ಕರ್ನಾಟಕಕ್ಕೆ ಮತ್ತೊಂದು ಏರ್ ಪೋರ್ಟ್; ಶೀಘ್ರದಲ್ಲೇ ಸ್ಥಳ ಅಂತಿಮ

ಹಾವೇರಿ, ನವೆಂಬರ್ 02: ಕರ್ನಾಟಕದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆಯಾಗಲಿದೆ. ರಾಜ್ಯ ಸರ್ಕಾರ ಮಧ್ಯ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಸ್ಥಳವನ್ನು ಅಂತಿಮಗೊಳಿಸಲಾಗುತ್ತದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದಾರೆ. "ಹುಬ್ಬಳ್ಳಿ, ಬೆಳಗಾವಿಯಂತೆಯೇ ಮಧ್ಯ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಸರ್ಕಾರ ಬಯಸಿದೆ" ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ, "ಸಚಿವ ಸಂಪುಟ ಸಭೆಯಲ್ಲಿ ಹೊಸ ವಿಮಾನ ನಿಲ್ದಾಣದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲಾಗಿದೆ" ಎಂದು ತಿಳಿಸಿದ್ದಾರೆ.

Central Karnataka To Get New Airport Place Yet To Final

"ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಕೇಂದ್ರವಾಗುವಂತೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ" ಎಂದರು.

ಹಾವೇರಿ, ಬಳ್ಳಾರಿ, ದಾವಣಗೆರೆಯಲ್ಲಿ ವಿಮಾನ ನಿಲ್ದಾಣಗಳು ಇಲ್ಲ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಿದೆ. ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ವಿಮಾನ ನಿಲ್ದಾಣಗಳಿವೆ.

ಬೆಂಗಳೂರು, ಮಂಗಳೂರು, ಮೈಸೂರು, ಬೀದರ್, ಕಲಬುರಗಿ, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಪ್ರಸ್ತುತ ವಿಮಾನ ನಿಲ್ದಾಣಗಳಿವೆ. ಕರ್ನಾಟಕ ಸರ್ಕಾರ ಮಧ್ಯ ಕರ್ನಾಟಕದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಒಪ್ಪಿಗೆ ನೀಡಲಿದೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+