ಮುಖ್ಯಮಂತ್ರಿಗಳ ತವರು ಜಿಲ್ಲೆಯ ನಂದಿಹಳ್ಳಿಯಲ್ಲಿ ದಲಿತರ ಮನೆಗಳಿಗೆ ಬೆಂಕಿ: 25 ಮಂದಿ ವಿರುದ್ಧ ಪ್ರಕರಣ ದಾಖಲು

ಮನೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಭಾಗಿಯಾದ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಾವೇರಿ, ಮಾರ್ಚ್ 06: ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಕ್ಕ ಪಕ್ಕದ ಎರಡು ಮನೆಗಳಲ್ಲಿ ಕುಟುಂಬಕ್ಕೆ ಸೇರಿದ್ದ ಸುಮಾರು 12 ಮಂದಿ ನಿದ್ದೆ ಮಾಡುತ್ತಿದ್ದರು.

ನಂದಿಹಳ್ಳಿಯ ಮೇಲ್ಜಾತಿ ಗ್ರಾಮಸ್ಥರು ದಲಿತರ ಕಾಲೋನಿಯ ಮನೆಗಳಿಗೆ ನುಗ್ಗಿ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲ ಮನೆಗೆ ಬೆಂಕಿ ಹಚ್ಚಿದರು, ಬೆಂಕಿ ಪಕ್ಕದ ಮನೆಗೂ ಹರಡುತ್ತದೆ ಎಂದು ಭಾವಿಸಿದ್ದರು. ಆದರೆ, ಹೊಗೆ ಬರುತ್ತಿರುವುದನ್ನು ಕಂಡ ಮನೆಯವರು ತಕ್ಷಣ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತರು ಇದೀಗ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

Case against 25 people after Dalits houses set ablaze in Nandihalli

ಈ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದಾರೆ. ಘಟನೆ ಬೆನ್ನಲ್ಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿಯ ಹಿರಿಯ ಪೊಲೀಸ್ ಅಧಿಕಾರಿಗಳು ಇದೀಗ ರಾಣೆಬೆನ್ನೂರಿಗೆ ಬಂದಿಳಿದಿದ್ದಾರೆ. ಇಲ್ಲಿಯವರೆಗೆ ಇಬ್ಬರು ವ್ಯಕ್ತಿಗಳು ಶರಣಾಗಿದ್ದು, ಪೊಲೀಸರು ಅವರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮನೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಭಾಗಿಯಾದ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಪೊಲೀಸರು ಇನ್ನೂ ತಲೆಮರೆಸಿಕೊಂಡಿರುವ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಪ್ರಾರಂಭಿಸಿದ್ದಾರೆ. ಸೋಮವಾರ ಹೆಚ್ಚಿನ ಜನರು ತಾವೇ ಬಂದು ಶರಣಾಗುತ್ತಾರೆ ಅಥವಾ ಸಿಕ್ಕಿಬೀಳುತ್ತಾರೆ ಎಂಬ ನಂಬಿಕೆ ನಮಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.

ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಧಾರ್ಮಿಕ ಮೆರವಣಿಗೆ ಸಾಗುತ್ತಿತ್ತು. 'ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾಗಿದ್ದಾರೆ.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತ ಕುಟುಂಬಗಳು ಜಾತ್ರೆಯಲ್ಲಿ ಪಾಲ್ಗೊಳ್ಳುವಂತಿಲ್ಲ, ಮೆರವಣಿಗೆಯಲ್ಲಿ ಸೇರಬಾರದು ಎಂದಿದ್ದಾರೆ.

Case against 25 people after Dalits houses set ablaze in Nandihalli

ಇದರಿಂದ ಎರಡೂ ಕಡೆಯವರಿಂದ ಕೆಲಕಾಲ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತೆರಳಿದೆ. ಬಳಿಕ ಕಲ್ಲು , ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಇದಾದ ಮೇಲೆ ರಾತ್ರಿ ಆರೋಪಿ ಗ್ರಾಮಸ್ಥರು ದಲಿತರ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಯಾವುದೇ ದುರಂತ ಸಂಭವಿಸುವ ಮೊದಲು ನೆರೆಹೊರೆಯವರು ಸಮಯಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+