ಉಪಚುನಾವಣೆ ಹಿನ್ನೆಲೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು, ಭರತ್ ಬೊಮ್ಮಾಯಿ ಅವರನ್ನು ಶಿಗ್ಗಾವಿ ಹಾಗೂ ಬಂಗಾರು ಹನುಮಂತುಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಆದರೆ, ಚನ್ನಪಟ್ಟಣಕ್ಕೆ ಅಭ್ಯರ್ಥಿ ಹೆಸರನ್ನು ಇನ್ನೂ ಘೋಷಣೆ ಆಗಿಲ್ಲ.

By-Election 2024 BJP Announces Ticket for Basavaraj Bommai s Son from Shiggaon Constituency

ಇನ್ನು ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡುವ ವಿಚಾರವಾಗಿ ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿತ್ತು. ತಂದೆ-ಮಕ್ಕಳಿಗೆ ಟಿಕೆಟ್ ಕೊಟ್ಟರೆ ಹೇಗೆ ಎಂಬು ಬಿಜೆಪಿಯ ನಾಯಕರೇ ಪ್ರಶ್ನಿಸಿದ್ದರು. ಆದರೆ, ಇದೀಗ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ.

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ, ಈ ತುಕಾರಾಂ ರಾಜೀನಾಮೆಯಿಂದ ಸಂಡೂರು ಕ್ಷೇತ್ರ ತೆರವಾಗಿತ್ತು. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿದ್ದರು. ಅವರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ.

ಆದರೆ, ಟಿಕೆಟ್ ಯಾರಿಗೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಇನ್ನು ಬಿಜೆಪಿಯು ಬೊಮ್ಮಾಯಿ ಮಗನಿಗೆ ಟಿಕೆಟ್ ನೀಡಿ ಕುಟುಂಬ ರಾಜಕೀಯಕ್ಕೆ ಮತ್ತೆ ಮಣೆ ಹಾಕಿದೆ.

ಮೂರು ಕ್ಷೇತ್ರಗಳಿಗೂ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟ ಆಗಲಿದೆ. ಇನ್ನು 2018ರ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಂಗಾರು ಹನಮಂತು ಸ್ಪರ್ಧಿಸಿ ಸೋತಿದ್ದರು. ಇದೀಗ ಮತ್ತೆ ಉಪ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಇವರು ಜನಾರ್ದನ ರೆಡ್ಡಿ ಆಪ್ತರಾಗಿದ್ದಾರೆ.

ಸಂಡೂರು ಬಿಜೆಪಿ ಟಿಕೆಟ್‌ ರೇಸ್‌ನಲ್ಲಿ ಕೆ.ಎಸ್.ದಿವಾಕರ್ ಅವರ ಹೆಸರು ಕೂಡ ಮುಂಚೂಣಿಯಲ್ಲಿತ್ತು. ಆದರೆ ಕೊನೆಯದಾಗಿ ಬಂಗಾರು ಹನಮಂತುಗೆ ಪಕ್ಷ ಮಣೆ ಹಾಕಿದೆ. ಹಾಗೆಯೇ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನವ್ಯಾ ಹರಿದಾಸ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಪ್ರಿಯಾಂಕ್ ಗಾಂಧಿ ವಾದ್ರಾ ಕಣಕ್ಕಿಳಿಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+