ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕಕ್ಕೆ ಮತ್ತೊಂದು ಏರ್ ಪೋರ್ಟ್; ಶೀಘ್ರದಲ್ಲೇ ಸ್ಥಳ ಅಂತಿಮ

|
Google Oneindia Kannada News

ಹಾವೇರಿ, ನವೆಂಬರ್ 02: ಕರ್ನಾಟಕದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆಯಾಗಲಿದೆ. ರಾಜ್ಯ ಸರ್ಕಾರ ಮಧ್ಯ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಸ್ಥಳವನ್ನು ಅಂತಿಮಗೊಳಿಸಲಾಗುತ್ತದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದಾರೆ. "ಹುಬ್ಬಳ್ಳಿ, ಬೆಳಗಾವಿಯಂತೆಯೇ ಮಧ್ಯ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಸರ್ಕಾರ ಬಯಸಿದೆ" ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್‌ಗೆ ಹಸ್ತಾಂತರ ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್‌ಗೆ ಹಸ್ತಾಂತರ

ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ, "ಸಚಿವ ಸಂಪುಟ ಸಭೆಯಲ್ಲಿ ಹೊಸ ವಿಮಾನ ನಿಲ್ದಾಣದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲಾಗಿದೆ" ಎಂದು ತಿಳಿಸಿದ್ದಾರೆ.

 ಮಂಗಳೂರು-ಮೈಸೂರು ನಡುವೆ ಏರ್ ಇಂಡಿಯಾ ವಿಮಾನ ಸಂಚಾರ ಮಂಗಳೂರು-ಮೈಸೂರು ನಡುವೆ ಏರ್ ಇಂಡಿಯಾ ವಿಮಾನ ಸಂಚಾರ

Central Karnataka To Get New Airport Place Yet To Final

"ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಕೇಂದ್ರವಾಗುವಂತೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ" ಎಂದರು.

ನ.18ರಿಂದ ಕಲಬುರಗಿ-ದೆಹಲಿ ನಡುವೆ ಸ್ಟಾರ್ ಏರ್ ವಿಮಾನ ಹಾರಾಟನ.18ರಿಂದ ಕಲಬುರಗಿ-ದೆಹಲಿ ನಡುವೆ ಸ್ಟಾರ್ ಏರ್ ವಿಮಾನ ಹಾರಾಟ

ಹಾವೇರಿ, ಬಳ್ಳಾರಿ, ದಾವಣಗೆರೆಯಲ್ಲಿ ವಿಮಾನ ನಿಲ್ದಾಣಗಳು ಇಲ್ಲ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಿದೆ. ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ವಿಮಾನ ನಿಲ್ದಾಣಗಳಿವೆ.

Recommended Video

ಒಬ್ಬರೇ ಬಸ್ stand ಅಲ್ಲಿ ಇದ್ರೆ ಹುಷಾರು !!! | Oneindia Kannada

ಬೆಂಗಳೂರು, ಮಂಗಳೂರು, ಮೈಸೂರು, ಬೀದರ್, ಕಲಬುರಗಿ, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಪ್ರಸ್ತುತ ವಿಮಾನ ನಿಲ್ದಾಣಗಳಿವೆ. ಕರ್ನಾಟಕ ಸರ್ಕಾರ ಮಧ್ಯ ಕರ್ನಾಟಕದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಒಪ್ಪಿಗೆ ನೀಡಲಿದೆಯೇ? ಕಾದು ನೋಡಬೇಕು.

English summary
Home and Haveri in-charge minister for Haveri district Basavaraj Bommai said that government had discussed a proposal for a new airport in Central Karnataka. Plan is to set up an airport at a location which is central to Haveri, Ballari, Davangere and Shivamogga districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X